ಧರ್ಮಸ್ಥಳಕ್ಕೆ ಪ್ರಧಾನಿ ಮೋದಿ- ಭದ್ರತಾ ದೃಷ್ಟಿಯಿಂದ ಭಾನುವಾರ ಮಂಜುನಾಥ ಸ್ವಾಮಿಯ ದರ್ಶನಕ್ಕೆ ಅವಕಾಶವಿರುವುದಿಲ್ಲ!
ಪ್ರಧಾನಿಯಾದ ಬಳಿಕ ಮೋದಿ ಅವರು ಭಾನುವಾರ ಪುಣ್ಯಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ. ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಅಕ್ಟೋಬರ್ 28ರ ಶನಿವಾರದಿಂದ, ಅಕ್ಟೋಬರ್ 29ರವರೆಗೆ ಭಕ್ತಾದಿಗಳಿಗೆ ಮಂಜುನಾಥ ಸ್ವಾಮಿಯ ದರ್ಶನ ಸಾಧ್ಯವಿಲ್ಲ.
ಭದ್ರತೆಯ ದೃಷ್ಟಿಯಿಂದ ಶನಿವಾರ ಮಧ್ಯಾಹ್ನ 2 ಗಂಟೆಯಿಂದ ಭಾನುವಾರ ಮಧ್ಯಾಹ್ನ 2 ಗಂಟೆಯವರೆಗೆ ಭಕ್ತಾದಿಗಳಿಗೆ ಕ್ಷೇತ್ರದ ಸ್ವಾಮಿಯ ದರ್ಶನಕ್ಕೆ ಅವಕಾಶ ಇರುವುದಿಲ್ಲ ಎಂದು ಶ್ರೀಕ್ಷೇತ್ರ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ಭರದ ಸಿದ್ಧತೆ ನಡೆಯುತ್ತಿದೆ. ಅಕ್ಟೋಬರ್ 29ರಂದು ಬೆಳಿಗ್ಗೆ 11.30ಕ್ಕೆ ಮೋದಿ ಮಂಜುನಾಥ ಸ್ವಾಮಿಯ ದರ್ಶನ ಪಡೆಯಲಿದ್ದಾರೆ. ಬಳಿಕ ಉಜಿರೆಗೆ ತೆರಳಲಿರುವ ಮೋದಿ ಎಸ್‍ಡಿಎಂ ಮೈದಾನದಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಯೋಜನೆಯ ಬೃಹತ್ ಕಾರ್ಯಕ್ರಮವನ್ನು ಉದ್ಘಾಟಿಸಿ ಭಾಷಣ ಮಾಡಲಿದ್ದಾರೆ.
ಮೋದಿ ಪ್ರವಾಸ ಹಿನ್ನೆಲೆಯಲ್ಲಿ ಭದ್ರತೆಗಾಗಿ ಹತ್ತು ಎಸ್‍ಪಿ ಶ್ರೇಣಿಯ ಅಧಿಕಾರಿಗಳು, ಡಿವೈಎಸ್‍ಪಿ, ಇನ್ಸ್‍ಪೆಕ್ಟರ್, ಪಿಎಸ್‍ಐ ಸೇರಿದಂತೆ 150 ಮಂದಿ ಅಧಿಕಾರಿಗಳು, ಎರಡು ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. ನಕ್ಸಲ್ ಚಟುವಟಿಕೆ ಇರೋ ಧರ್ಮಸ್ಥಳ, ಬೆಳ್ತಂಗಡಿ ಪರಿಸರದ ದಟ್ಟ ಕಾಡಲ್ಲಿ ನಕ್ಸಲ್ ನಿಗ್ರಹ ದಳದ 25 ತಂಡಗಳು ಕೂಂಬಿಂಗ್ ಕಾರ್ಯಾಚರಣೆ ನಡೆಸಿದೆ.
Leave A Reply