ಸಿದ್ದರಾಮಯ್ಯ ಅವರಿಂದ 300 ಕೋಟಿ ರೂ. ಮೌಲ್ಯದ ಜಮೀನು ಡಿನೋಟಿಫಿಕೇಶನ್?
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಒಂದೇ ವರ್ಷ ಬಾಕಿ ಇರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಡಿನೋಟಿಫಿಕೇಶನ್ ಭೂತ ಎದುರಾಗಿದೆ.
ಮಹತ್ತರ ಬೆಳವಣಿಗೆಯೊಂದರಲ್ಲಿ ಬಿಜೆಪಿ ಸಿದ್ದರಾಮಯ್ಯ ಡಿನೋಟಿಫಿಕೇಶನ್ ಕುರಿತು ಗಂಭೀರ ಆರೋಪ ಮಾಡಿದ್ದು, “ಸಿದ್ದರಾಮಯ್ಯ ಅವರು ಬೆಂಗಳೂರು ಉತ್ತರ ತಾಲೂಕಿನ ಭೂಪಸಂದ್ರದಲ್ಲಿ 300 ಕೋಟಿ ರೂ. ಮೌಲ್ಯದ 6.26 ಎಕರೆ ಜಮೀನು ಡಿನೋಟಿಫೈ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಅಷ್ಟೇ ಅಲ್ಲ, ಡಿನೋಟಿಫಿಕೇಶನ್ ಕುರಿತು ಬಿಜೆಪಿ ವಕ್ತಾರ ಗೋ. ಮಧುಸೂದನ್, ಶಾಸಕ ರವಿ ಸುಬ್ರಹ್ಮಣ್ಯ, ವಿಧಾನ ಪರಿಷತ್ ಸದಸ್ಯ ಬಿ.ಜೆ.ಪುಟ್ಟಸ್ವಾಮಿ ಸುದ್ದಿಗೋಷ್ಠಿ ನಡೆಸಿ ದಾಖಲೆ ಬಿಡುಗಡೆಗೊಳಿಸಿದ್ದು, ಸಿದ್ದರಾಮಯ್ಯ ಅವರಿಗೆ ಇದರಿಂದ ಹಿನ್ನಡೆಯಾಗುತ್ತದೆ ಎಂದೇ ವಿಶ್ಲೇಷಿಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮದು ಭ್ರಷ್ಟಾಚಾರರಹಿತ ಸರ್ಕಾರ ಎಂದು ಹೇಳುತ್ತಾರೆ. ಆದರೆ ಭೂಪಸಂದ್ರದಲ್ಲಿ ಕಾನೂನು ಉಲ್ಲಂಘಿಸಿ ಖಾಸಗಿಯವರಿಗೆ ಜಮೀನು ಪರಭಾರೆ ಮಾಡಿದ್ದಾರೆ. ನಿಯಮ ಉಲ್ಲಂಘನೆ ಕುರಿತು ಬುಧವಾರ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಲಾಗುವುದು ಎಂದು ಮೇಲ್ಮನೆ ಸದಸ್ಯ ಬಿ.ಜೆ.ಪುಟ್ಟಸ್ವಾಮಿ ತಿಳಿಸಿದರು.
Leave A Reply