2018ಕ್ಕೆ ಅಯೋಧ್ಯೆಯಲ್ಲಿ ರಾಮಮಂದಿರ ಕಟ್ಟಡ ಆರಂಭ ನಿಶ್ಚಿತ:ವಿಎಚ್ ಪಿ
ಭುವನೇಶ್ವರ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕುರಿತ ಕ್ರೀಯಾ ಯೋಜನೆ ಸಿದ್ಧವಾಗಿದ್ದು, 2018ಕ್ಕೆ ಕಟ್ಟಡ ಕಾಮಗಾರಿ ಆರಂಭಿಸುವುದು ನಿಶ್ಚಿತ ಎಂದು ವಿಶ್ವ ಹಿಂದೂ ಪರಿಷತ್ ವಕ್ತಾರ ಸುರೇಂದ್ರ ಜೈನ್ ತಿಳಿಸಿದ್ದಾರೆ.
ಭುವನೇಶ್ವರದಲ್ಲಿ ನಡೆದ ವಿಶ್ವ ಹಿಂದೂ ಪರಿಷತ್ ಕೇಂದ್ರ ಸಮಿತಿಯ ಸಭೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಯಾವುದೇ ಸವಾಲು ಎದುರಾದರೂ 2018ರಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಆರಂಭವಾಗಲಿದೆ. ಈ ತಿಂಗಳಲ್ಲಿ ಎಲ್ಲ ಮುಖಂಡರು ಈ ಕುರಿತು ಚರ್ಚಿಸಲಿದ್ದು, ಶೀಘ್ರದಲ್ಲಿ ಸೂಕ್ತ ನಿರ್ಧಾರಕ್ಕೆ ಬರಲಿದ್ದಾರೆ ಎಂದು ಹೇಳಿದರು.
ಯಾವುದೇ ಕಾರಣಕ್ಕೂ ಇನ್ನು ಮುಂದೆ ವಿಳಂಬವಾಗಲು ಬಿಡುವುದಿಲ್ಲ. ಎಲ್ಲ ಕ್ರಮಗಳನ್ನು ಕೈಗೊಂಡು 2018ರಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಆರಂಭಿಸಲಾಗುವುದು. ನವೆಂಬರ್ 27ರಂದು ದೇಶದ ಎಲ್ಲ ರಾಜ್ಯಗಳ ಪ್ರತಿನಿಧಿಗಳ ಮತ್ತು 50 ವಿದೇಶ ಪ್ರತಿನಿಧಿಗಳ ಸಭೆ ನಡೆಯಲಿದೆ. ಸಭೆಯಲ್ಲಿ ರಾಮಮಂದಿರ ನಿರ್ಮಾಣ ಕುರಿತು ನಿರ್ಣಾಯಕ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜೈನ್ ಹೇಳಿದರು.
ಸುಪ್ರೀಂ ಕೋರ್ಟ್ ತೀರ್ಪು ಕೂಡ ವಿವಾದಿತ ಸ್ಥಳದಲ್ಲಿ ರಾಮಮಂದಿರ ನಿರ್ಮಿಸಬೇಕು ಎಂಬ ಕುರಿತು ಒಲವು ಹೊಂದಿದೆ. ಸುಪ್ರೀಂ ಕೋರ್ಟ್ ತೀರ್ಪು ನಿರೀಕ್ಷಿತವಾಗಿದ್ದು, ರಾಮ ಜನಿಸಿದ ಸ್ಥಳದಲ್ಲಿ ಭವ್ಯವಾದ ರಾಮಮಂದಿರ ನಿರ್ಮಾಣವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Leave A Reply