ಕಾಶ್ಮೀರದಲ್ಲಿ ಲಷ್ಕರೆ ತಯ್ಯಬಾ ಉಗ್ರನ ಹತ್ಯೆ
Posted On October 29, 2017
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಸಿಬ್ಬಂದಿ ಬೆಳಗ್ಗೆಯೇ ಉಗ್ರರ ವಿರುದ್ಧ ಕಾರ್ಯಾಚರಣೆ ಕೈಗೊಂಡಿದ್ದು, ಲಷ್ಕರೆ ತಯ್ಯಬಾ ಉಗ್ರ ಸಂಘಟನೆಯ ಒಬ್ಬ ಉಗ್ರನನ್ನು ಹೊಡೆದುರುಳಿಸಿದ್ದಾರೆ.
ಬಂಡಿಪೋರ್ ಜಿಲ್ಲೆಯ ಹಜೀನ್ ಪ್ರದೇಶದಲ್ಲಿ ಉಗ್ರರ ಚಲನವಲನ ಆಧರಿಸಿ ಕಾರ್ಯಾಚರಣೆ ಕೈಗೊಂಡು ಒಬ್ಬನನ್ನು ಹತ್ಯೆ ಮಾಡಿದ್ದಾರೆ.
ಸೇನಾ ಪಡೆ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದು , ಉಗ್ರರು ಸಹ ಪ್ರತಿ ದಾಳಿ ಮಾಡಿದ್ದಾರೆ. ಆಗ ನಡೆದ ಗುಂಡಿನ ದಾಳಿಯಲ್ಲಿ ಉಗ್ರನ ಹತ್ಯ ಮಾಡಲಾಗಿದೆ. ಭಾರತೀಯ ಸೈನಿಕರಿಗೆ ಯಾವುದೇ ಗಾಯ ಸಂಭವಿಸಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಆದಾಗ್ಯೂ ಉಗ್ರನ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಉಗ್ರನಿಂದ ಶಸ್ತ್ರಾಸ್ತ್ರ ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
- Advertisement -
Trending Now
ಕೆಆರ್ ಎಸ್ ರಸ್ತೆಗೆ ಸಿದ್ಧರಾಮಯ್ಯ ಹೆಸರು ಇಡಲು ಚಿಂತನೆ, ಪರ -ವಿರೋಧ!
December 25, 2024
ರಾಜ್ಯದಲ್ಲಿ ಪ್ರಪ್ರಥಮ ಮೂಳೆ ದಾನ!
December 25, 2024
Leave A Reply