• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ…

Tulunadu News Posted On January 3, 2026
0


0
Shares
  • Share On Facebook
  • Tweet It

ಇದೊಂದು ಬಾಕಿ ಇತ್ತು. ಪರಿಸ್ಥಿತಿ ಹೀಗೆ ಮುಂದುವರೆದರೆ ಇನ್ನು ಅದ್ಯಾವ ಮಟ್ಟಕ್ಕೆ ನಮ್ಮ ದೈವಾರಾಧನೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿ ರಾಡಿ ಮಾಡಲಾಗುತ್ತದೆಯೋ ಎನ್ನುವ ಆತಂಕ ದೈವರಾಧಕರಲ್ಲಿ ಕಾಣಿಸುತ್ತಿದೆ. ಯಾಕೆಂದರೆ ಕೊರಗಜ್ಜ ಎನ್ನುವ ಸಿನೆಮಾವನ್ನು ಬೆಳ್ಳಿತೆರೆಗೆ ತರಲು ಹೊರಟಿರುವ ಅದರ ನಿರ್ಮಾಪಕರು ಕೊಟ್ಟಿರುವ ಆಫರ್ ಹಾಗೆ ಇದೆ. ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಹಂಚಿಕೊಂಡವರಿಗೆ ಕೋಟಿ ರೂಪಾಯಿ ಬಹುಮಾನದ ಆಫರ್ ಅನ್ನು ಚಿತ್ರತಂಡ ನೀಡಿದೆ. ಚೆನ್ನಾಗಿ ರೀಲ್ಸ್ ಮಾಡಿ, ಹಂಚಿಕೊಂಡು, ಅದರಲ್ಲಿ ಚಿತ್ರತಂಡ ಆಯ್ಕೆ ಮಾಡಿದವರಿಗೆ ಬಹುಮಾನ ವಿತರಣೆ ಮಾಡಲಾಗುತ್ತದೆ ಎನ್ನುವ ಮಾಹಿತಿ ಬಂದಿದೆ. ಆದರೆ ಇದಕ್ಕೆ ದೈವ ನರ್ತಕರಿಂದ ಆಕ್ರೋಶ ವ್ಯಕ್ತವಾಗಿದೆ.

ಒಂದು ವೇಳೆ ನೆಗೆಟಿವ್ ಪಬ್ಲಿಸಿಟಿ ಕೂಡ ಜನರನ್ನು ಸಿನೆಮಾದ ಕಡೆ ಆಕರ್ಷಿಸಬಹುದು ಎಂದು ಚಿತ್ರತಂಡ ಅಂದುಕೊಂಡಿದ್ದರೆ ಅದು ಕರಾವಳಿಯಲ್ಲಿ ಸಾಧ್ಯಾನಾ ಎನ್ನುವುದಕ್ಕೆ ಕಾಲವೇ ಉತ್ತರಿಸಬೇಕು.

ಸುಧೀರ್ ಅತ್ತಾವರ್ ನಿರ್ದೇಶನದ ‘ಕೊರಗಜ್ಜ’ ಸಿನಿಮಾದ ಹಾಡುಗಳು ಇತ್ತೀಚೆಗಷ್ಟೆ ಬಿಡುಗಡೆ ಆಗಿದ್ದು, ಸಿನಿಮಾದ ಹಾಡುಗಳಿಗೆ ರೀಲ್ಸ್ (Reels) ಮಾಡಿ ಹಂಚಿಕೊಂಡವರಿಗೆ ಕೋಟಿ ರೂಪಾಯಿ ಬಹುಮಾನದ ಆಫರ್ ಅನ್ನು ಚಿತ್ರತಂಡ ನೀಡಿದೆ.

ʻಕಾಂತಾರʼ ಸಿನಿಮಾದಲ್ಲಿ ದೈವ ವಿಡಂಬನೆ ಕುರಿತು ಸಾಕಷ್ಟು ಜನ ದೈವದ ವೇಷಭೂಷಣ ಹಾಕಿಕೊಂಡು ಸಿಕ್ಕಸಿಕ್ಕಲ್ಲಿ ರೀಲ್ಸ್‌ ಮಾಡುತ್ತಾ ದೈವಗಳಿಗೆ ಅಪಮಾನ ಮಾಡಿದ್ದರು. ಇದೀಗ ತುಳುನಾಡಿನ ಆರಾಧ್ಯ ದೈವವಾಗಿರುವ ಕೊರಗಜ್ಜನ ಕುರಿತು ರೀಲ್ಸ್‌ ಮಾಡಿ ಹೆಚ್ಚು ಲೈಕ್ಸ್, ವೀವ್ಸ್‌ ಗಳಿಸಿದವರಿಗೆ ಕೋಟಿ ರೂಪಾಯಿ ಬಹುಮಾನ ನೀಡುವುದಾಗಿ ಹೇಳಿರುವುದು ಖಂಡನೀಯವಾಗಿದೆ. ಈ ತಪ್ಪು ಮುಂದುವರಿದ್ರೆ, ತಪ್ಪಿತಸ್ಥರಿಗೆ ಶಿಕ್ಷೆ ನೀಡುವಂತೆ ದೈವದ ಮೊರೆ ಹೋಗುವುದಾಗಿ ದೈವ ನರ್ತಕರ ಸಂಘದ ಪ್ರಮುಖರು ಹೇಳಿದ್ದಾರೆ.

ಕರಾವಳಿ ಭಾಗದ ಕಾರಣಿಕದ ಶಕ್ತಿಯಾಗಿರುವ ಕೊರಗಜ್ಜ ದೈವದ ಕಥೆ ಆಧರಿತ ಸಿನಿಮಾ ಬಿಡುಗಡೆಗೆ ಸಿದ್ಧಗೊಂಡಿದೆ. ಚಿತ್ರದ ಪ್ರಚಾರಕ್ಕಾಗಿ ಕೊರಗಜ್ಜ ಚಿತ್ರದಲ್ಲಿರುವ 6 ಹಾಡುಗಳನ್ನು ಪ್ರೇಕ್ಷಕರಿಗೆ ತಲುಪಿಸುವ ನಿಟ್ಟಿನಲ್ಲಿ ಹಾಗೂ ಸಿನಿಮಾದ ಪ್ರಚಾರಕ್ಕಾಗಿ ಕೊರಗಜ್ಜ ರೀಲ್ಸ್ ಎಂಬ ಸ್ಪರ್ಧೆಯನ್ನು ಆಯೋಜಿಸಿದೆ. ಇದನ್ನ ಕೊಡಗು ಜಿಲ್ಲಾ ದೈವ ಆರಾಧಕರು ಮತ್ತು ದೈವ ನರ್ತಕರ ಸಂಘ ತೀವ್ರವಾಗಿ ಖಂಡಿಸಿದೆ. ಕಾನೂನು ಹೋರಾಟಕ್ಕೂ ಮುಂದಾಗುವುದಾಗಿ ದೈವ ನರ್ತಕರ ಸಂಘದ ಪ್ರಮುಖರು ತಿಳಿಸಿದ್ದಾರೆ.

 

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!

  • Privacy Policy
  • Contact
© Tulunadu Infomedia.

Press enter/return to begin your search