• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!

Tulunadu News Posted On September 8, 2025
0


0
Shares
  • Share On Facebook
  • Tweet It

ಮದ್ದೂರಿನಲ್ಲಿ ಗಣೇಶ ವಿಸರ್ಜನೆಯ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಿದ್ದನ್ನು ವಿರೋಧಿಸಿ ಹಿಂದೂ ಮುಖಂಡರು ಮಂಗಳವಾರ ಮದ್ದೂರು ಬಂದ್ ಗೆ ಕರೆ ನೀಡಿದ್ದಾರೆ. ಇದರೊಂದಿಗೆ ಮಂಗಳವಾರ ಸೆಪ್ಟೆಂಬರ್ 9 ರಂದು ಮದ್ದೂರು ಪಟ್ಟಣ ಸಂಪೂರ್ಣ ಸ್ತಬ್ಧವಾಗಲಿದ್ದು, ಹಿಂದೂ ಮುಖಂಡರು ಸ್ವಯಂ ಘೋಷಿತ ಬಂದ್ ಗೆ ಕರೆ ನೀಡಿದ್ದಾರೆ. ಇನ್ನು ಬುಧವಾರ ಮದ್ದೂರು ತಾಲೂಕಿನ ಎಲ್ಲಾ ಗಣೇಶ ಮೂರ್ತಿಗಳನ್ನು ಮದ್ದೂರು ಪಟ್ಟಣದಲ್ಲಿ ತಂದು ಮೆರವಣಿಗೆ ಮಾಡಿ ವಿಸರ್ಜನೆ ಮಾಡಲು ಹಿಂದೂ ಮುಖಂಡರು ತೀರ್ಮಾನಿಸಿದ್ದಾರೆ. ಡಿಜೆ ಸಹಿತ ಸಾಮೂಹಿಕ ಗಣೇಶ ವಿಸರ್ಜನೆ ನಡೆಸಲು ಕರೆ ನೀಡಲಾಗಿದೆ.

ಕಲ್ಲು ತೂರಾಟದ ಬಳಿಕ ಮದ್ದೂರು ಏಕಾಏಕಿ ಉದ್ವಿಗ್ನಗೊಂಡಿದೆ. ಈ ಹಿನ್ನಲೆಯಲ್ಲಿ ಪೊಲೀಸರನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜನೆ ಮಾಡಲಾಗಿದೆ. ಈಗಾಗಲೇ ಒಂದೂವರೆ ಸಾವಿರಕ್ಕೂ ಅಧಿಕ ಪೊಲೀಸರು ಇಲ್ಲಿ ಬಂದು ಸೇರಿದ್ದಾರೆ. ಮಂಡ್ಯ, ಬೆಂಗಳೂರು, ಮೈಸೂರು, ಹಾಸನ, ರಾಮನಗರ, ಚಾಮರಾಜನಗರ ಸೇರಿ ಹಲವು ಜಿಲ್ಲೆಗಳ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಐಜಿ ಬೋರಲಿಂಗಯ್ಯ ನೇತೃತ್ವದಲ್ಲಿ ಭದ್ರತೆ ಒದಗಿಸಲಾಗುತ್ತಿದೆ.

ಹಿಂದೂ ಮುಖಂಡರ ಪ್ರಕಾರ ” ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟ ಮಾಡಿರೋದು ಪೂರ್ವ ನಿಯೋಜಿತ. ಮಸೀದಿ ಕಡೆಯಿಂದ ಕಲ್ಲು ತೂರಾಟ ಮಾಡಲಾಗಿದೆ. ಕೂಡಲೇ ಮಸೀದಿಯ ಧರ್ಮಗುರು ಬಂಧನ ಮಾಡಬೇಕು” ಎಂದು ಹಿಂದೂ ಮುಖಂಡರು, ಕಾರ್ಯಕರ್ತರು ಮನವಿ ಮಾಡಿದ್ದಾರೆ. ಅಲ್ಲದೇ ಮಸೀದಿ ಸೀಜ್ ಮಾಡಿ ಎಂದು ಸರಕಾರಕ್ಕೆ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

ಮಹಿಳೆಯರ ಮೇಲೆ ಲಾಠಿ ಚಾರ್ಜ್

ಸೆ. 8ರಂದು ಮಹಿಳೆಯರ ಮೇಲೆ ನಡೆಸಲಾದ ಲಾಠಿಚಾರ್ಜ್ ಸಂದರ್ಭದಲ್ಲಿ ಮಹಿಳಾ ಪ್ರತಿಭಟನಾಕಾರರ ಮೇಲೂ ಹಲ್ಲೆಯಾಗಿದೆ. ಮಹಿಳೆಯೊಬ್ಬರ ಮೇಲೆ Police Constable ಬೀಸಿದ ಲಾಠಿಯೇಟಿನ ನೋವಿನಿಂದಾಗಿ ಆ ಮಹಿಳೆಯು ನೆಲಕ್ಕೆ ಕುಸಿದು ಬಾಯಿಬಿಡಿದುಕೊಂಡು ರೋದಿಸಿದ ದೃಶ್ಯಾವಳಿಗಳು ಟಿವಿ ಮಾಧ್ಯಮಗಳಲ್ಲಿ ದಿನವಿಡೀ ಬಿತ್ತರವಾಯಿತು.

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!

  • Privacy Policy
  • Contact
© Tulunadu Infomedia.

Press enter/return to begin your search