• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

Tulunadu News Posted On February 18, 2026
0


0
Shares
  • Share On Facebook
  • Tweet It

ನಾವು ಮನೆಗಳಲ್ಲಿ ನಾಯಿಗಳನ್ನು ಸಾಕುವುದು ಸಾಮಾನ್ಯ. ಒಂದಿಷ್ಟು ಅನುಕೂಲಸ್ಥರು ಉತ್ತಮ ತಳಿಯ ನಾಯಿಗಳನ್ನು ಸಾಕುತ್ತಾ, ಅದನ್ನು ಬಹಳ ಉತ್ತಮ ರೀತಿಯಲ್ಲಿ ನೋಡಿಕೊಳ್ಳುತ್ತಾ ನಾಯಿ ಪ್ರೀತಿಯನ್ನು ತೋರಿಸಿದರೆ, ಜನಸಾಮಾನ್ಯರು ತಮ್ಮದೇ ಮಟ್ಟದಲ್ಲಿ ನಾಯಿಗಳನ್ನು ಸಾಕುವವರೂ ಇದ್ದಾರೆ. ಇಂತಹ ನಾಯಿಗಳು ನಮ್ಮ ರಕ್ಷಣೆಗೆ ಇರಲಿ, ಕಳ್ಳಕಾಕರು ಬರುವಾಗ ಬೊಗಳಿ ನಮಗೆ ಎಚ್ಚರಿಕೆ ಕೊಡಲಿ ಎನ್ನುವ ನಿರೀಕ್ಷೆಯೂ ಇರುತ್ತದೆ. ಇನ್ನು ಹಲವು ಬಾರಿ ಮನೆಯವರು ಒಳಗೆ ಇರುವಾಗ ಯಾರಾದರೂ ಅಪರಿಚಿತರು ಮನೆಯ ಗೇಟಿನ ಬಳಿ ಬಂದರೆ ಈ ನಾಯಿಗಳು ಬೊಗಳುವ ಮೂಲಕ ಮನೆಯೊಡತಿಗೆ ಸಿಗ್ನಲ್ ಕೊಡುತ್ತವೆ. ಆಗ ಮನೆಯ ಒಳಗಿದ್ದವರು ಹೊರಗೆ ಬಂದು ನಾಯಿಗೆ ಬೊಗಳದೇ ಇರಲು ತಮ್ಮದೇ ಶೈಲಿಯಲ್ಲಿ ಸೂಚನೆ ಕೊಟ್ಟು ಅತಿಥಿಗಳನ್ನು ಮನೆಯ ಒಳಗೆ ಕರೆ ತರುತ್ತೇವೆ. ಅದನ್ನು ಮೀಟರ್ ರೀಡಿಂಗ್ ಗಾಗಿ ಬರುವ ಸಾಮಾನ್ಯ ನೌಕರರ ವಿಷಯದಲ್ಲಿಯೂ ನಾವು ಅಷ್ಟೇ ಕಾಳಜಿಯನ್ನು ವಹಿಸುವ ಅಗತ್ಯ ಇದೆ.
ಮೆಸ್ಕಾಂ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವ ವ್ಯಕ್ತಿ ಮೇಲೆ ಸಾಕು ನಾಯಿ ದಾಳಿ ಮಾಡಿದ ಘಟನೆ ನಡೆದಿದ್ದು, ದಾಳಿಗೊಳಗಾದ ವ್ಯಕ್ತಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಗಳೂರು ತಾಲೂಕಿನ ಮೂಲೂರು ಇರಾ ನಿವಾಸಿ ಸಂಪತ್ ಎಂಬುವವರ ಮೇಲೆ ನಾಯಿ ದಾಳಿ ಮಾಡಿದೆ.
ಅವರು ಮೆಸ್ಕಾಂ ಇಲಾಖೆಯ ಹೊರಗುತ್ತಿಗೆಯಲ್ಲಿ ಸೂಪರ್ ವೈಸರ್ ವೃತ್ತಿಯಲ್ಲಿದ್ದಾರೆ. ಆದರೆ ಕಳೆದ ಹತ್ತು ತಿಂಗಳಿನಿಂದ ಮೀಟರ್ ರೀಡಿಂಗ್ ಮಾಡುವ ಸಿಬ್ಬಂದಿ ಇಲ್ಲದೇ ಇರುವ ಕಾರಣಕ್ಕಾಗಿ ಬಂಟ್ವಾಳ ತಾಲೂಕಿನ ರಾಯಿ ಗ್ರಾಮ ಪಂಚಾಯತ್ ಕೈತ್ರೋಡಿ ಕ್ವಾಟರ್ಸ್ ವ್ಯಾಪ್ತಿಯಲ್ಲಿ ಮನೆ ಮನೆಗೆ ತೆರಳಿ ಮೀಟರ್ ರೀಡಿಂಗ್ ಕೆಲಸ ಮಾಡುತ್ತಿದ್ದರು. ಸೋಮವಾರ ಕೈತ್ರೋಡಿ ಎಂಬಲ್ಲಿ ಮನೆಯೊಂದರ ಮೀಟರ್ ರೀಡಿಂಗ್ ಮಾಡಿ ಮುಖ್ಯ ರಸ್ತೆಯಲ್ಲಿ ನಡೆದುಕೊಂಡು ಬೈಕ್ ನ ಬಳಿ ತೆರಳುತ್ತಿದ್ದಂತೆ ಮನೆಯಂಗಳದಲ್ಲಿದ್ದ ನಾಯಿಯೊಂದು ಸಂಕೋಲೆಯನ್ನು ತುಂಡರಿಸಿ ಬಂದು ದಾಳಿ ಮಾಡಿದೆ.
ಸಂಪತ್ ಅವರ ಬಲ ಕೈ ಹಾಗೂ ಕಾಲಿಗೆ ಬಲವಾದ ಗಾಯವಾಗಿದ್ದು, ಮಂಗಳೂರು ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ.
ಆದಷ್ಟು ನಾಗರಿಕರು ತಮ್ಮ ಮನೆಗೆ ಮೀಟರ್ ರೀಡಿಂಗ್ ಹೀಗೆ ಯಾವುದೇ ಕೆಲಸಕ್ಕೆ ಬರುವ ಹೊರಗುತ್ತಿಗೆಯ ಬಡಪಾಯಿ ನೌಕರರ ಮೇಲೆ ಮನೆಯ ನಾಯಿ ದಾಳಿ ಮಾಡದಂತೆ ಎಚ್ಚರಿಕೆ ಕ್ರಮ ತೆಗೆದುಕೊಂಡರೆ ನಿಜಕ್ಕೂ ಅದೊಂದು ಮಾನವೀಯ ಕಾಳಜಿ ಎಂದು ಕರೆಸಿಕೊಳ್ಳುತ್ತದೆ.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search