ಮೊದಲ ಬಾರಿಗೆ ಮಂಗಳೂರಿನಲ್ಲಿ ಪ್ರಧಾನಿ ವಾಸ್ತವ್ಯ ಇಂದು
ಮಂಗಳೂರು: ಕೇರಳದಲ್ಲಿ ಓಖಿ ಚಂಡಮಾರುತದಿಂದ ಹಾನಿಗೀಡಾಗಿಡುವ ಪ್ರದೇಶಗಳಿಗೆ ಇಂದು ಭೇಟಿ ಮಾಡಲಿರುವ ಪ್ರಧಾನಿ ನರೇಂದ್ರ ಮೋದಿ ಕೇರಳ ಪ್ರವಾಸ ಮುಗಿಸಿಕೊಂಡು ರಾತ್ರಿ ಮಂಗಳೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ ಎಂದು ಸಂಸದ ನಳೀನ ಕುಮಾರ ಕಟೀಲ್ ತಿಳಿಸಿದ್ದಾರೆ.
ತಿಂಗಳ ಹಿಂದೆ ಧರ್ಮಸ್ಥಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮೋದಿ, ಈಗ ಮತ್ತೆ ಮಂಗಳೂರಿಗೆ ಆಗಮಿಸಿ ವಾಸ್ತವ್ಯ ಹೂಡುತ್ತಿರುವುದು ವಿಶೇಷ. ಕೇರಳ ಪ್ರವಾಸ ಮುಗಿಸಿ ರಾತ್ರಿ 11 ಗಂಟೆಗೆ ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ಮಂಗಳೂರು ಸರ್ಕ್ಯೂಟ್ ಹೌಸ್ ನಲ್ಲಿ ವಿಶೇಷ ವ್ಯವಸ್ಥೆ ಮಾಡಲಾಗುತ್ತಿದೆ. ನಗರದ ಒಂದು ಖಾಸಗಿ ಹೋಟೆಲ್ ನಲ್ಲೂ ಪ್ರಧಾನಿ ನರೇಂದ್ರ ಮೋದಿ ಅವರ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಸಂಸದ ನಳೀನ್ ಕುಮಾರ ಕಟೀಲ್ ಹೇಳಿದ್ದಾರೆ.
ಡಿಸೆಂಬರ್ 19 ರಂದು ಬೆಳಗ್ಗೆ ವಿಶೇಷ ವಿಮಾನದಲ್ಲಿ ಲಕ್ಷದ್ವೀಪಕ್ಕೆ ತೆರಳಲಿದ್ದಾರೆ. ಇಂದು ಗುಜರಾತ್ ಚುನಾವಣೆ ಫಲಿತಾಂಶ ಹೊರಬೀಳಲಿದ್ದು, ಫಲಿತಾಂಶದ ದಿನದಂದೆ ಪ್ರಧಾನಿ ಮೋದಿ ಮಂಗಳೂರಿನಲ್ಲಿ ವಾಸ್ತವ್ಯ ಹೂಡುತ್ತಿರುವುದು ಮಹತ್ವ ಪಡೆದಿದೆ.
Leave A Reply