ದೇಶದಲ್ಲಿ ಎಷ್ಟು ರೋಹಿಂಗ್ಯಾ ಮುಸ್ಲಿಮರಿದ್ದಾರೆ, ಎಷ್ಟು ಜನರನ್ನು ತಡೆದು ವಾಪಸ್ ಕಳುಹಿಸಲಾಗಿದೆ?
ಒಂದೆಡೆ ರೋಹಿಂಗ್ಯಾ ಮುಸ್ಲಿಮರನ್ನು ಭಾರತದಿಂದ ಗಡಿಪಾರು ಮಾಡಲು ಭಾರತ ಚಿಂತನೆ ನಡೆಸುತ್ತಿದ್ದರೆ, ಇನ್ನೊಂದೆಡೆ ದೇಶದಲ್ಲಿ ರೋಹಿಂಗ್ಯಾ ಮುಸ್ಲಿಮರು ಎಷ್ಟು ಜನ ಇದ್ದಾರೆ ಎಂಬ ಕುರಿತು ಮಾಹಿತಿ ಲಭ್ಯವಾಗಿದ್ದು, ಆತಂಕದ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.
ಹೌದು, ಭದ್ರತಾ ಪಡೆಯ ಮಹಾ ನಿರ್ದೇಶಕ ಕೆ.ಕೆ.ಶರ್ಮಾ ಅವರು ಭಾರತದಲ್ಲಿ 36 ಸಾವಿರ ರೋಹಿಂಗ್ಯಾ ಮುಸ್ಲಿಮರಿದ್ದು, ಅವರು ಯಾವಾಗ ಬೇಕಾದರೂ ದೇಶಕ್ಕೆ ತಲೆನೋವಾಗಲಿದ್ದಾರೆ ಎಂದು ಎಚ್ಚರಿಸಿದ್ದಾರೆ.
ಭಾರತ-ಬಾಂಗ್ಲಾದೇಶದ ಗಡಿಯಲ್ಲಿ ರೋಹಿಂಗ್ಯಾ ಮುಸ್ಲಿಮರ ನುಸುಳುವಿಕೆ ಜಾಸ್ತಿಯಾಗಿದ್ದು, ದೇಶದಲ್ಲಿ 36 ಸಾವಿರ ರೋಹಿಂಗ್ಯಾ ಮುಸ್ಲಿಮರಿದ್ದಾರೆ ಎಂದು ಗುಪ್ತಚರ ಮಾಹಿತಿಯಿಂದ ತಿಳಿದುಬಂದಿದೆ ಎಂದಿದ್ದಾರೆ.
ಆದರೂ ನಮ್ಮ ಸೈನಿಕರು ಗಡಿಯಲ್ಲಿ ಅಕ್ರಮ ವಲಸಿಗರನ್ನು ತಡೆಯುವಲ್ಲಿ ಸಿದ್ಧರಾಗಿ ನಿಂತಿದ್ದು, ಇದುವರೆಗೂ 87 ರೋಹಿಂಗ್ಯಾ ಮುಸ್ಲಿಮರ ಒಳನುಸುಳುವಿಕೆ ತಡೆಯಲಾಗಿದೆ. ಅವರಲ್ಲಿ 76 ರೋಹಿಂಗ್ಯಾ ಮುಸ್ಲಿಮರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿದ್ದಾರೆ ಎಂದು ಶರ್ಮಾ ಮಾಹಿತಿ ನೀಡಿದ್ದಾರೆ.
ಆದಾಗ್ಯೂ, ರೋಹಿಂಗ್ಯಾ ಮುಸ್ಲಿಮರು ಉಗ್ರರ ಜತೆ ನಂಟು ಹೊಂದಿದ್ದಾರೆ ಎಂಬುದು ಗಂಭೀರ ವಿಷಯವಾಗಿದ್ದು, ಈ ಕುರಿತು ಜಾಗೃತಿ ಅಗತ್ಯವಾಗಿದೆ. ನಾವು ಸಹ ಎಚ್ಚರದಿಂದ ಗಡಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಬಾಂಗ್ಲಾ ಇರಲಿ, ರೋಹಿಂಗ್ಯಾ ಮುಸ್ಲಿಮರಿರಲಿ ಯಾವುದೇ ಅಕ್ರಮ ವಲಸಿಗರನ್ನು ದೇಶದೊಳಕ್ಕೆ ಬಿಡುವುದಿಲ್ಲ ಎಂದು ತಿಳಿಸಿದ್ದಾರೆ.
ಪ್ರಸ್ತುತ ರೋಹಿಂಗ್ಯಾ ಮುಸ್ಲಿಮರ ಗಡಿಪಾರಿನ ಕುರಿತು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.
Leave A Reply