• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆಯಾದರೆ ಸಹಿಸುವುದಿಲ್ಲ:- ಶಾಸಕ ಕಾಮತ್

Tulunadu News Posted On August 8, 2025
0


0
Shares
  • Share On Facebook
  • Tweet It

ಧರ್ಮಸ್ಥಳದ ನೇತ್ರಾವತಿ ನದಿ ತೀರದಲ್ಲಿ ಎಸ್ಐಟಿ ಈಗಾಗಲೇ ತನಿಖೆ ಕೈಗೊಂಡಿದ್ದು ಸೋಷಿಯಲ್ ಮೀಡಿಯಾಗಳಲ್ಲಿ ಕುಳಿತವರು, ತನಿಖೆ ಹೇಗೆ ನಡೆಯಬೇಕು ಎಂದು ನಿರ್ದೇಶಿಸಿ, ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆ ಆಗುವಂತಹ ಹೇಳಿಕೆ ನೀಡಿ ಅಂತಿಮ ತೀರ್ಪು ಸಹ ಕೊಟ್ಟು ಬಿಡುತ್ತಿದ್ದಾರೆ. ಇಂತಹ ಅತಿರೇಕದ ವರ್ತನೆಗಳಿಗೆ ರಾಜ್ಯ ಸರ್ಕಾರ ಕೂಡಲೇ ಕಡಿವಾಣ ಹಾಕಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಧರ್ಮಸ್ಥಳವು ರಾಜ್ಯದ ಸಾವಿರಾರು ದೇವಸ್ಥಾನಗಳ ಜೀರ್ಣೋದ್ಧಾರ, ಕೆರೆ ಅಭಿವೃದ್ಧಿ, ಹಿಂದೂ ರುದ್ರಭೂಮಿಗಳ ನವೀಕರಣ, ಸ್ತ್ರೀ ಸಬಲೀಕರಣ, ಮದ್ಯ ವಿರೋಧಿ ಶಿಬಿರ, ಮೊದಲಾದ ಸಾಮಾಜಿಕ ಕಾರ್ಯಗಳ ಮೂಲಕ ದೇಶಕ್ಕೇ ಮಾದರಿಯಾಗಿದೆ. ಇಂತಹ ಕ್ಷೇತ್ರದ ಬಗ್ಗೆ ಪೂರ್ವಾಗ್ರಹ ಪೀಡಿತ ಅಜೆಂಡಾಗಳನ್ನು ಹೊಂದಿರುವವರು ಅಪಪ್ರಚಾರ ನಡೆಸುತ್ತಿದ್ದು ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟಾಗಿ ಭಕ್ತರು ಸಹನೆ ಕಳೆದುಕೊಳ್ಳಲು ಕಾರಣವಾಗುತ್ತಿದೆ. ನಮ್ಮ ಶ್ರದ್ಧಾ ಕೇಂದ್ರಗಳ ವಿರುದ್ಧ ಯಾರು ಏನು ಮಾಡಿದರೂ ನಡೆಯುತ್ತದೆ ಎನ್ನುವ ವಾತಾವರಣ ನಿರ್ಮಿಸಲಾಗುತ್ತಿದ್ದು ಇದೇ ರೀತಿ ಬೇರೆಯವರ ಶ್ರದ್ಧಾ ಕೇಂದ್ರಗಳ ವಿರುದ್ಧ ಆಗಿದ್ದರೆ ದೇಶದಲ್ಲಿ ಏನಾಗುತ್ತಿತ್ತು? ಆದರೆ ಹಿಂದೂಗಳು ವಿಶಾಲ ಚಿಂತನೆಯುಳ್ಳವರಾಗಿದ್ದು ಎಲ್ಲವನ್ನೂ ಸಮಚಿತ್ತದಿಂದ ಸ್ವೀಕರಿಸಿದ್ದಾರೆ. ಹಾಗಂತ ಇದು ಪದೇ ಪದೇ ಪುನರಾವರ್ತನೆಯಾಗಿ ಹಿಂದೂಗಳು ಎದ್ದು ನಿಂತರೆ ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಎಚ್ಚರಿಸಿದರು.

ಈ ಹಿಂದೆ ಎಡಪಂಥೀಯರು ಹಾಗೂ ಹಿಂದೂ ವಿರೋಧಿ ಶಕ್ತಿಗಳೆಲ್ಲಾ ರಾಮಸೇತು, ತಿರುಪತಿ, ಕಾಶಿ, ಶಬರಿಮಲೈ, ಈಶಾ, ಅನಂತಪದ್ಮನಾಭ, ಸೇರಿದಂತೆ ಹಿಂದೂ ಶ್ರದ್ದಾ ಕೇಂದ್ರಗಳ ವಿರುದ್ಧ ಷಡ್ಯಂತರ ರೂಪಿಸಿದ್ದು ಇದೀಗ ಧರ್ಮಸ್ಥಳ ಅವರ ಟಾರ್ಗೆಟ್ ಆಗಿದೆ. ಎಸ್ಐಟಿ ತನಿಖೆ ಯಾವ ಹಂತಕ್ಕೆ ಬೇಕಾದರೂ ಹೋಗಲಿ. ಅಂತಿಮವಾಗಿ ಸತ್ಯಾಂಶ ಹೊರ ಬಂದು ಶ್ರೀ ಕ್ಷೇತ್ರದಲ್ಲಿ ಯಾವುದೇ ಲೋಪವಾಗಿಲ್ಲ ಎಂಬುದು ಬಹಿರಂಗವಾದರೆ, ಕ್ಷೇತ್ರದ ತೇಜೋವಧೆ ಮಾಡಿ, ಭಕ್ತರ ನಂಬಿಕೆಗಳನ್ನು ಘಾಸಿಗೊಳಿಸಿದ ದುರುಳರಿಗೆ ಯಾವ ಶಿಕ್ಷೆ ಎಂಬುದನ್ನು ಸರ್ಕಾರ ತಿಳಿಸಬೇಕು ಮತ್ತು ಕೂಡಲೇ ಈ ಎಲ್ಲಾ ವಿಚಾರಗಳನ್ನು ಬಹಳ ಗಂಭೀರವಾಗಿ ಪರಿಗಣಿಸಿ ಭಕ್ತರು ಬೀದಿಗಿಳಿಯುವ ಮುನ್ನ ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳಬೇಕು ಎಂದು ಶಾಸಕರು ಆಗ್ರಹಿಸಿದರು.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ

  • Privacy Policy
  • Contact
© Tulunadu Infomedia.

Press enter/return to begin your search