ಮಮತಾ ಬ್ಯಾನರ್ಜಿಯಿಂದ ಮತ್ತೊಂದು ಅಪಸವ್ಯ ಮೊಬೈಲ್ ನಂಬರ್ ಗೆ ಆಧಾರ ಲಿಂಕ್ ಮಾಡಲ್ಲ ಎಂದ ಬಂಗಾಳ ಸಿಎಂ
ಕೋಲ್ಕತ್ತಾ: ಕೇಂದ್ರ ಸರ್ಕಾರದ ನೋಟು ನಿಷೇಧವನ್ನು ವಿರೋಧಿಸಿ ಪಡೆ ಕಟ್ಟಿ ನಗಪಾಟಲಿಗೀಡಾಗಿದ್ದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ. ಪಶ್ಚಿಮ ಬಂಗಾಳದಲ್ಲಿ ದಸರಾ ಹಿನ್ನೆಲೆ ದುರ್ಗಾ ಪೂಜೆಗೆ ಅಡ್ಡಲಾಗಿ ನಿಂತು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಮಮತಾ. ಕೇಂದ್ರ ಸರ್ಕಾರದ ವಿರುದ್ಧ ಆಗಾಗ ಗುಟುರು ಹಾಕುವ ಮಮತಾ ಬ್ಯಾನರ್ಜಿ ಈ ಮತ್ತೊಂದು ಅಪಸವ್ಯ ತೆಗೆದಿದ್ದಾರೆ.
ಹೌದು, ಕೇಂದ್ರ ಸರ್ಕಾರ ಮೊಬೈಲ್ ಸಂಖ್ಯೆಗೆ ಆಧಾರ್ ಸಂಖ್ಯೆಯನ್ನು ಕಡ್ಡಾಯಗೊಳಿಸಿರುವ ಆದೇಶ ಧಿಕ್ಕರಿಸಲು ಹೊರಟಿರುವ ಮಮತಾ ಬ್ಯಾನರ್ಜಿ, “ತನ್ನ ಮೊಬೈಲ್ ಸಂಪರ್ಕ ಕಡಿತಗೊಳಿಸಿದರೂ ಸರಿಯೇ, ಮೊಬೈಲ್ ನಂಬರ್ ಗೆ ಆಧಾರ್ ಸಂಖ್ಯೆ ಜೋಡಣೆ ಮಾಡಲ್ಲ” ಎಂದು ಉದ್ಧಟತನದ ಹೇಳಿಕೆ ನೀಡಿದ್ದಾರೆ.
ಸಾರ್ವಜನಿಕರ ಹಕ್ಕು ಹಾಗೂ ಖಾಸಗಿತನದ ವಿಷಯಗಳಲ್ಲಿ ಕೇಂದ್ರ ಸರ್ಕಾರ ವಿನಾಕಾರಣ ಮಧ್ಯಸ್ಥಿಕೆ ವಹಿಸುತ್ತಿದೆ. ಆಧಾರ್ ಸಂಖ್ಯೆ ಮೊಬೈಲ್ ನಂಬರಿಗೆ ಲಿಂಕ್ ಮಾಡುವ ಆದೇಶವೇ ಸರಿಯಿಲ್ಲ. ನಾನಂತೂ ಲಿಂಕ್ ಮಾಡಿಸುವುದಿಲ್ಲ ಎಂದಿದ್ದಾರೆ.
ಕೇಂದ್ರ ಸರ್ಕಾರ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದೆ. ನರೇಂದ್ರ ಮೋದಿ ಹಾಗೂ ಬಿಜೆಪಿಯನ್ನು ಪ್ರಶ್ನಿಸಿದವರ ವಿರುದ್ಧ ಆದಾಯ ತೆರಿಗೆ ಇಲಾಖೆ ಹಾಗೂ ಸಿಬಿಐ ಅಸ್ತ್ರ ಬಳಸಲಾಗುತ್ತಿದೆ ಎಂದು ಪಕ್ಷದ ಸಭೆಯಲ್ಲಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.
ಆದರೆ ಕೇಂದ್ರ ಸರ್ಕಾರವನ್ನು ವಿರೋಧಿಸುವ ಭರದಲ್ಲಿ ಮಮತಾ ಬ್ಯಾನರ್ಜಿ ಇಂಥ ಉದ್ಧಟತನದ ಹೇಳಿಕೆ ನೀಡುವುದು ಎಷ್ಟರಮಟ್ಟಿಗೆ ಸಮಂಜಸ ಎನ್ನುವುದೇ ಪ್ರಶ್ನೆಯಾಗಿದೆ.
Leave A Reply