• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು – ಎಸ್ಪಿ

Tulunadu News Posted On October 3, 2025
0


0
Shares
  • Share On Facebook
  • Tweet It

ಬಂಟ್ವಾಳ : ಅಕ್ರಮ ಕಸಾಯಿಖಾನೆ ನಡೆಸಿದ ಆರೋಪದಲ್ಲಿ ಆರೋಪಿಯ ಮನೆ/ಕಸಾಯಿ ಖಾನೆಯನ್ನು ಮುಟ್ಟುಗೋಲು ಹಾಕಿದ ದ.ಕ. ಜಿಲ್ಲೆಯಲ್ಲಿ ಮೊಟ್ಟ ಮೊದಲ ಪ್ರಕರಣ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಾರಿಪಳ್ಳ ಸಮೀಪದ ಪಾಡಿ ಎಂಬಲ್ಲಿ ನಡೆದಿದೆ. ಪುದು ಗ್ರಾಮದ ಪಾಡಿ ನಿವಾಸಿ ಹಸನಬ್ಬಗೆ ಸೇರಿದ ಮನೆಯನ್ನು ಅಕ್ರಮ ಕಸಾಯಿ ಖಾನೆ ನಡೆಸಿದ ಆರೋಪದಲ್ಲಿ ಜಪ್ತಿ ಮಾಡಿ ಸರಕಾರದ ವಶಕ್ಕೆ ಪಡೆಯಲಾಗಿದೆ.

ಹಸನಬ್ಬ ವಿರುದ್ಧ ಗೋ ಕಳವು, ಗೋವಧೆಯಂತಹ ಪ್ರಕರಣ ದಾಖಲಾಗಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣಾ ಅಪರಾಧ ಕ್ರಮಾಂಕ 123/2025 ಕಲಂ 303 ಬಿ ಎನ್ ಎಸ್ ಕಲಂ 4,7,12 ಗೋ ಸಂರಕ್ಷಣಾ ಕಾಯಿದೆ ಮತ್ತು 11(ಡಿ) ಗೋಹತ್ಯೆ ನಿಷೇಧ ಕಾಯಿದೆಯಡಿ ದಾಖಲಾದ ಪ್ರಕರಣದಲ್ಲಿ ದಸ್ತಗಿರಿ ಮಾಡಿ ಎಸಿಜೆ ಮತ್ತು ಜೆ ಎಂ ಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಈತನ ವಿರುದ್ಧ 2017ನೇ ಸಾಲಿನಲ್ಲಿ ಅಪರಾಧ ಕ್ರಮಾಂಕ 65/2017 ಕಲಂ 379 ಐಪಿಸಿ ಮತ್ತು 4,5,11 ಗೋ ಸಂರಕ್ಷಣಾ ಕಾಯಿದೆ ಮತ್ತು 11(ಎಲ್) ಗೋಹತ್ಯೆ ನಿಷೇಧ ಕಾಯಿದೆ, 2008ನೇ ಸಾಲಿನಲ್ಲಿ ಅಪರಾಧ ಕ್ರಮಾಂಕ 88/2018 ಕಲಂ 379 ಐಪಿಸಿ ಮತ್ತು 4,5,11 ಗೋಸಂರಕ್ಷಣಾ ಕಾಯಿದೆ ಮತ್ತು 11(ಎಲ್) ಗೋಹತ್ಯೆ ನಿಷೇಧ ಕಾಯಿದೆಯಂತೆ ಪ್ರಕರಣಗಳು ದಾಖಲಾಗಿವೆ. ಈತನ ಕಸಾಯಿಖಾನೆಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಮಂಗಳೂರು ಸಹಾಯಕ ಆಯುಕ್ತರು ಹಾಗೂ ಉಪವಿಭಾಗೀಯ ದಂಡಾಧಿಕಾರಿಗಳಿಗೆ ಪೊಲೀಸರು ವರದಿ ಸಲ್ಲಿಸಿದ್ದರು.

ಪೊಲೀಸರ ಮನವಿಯಂತೆ ಮಂಗಳೂರು ಸಹಾಯಕ ಆಯುಕ್ತರು ಹಾಗೂ ಉಪ ವಿಭಾಗೀಯ ದಂಡಾಧಿಕಾರಿಗಳು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ-2020 ರ ಕಲಂ 8(4) 8(5) ಅಡಿಯಲ್ಲಿ ಸೆ. 25ರಂದು ಪ್ರಕರಣ ಸಂಖ್ಯೆ ಎಂ ಎ ಜಿ/ ಎಸ್ ಆರ್ 44/2025 ರಂತೆ ಠಾಣಾ ಅಪರಾಧ ಕ್ರಮಾಂಕ 123/2025ರಂತೆ ಹಸನಬ್ಬನ ವಶದಲ್ಲಿರುವ ಪುದು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾರಿಪಳ್ಳ ಪಾಡಿ ಎಂಬಲ್ಲಿರುವ ಮನೆ ನಂಬ್ರ 6-54 ಹಾಗೂ 6-54(1) ಗೆ ಒಳಪಟ್ಟ ಮನೆ/ ಅಕ್ರಮ ಕಸಾಯಿ ಕಾಣೆಯನ್ನು ಜಪ್ಪು ಮಾಡಿ ಸರಕಾರದ ವಶಕ್ಕೆ ಪಡೆಯಲಾಗಿದೆ.

ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದೇ ಮೊದಲು ಎಂದು ಜಿಲ್ಲಾ ಎಸ್ಪಿ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
  • Popular Posts

    • 1
      ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್

  • Privacy Policy
  • Contact
© Tulunadu Infomedia.

Press enter/return to begin your search