ಪ್ರೇಮ್ ಕುಮಾರ್ ಧುಮಾಲ್ ಹಿಮಾಚಲ ಪ್ರದೇಶ ಸಿಎಂ ಅಭ್ಯರ್ಥಿ
ಶಿಮ್ಲಾ: ಬಿಜೆಪಿಯವರು ಪ್ರಧಾನಿ ನರೇಂದ್ರ ಮೋದಿ ಅವರ ಖ್ಯಾತಿಯನ್ನು ಬಳಸಿಯೇ ಎಲ್ಲ ಚುನಾವಣೆ ಎದುರಿಸುತ್ತಾರೆ ಎಂಬ ಆರೋಪವನ್ನು ಬಿಜೆಪಿ ಸುಳ್ಳು ಮಾಡಿದ್ದು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿದೆ.
ಚುನಾವಣೆಗೆ ದಿನಗಣನೆ ಆರಂಭವಾದ ಬೆನ್ನಲ್ಲೇ, ಪ್ರೇಮ್ ಕುಮಾರ್ ಧುಮಾಲ್ ಅವರನ್ನು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಘೋಷಿಸಿದ್ದಾರೆ.
ಹಿಮಾಚಲ ಪ್ರದೇಶದ ಕಂಗ್ರಾದಲ್ಲಿ ಏರ್ಪಡಿಸಿದ್ದ ಸಾರ್ವಜನಿಕ ಸಭೆಯಲ್ಲಿ ಅಮಿತ್ ಶಾ ಧುಮಾಲ್ ಅವರ ಹೆಸರು ಘೋಷಿಸಿದ್ದರು. ಧುಮಾಲ್ 1998-2003 ಹಾಗೂ 2008-2012ರ ಅವಧಿಯಲ್ಲಿ ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದಾರೆ.
ಧುಮಾಲ್ ಅವರಿಗೆ ಪ್ರಧಾನಿ ಮೋದಿ ಶುಭಾಶಯ ತಿಳಿಸಿದ್ದು, ನ.9ರಂದು ಚುನಾವಣೆ ನಡೆಯಲಿದೆ. ಇದಕ್ಕೂ ಮೊದಲು ಜೆ.ಪಿ.ನಡ್ಡಾ ಸಿಎಂ ಅಭ್ಯರ್ಥಿ ಎಂಬ ಮಾತು ಕೇಳಿಬಂದಿದ್ದವು. ಅಲ್ಲದೆ ಮೋದಿ ಮತ್ತು ಶಾ ಸಿಎಂ ಅಭ್ಯರ್ಥಿಯನ್ನು ಘೋಷಿಸದೇ ತಮ್ಮ ವರ್ಚಸ್ಸಿನಿಂದಲೇ ಚುನಾವಣೆ ಎದುರಿಸುತ್ತಾರೆ ಎನ್ನಲಾಗಿತ್ತು.
Leave A Reply