ಪದ್ಮಾವತಿ ಚಿತ್ರ ನಿಷೇಧಿಸುವಂತೆ ಪ್ರಧಾನಿಗೆ ಮನವಿ ಮಾಡಿದ ಇಸ್ಲಾಂ ಧರ್ಮಗುರು
Posted On November 19, 2017

ಜೈಪುರ: ಪ್ರಧಾನಿ ನರೇಂದ್ರ ಮೋದಿ ಅವರು ಪದ್ಮಾವತಿ ಚಿತ್ರವನ್ನು ನಿಷೇಧಿಸಬೇಕು ಎಂದು ರಾಜಸ್ಥಾನದ ಅಜ್ಮೀರ್ ದರ್ಗಾ ದಿವಾನ್ ಜೈನುಲ್ ಅಬೆದಿನ್ ಅಲಿ ಖಾನ್ ಮನವಿ ಮಾಡಿದ್ದಾರೆ.
ಮೇಲ್ನೋಟಕ್ಕೆ ಈ ಸಿನಿಮಾ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತದೆ ಎಂಬುದು ಸಾಬೀತಾಗಿರುವುದರಿಂದ ನಿಷೇಧ ಹೇರಬೇಕು ಎಂದಿದ್ದಾರೆ.
ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರು ತಸ್ಲಿಮಾ ನಸ್ರೀನ್, ಸಲ್ಮಾನ್ ರಶ್ದಿ, ತಾರೇಖ್ ಫತಾಹ್ ಅವರಂತೆ ವಿವಾದಾತ್ಮಕ ವ್ಯಕ್ತಿಯಾಗಿದ್ದಾರೆ. ಹಾಗಾಗಿ ಮುಸ್ಲಿಮರೆಲ್ಲರೂ ಪದ್ಮಾವತಿ ಚಿತ್ರವನ್ನು ವಿರೋಧಿಸಬೇಕು ಎಂದು ಕರೆ ನೀಡಿದ್ದಾರೆ.
ಯಾವುದೇ ಸಿನಿಮಾದಲ್ಲಿ ಇತಿಹಾಸ ತಿರುಚುವುದು ಅಪರಾಧವಾಗುತ್ತದೆ. ಹಾಗಾಗಿ ಈ ಸಿನಿಮಾ ಕುರಿತು ಕೂಲಂಕಷವಾಗಿ ಪರಿಶೀಲನೆ ಮಾಡಬೇಕು. ಯಾವುದೇ ಧರ್ಮದವರ ಭಾವನೆಗಳಿಗೆ ಧಕ್ಕೆ ತರದಿದ್ದರೆ ಮಾತ್ರ ಬಿಡುಗಡೆ ಮಾಡಬೇಕು ಎಂದು ಪ್ರಕಟಣೆ ತಿಳಿಸಿದ್ದಾರೆ.
- Advertisement -
Leave A Reply