ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
ಬೆಳ್ತಂಗಡಿ ಕಣಿಯೂರು ಗ್ರಾಮದ ಮುದಲ್ತಿಯಾರ್ ಎಂಬಲ್ಲಿ ಅಕ್ರಮವಾಗಿ ಬ್ಯಾರಲ್ ಮತ್ತು ಕ್ಯಾನ್ ಗಳಲ್ಲಿ ಡೀಸಿಲ್ ಶೇಖರಿಸಿಟ್ಟುರುವುದಾಗಿ ಮಾಹಿತಿ ಬಂದ ಮೇರೆಗೆ, ಉಪ್ಪಿನಂಗಡಿ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರು ಹಾಗೂ ಉಪ್ಪಿನಂಗಡಿ ಠಾಣಾಧಿಕಾರಿಗಳನ್ನು ಕರೆಸಿ ಬೆಳ್ತಂಗಡಿ ಉಪ ವಿಭಾಗದ ಡಿವೈಎಸ್ಪಿ ರೋಹಿಣಿ ಸಿ.ಕೆ ದಾಳಿ ನಡೆಸಿದ್ದು, ನಾಲ್ಕು ಸಾವಿರ ಲೀಟರ್ ಡೀಸೆಲ್ ಸಂಗ್ರಹವನ್ನು ಪತ್ತೆ ಮಾಡಿದ್ದಾರೆ.

ಮಾರ್ಚ್ 9ರಂದು ರಾತ್ರಿ ಪೊಲೀಸರು ಕಣಿಯೂರು ನಿವಾಸಿ ಜಗದೀಶ್ (35) ಎಂಬಾತನ ಮನೆಯ ಸಮೀಪದ ಶೆಡ್ ನಲ್ಲಿ ತಪಾಸಣೆ ನಡೆಸಿದಾಗ, ಸುಮಾರು 200 ಲೀಟರ್ ಸಾಮರ್ಥ್ಯದ 20 ಬ್ಯಾರೆಲ್ ಹಾಗೂ ಸುಮಾರು 35 ಲೀಟರ್ ಸಾಮರ್ಥ್ಯದ 05 ಕ್ಯಾನ್ ಗಳಲ್ಲಿ ಒಟ್ಟು ಸುಮಾರು 4,175 ಲೀಟರ್ ಡೀಸೆಲ್ ತುಂಬಿಟ್ಟಿರುವುದು ಕಂಡುಬಂದಿರುತ್ತದೆ. ಸ್ಥಳದಲ್ಲಿ ಇನ್ನಷ್ಟು ಖಾಲಿ ಬ್ಯಾರೆಲ್ ಗಳು ಹಾಗೂ ಖಾಲಿ ಕ್ಯಾನ್ ಮತ್ತು ಇತರೇ ಸೊತ್ತುಗಳು ಪತ್ತೆಯಾಗಿವೆ.

ಸದ್ರಿ ಸೊತ್ತುಗಳ ಅಂದಾಜು ಮೌಲ್ಯ 3,50,000 ರೂ.ಗಳಾಗಿದ್ದು, ಪ್ರಕರಣದ ಆರೋಪಿ ಜಗದೀಶ್ ಎಂಬಾತನಲ್ಲಿ ಈ ಬಗ್ಗೆ ವಿಚಾರಿಸಿದಾಗ, ಇವುಗಳನ್ನು ಯಾವುದೇ ಪರವಾನಿಗೆ ಹೊಂದದೇ ಹಾಗೂ ಯಾವುದೇ ಸುರಕ್ಷತಾ ಕ್ರಮಗಳನ್ನು ಪಾಲಿಸದೇ ಅಕ್ರಮವಾಗಿ ಶೇಖರಿಸಿಟ್ಟಿರುವುದು ತಿಳಿದುಬಂದಿದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 35/2026, ಕಲಂ: THE BHARATIYA NYAYA SANHITA (BNS), 2023 (U/s-287); ESSENTIAL COMMODITIES ACT, 1955
(U/s-3,7); PETROLEUM ACT, 1934 (U/s-23); THE BHARATIYA NYAYA SANHITA (BNS), 2023 (U/s-3(5)) 3 ថថ ದಾಖಲಿಸಲಾಗಿದೆ.









