• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮತ ಯಂತ್ರದಲ್ಲಿ ಬ್ಲೂಟೂತ್ ಇದೆ ಎಂದ ಕಾಂಗ್ರೆಸ್ ಗೆ ಸುಪ್ರೀಂ ತಪರಾಕಿ, ಚುನಾವಣೆ ಆಯೋಗಕ್ಕೆ ಮತ್ತಷ್ಟು ಬಲ

TNN Correspondent Posted On December 16, 2017
0


0
Shares
  • Share On Facebook
  • Tweet It

ದೆಹಲಿ: ಗುಜರಾತ್ ಚುನಾವಣೆಯ ಸೋಲಿನ ಭೀತಿಯಲ್ಲಿರುವ ಕಾಂಗ್ರೆಸ್ ಸರ್ಕಾರ ಸೋಲನ್ನು ಎದುರಿಸಲು ಹರಸಾಹಸ ಪಡುತ್ತಿದ್ದು, ಇದೀಗ ಕಾಂಗ್ರೆಸ್ ಗೆ ಮತ್ತೊಮ್ಮೆ ಮುಖಭಂಗವಾಗಿದೆ. ಚುನಾವಣೆಯಲ್ಲಿ ಚುನಾವಣೆ ಆಯೋಗ ಬಿಜೆಪಿ ಪರ ಕಾರ್ಯ ನಿರ್ವಹಿಸುತ್ತಿದೆ, ಆದ್ದರಿಂದ ಮತಯಂತ್ರದಲ್ಲಿ ದಾಖಲಾದ ಮತಗಳಲ್ಲಿ ಶೇ.20 ರಷ್ಟನ್ನು ವಿವಿಪ್ಯಾಟ್ ಗಳ ಮೂಲಕ ಪರಿಶೀಲಿಸಬೇಕು ಎಂದು ಸುಪ್ರೀಂಗೆ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ್ದು, ಕಾಂಗ್ರೆಸ್ ಗೆ ಭಾರಿ ಮುಖಭಂಗವಾಗಿದೆ.

ಚುನಾವಣೆ ಆಯೋಗದ ವಿವೇಚನಾಧಿಕಾರದಲ್ಲಿ ಸುಪ್ರೀ ಕೋರ್ಟ್ ಮೂಗು ತೂರಿಸಲು ಆಗಲ್ಲ. ಬೇಕಿದ್ದರೇ ಚುನಾವಣೆ ಪ್ರಕ್ರಿಯೇಗಳ ಬಗ್ಗೆ ಅಸಮಾಧಾನವಿದ್ದರೇ ಅದರ ಸುಧಾರಣೆ ಬಗ್ಗೆ ಚುನಾವಣೆ ನಂತರ ಅರ್ಜಿ ಸಲ್ಲಿಸಿದರೇ ಪರಿಶೀಲಿಸಬಹುದು ಎಂದು ಹೇಳಿದೆ. ಇನ್ನು ಚುನಾವಣೆ ಆಯೋಗ ತಾರತಮ್ಯ ಮಾಡುತ್ತಿದೆ ಎಂದು ನೀವು ಮಾಡುತ್ತಿರುವ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳೇನಾದರೂ ಇವೆಯೇ ಎಂದು ಕಾಂಗ್ರೆಸ್ ವಕೀಲರಿಗೆ ಸುಪ್ರೀಂ ಕೋರ್ಟ್  ಪ್ರಶ್ನಿಸಿದೆ.

ಸುಪ್ರೀಂ ಕೋರ್ಟ್ ಪ್ರಶ್ನೆಗಳಿಗೆ ಇಂಗು ತಿಂದ ಮಂಗನಂತಾಗಿರುವ ಕಾಂಗ್ರೆಸ್ ಶೇ.10 ರಷ್ಟಾದರೂ ವಿವಿಪ್ಯಾಟ್ ಗಳನ್ನು ಪರಿಶೀಲಿಸಬೇಕು ಎಂದು ತನ್ನ ಬೇಡಿಕೆಯ ಪ್ರಮಾಣವನ್ನು ಕಡಿಮೆಗೊಳಿಸಬೇಕು ಎಂದು ಕಾಂಗ್ರೆಸ್ ಮುಖಂಡ ಅಭಿಷೇಕ್ ಮನು ಸಿಂಘ್ವಿ  ಹೇಳಿದ್ದಾರೆ.

ಕಾಂಗ್ರೆಸ್ ಗುಜರಾತ್ ಕಾರ್ಯದರ್ಶಿ ಅರ್ಜಿ ಸಲ್ಲಿಸಿರುವ ಬಗ್ಗೆಯೂ ಪ್ರಶ್ನೆ ಎತ್ತಿರುವ ಸುಪ್ರೀಂ ಕೋರ್ಟ್ ದೇಶದ ಪ್ರಮುಖ ವಿಪಕ್ಷವಾಗಿ ಕಾಂಗ್ರೆಸ್ ಏಕೆ ನೇರವಾಗಿ ಅರ್ಜಿ ಸಲ್ಲಿಸಿಲ್ಲ ಎಂದು ಪ್ರಶ್ನಿಸಿದೆ. ಇದಕ್ಕೆ ಕಾಂಗ್ರೆಸ್ ಮುಖಂಡರೇ ಉತ್ತರಿಸಬೇಕಿದೆ. ಡಿಸೆಂಬರ 9ರಂದು ಗುಜರಾತ್ ನಲ್ಲಿ ನಡೆದ ಮತದಾನದ ವೇಳೆ ವಿದ್ಯುನ್ಮಾನ ಮತಯಂತ್ರಗಳಲ್ಲಿ ಬ್ಲೂಟೂತ್ ಇದೆ ಎಂದು ಕಾಂಗ್ರೆಸ್ ಆರೋಪಿಸಿತ್ತು.

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!

  • Privacy Policy
  • Contact
© Tulunadu Infomedia.

Press enter/return to begin your search