ಧರ್ಮಸ್ಥಳ ಶ್ರೀ ಮಂಜುನಾಥನಿಗೆ ವಿಶೇಷ ಪೂಜೆ ಸಲ್ಲಿಸಿದ ಮೋದಿ
Posted On October 29, 2017

ಮಂಗಳೂರು: ಒಂದು ದಿನದ ಕರ್ನಾಟಕ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಧರ್ಮಸ್ಥಳ ತಲುಪಿದ್ದು, ಶ್ರೀ ಮಂಜುನಾಥ ಸ್ವಾಮಿ ದೇವಾಲಯದಲ್ಲಿ ರುದ್ರಾಭಿಷೇಕ ನೆರವೇರಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಮಂಗಳೂರಿನಿಂದ ವಿಶೇಷ ಹೆಲಿಕಾಪ್ಟರ್ ನಲ್ಲಿ ಧರ್ಮಸ್ಥಳಕ್ಕೆ ಆಗಮಿಸಿದ ಮೋದಿ, 20 ನಿಮಿಷ ದೇವಾಲಯದಲ್ಲಿ ಪೂಜೆ ಸಲ್ಲಿಸಿದ್ದಾರೆ. ಸಾಂಪ್ರದಾಯಿಕ ಪಂಚೆ, ಶಲ್ಯ ಧರಿಸಿದ್ದು ವಿಶೇಷವಾಗಿತ್ತು.
ಧರ್ಮಸ್ಥಳಕ್ಕೆ ಆಗಮಿಸಿದ ನರೇಂದ್ರ ಮೋದಿ ಅವರಿಗೆ ವೇದಘೋಷಗಳೊಂದಿಗೆ ಸ್ವಾಗತಿಸಲಾಯಿತು. ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಹಾಗೂ ಕುಟುಂಬ ಮೋದಿಯವರನ್ನು ಆತ್ಮೀಯವಾಗಿ ಸ್ವಾಗತಿಸಿದರು.
ಮೋದಿ ಇದೇ ಮೊದಲ ಹಾಗೂ ಪ್ರಧಾನಿಯೊಬ್ಬರು ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿರುವ ಮೊದಲ ವ್ಯಕ್ತಿ ಎಂಬ ಖ್ಯಾತಿಗೂ ಭಾಜನರಾಗಿದ್ದಾರೆ. ಬಳಿಕ ಉಜಿರೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಫಲಾನುಭವಿಗಳಿಗೆ ರುಪೇ ಕಾರ್ಡ್ ವಿತರಿಸಲಿದ್ದಾರೆ.
ಚಿತ್ರಕೃಪೆ: ಎಎನ್ಐ
- Advertisement -
Leave A Reply