• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಈಗ ಚುನಾವಣೆ ನಡೆದರೂ ರಾಜ್ಯದಲ್ಲಿ ಬಿಜೆಪಿಗೆ ಬಹುಮತ: ಕಾಪ್ಸ್ ಸಮೀಕ್ಷೆ

TNN Correspondent Posted On November 7, 2017
0


0
Shares
  • Share On Facebook
  • Tweet It

ಬೆಂಗಳೂರು: ಕರ್ನಾಟಕದಲ್ಲಿ ಬಿಜೆಪಿ ಮಿಷನ್ 150 ಗುರಿ ನಿಗದಿಪಡಿಸಿಕೊಂಡು ಯಶಸ್ವಿಯಾಗಿ ಪರಿವರ್ತನಾ ರ್ಯಾಲಿ ಕೈಗೊಂಡಿರುವ ಬೆನ್ನಲ್ಲೇ, ಚುನಾವಣಾ ಪೂರ್ವ ಸಮೀಕ್ಷೆಯೊಂದು ಬಹಿರಂಗವಾಗಿದ್ದು, ರಾಜ್ಯದಲ್ಲಿ ಈಗ ಚುನಾವಣೆ ನಡೆದರೂ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಏರಲಿದೆ ಎಂದು ಸಮೀಕ್ಷೆಯಿಂದ ದೃಢವಾಗಿದೆ.

ಕಾಪ್ಸ್ ಎಂಬ ಸಂಸ್ಥೆ ರಾಜ್ಯಾದ್ಯಂತ ನಡೆಸಿದ ಸಮೀಕ್ಷೆಯಿಂದ ಬಿಜೆಪಿ ಈಗ ಚುನಾವಣೆ ಎದುರಿಸಿದರೂ 113 ಕ್ಷೇತ್ರಗಳಲ್ಲಿ  ಜಯಭೇರಿ ಬಾರಿಸುತ್ತದೆ ಎಂದು ಉಲ್ಲೇಖಿಸಲಾಗಿದೆ. ಇನ್ನು ಆಡಳಿತಾ ರೂಢ ಕಾಂಗ್ರೆಸ್ 85 ಹಾಗೂ ಜೆಡಿಎಸ್ ಕೇವಲ 25 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ತಿಳಿದುಬಂದಿದೆ.

ಆದಾಗ್ಯೂ ಬಿಜೆಪಿ ನಾಯಕರು ಉತ್ತರ ಕರ್ನಾಟಕದಿಂದ ಸ್ಪರ್ಧಿಸುವ ಇರಾದೆ ವ್ಯಕ್ತಪಡಿಸುತ್ತಿದ್ದು, ಕರಾವಳಿ, ಹೈದರಾಬಾದ್ ಕರ್ನಾಟಕ, ಮುಂಬೈ ಕರ್ನಾಟಕದ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಅದರಲ್ಲೂ ಹೈದರಾಬಾದ್ ಕರ್ನಾಟಕ ಭಾಗದ 25 ಕ್ಷೇತ್ರಗಳಲ್ಲಿ ಗೆಲುವಿನ ನಗೆ ಬೀರಲಿದೆ ಎಂದು ಸಮೀಕ್ಷೆ ತಿಳಿಸಿದೆ.

ಅಕ್ಟೋಬರ್ ಅಂತ್ಯದವರೆಗಿನ ಸಮೀಕ್ಷೆ ಇದಾಗಿದ್ದು, ರಾಜ್ಯದಲ್ಲಿ ಈಗಲೇ ಚುನಾವಣೆ ಘೋಷಣೆಯಾದರೆ ಯಾರನ್ನು ಗೆಲ್ಲಿಸಲು ಇಚ್ಛಿಸುತ್ತೀರಿ ಎಂಬ ಪ್ರಶ್ನೆಯೊಂದಿಗೆ ಸಂಸ್ಥೆ ಸಮೀಕ್ಷೆ ನಡೆಸಿತ್ತು.

ಸಮೀಕ್ಷೆ ಪ್ರಕಾರ ಯಾವ ಪಕ್ಷಕ್ಕೆ ಎಷ್ಟು ಸ್ಥಾನ?

ಭಾರತೀಯ ಜನತಾ ಪಕ್ಷ – 113

ಕಾಂಗ್ರೆಸ್ – 85

ಜಾತ್ಯತೀತ ಜನತಾದಳ – 25

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search