ಪರೇಶ್ ಹತ್ಯೆ ಎನ್ಐಎ ತನಿಖೆಯಾಗಲಿ,ಕೇಂದ್ರ ಗೃಹ ಸಚಿವರಿಗೆ ರಾಜ್ಯ ಬಿಜೆಪಿ ನಿಯೋಗ ಮನವಿ
ದೆಹಲಿ: ಹೊನ್ನಾವರದ ಹಿಂದೂ ಯುವಕ ಪರೇಶ್ ಮೇಸ್ತ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸುವಂತೆ ಆಗ್ರಹಿಸಿ ರಾಜ್ಯ ಬಿಜೆಪಿ ಸಂಸದರ ನಿಯೋಗ ಕೇಂದ್ರ ಗೃಹ ಇಲಾಖೆ ಸಚಿವ ರಾಜನಾಥ್ ಸಿಂಗ್ ಗೆ ಮನವಿ ಸಲ್ಲಿಸಿತು.
ಯುವಕ ಪರೇಶ್ ಮೇಸ್ತ ಸಾವಿನ ಪ್ರಕರಣವನ್ನು ಸಿಬಿಐಗೆ ವಹಿಸುವುದಾಗಿ ರಾಜ್ಯ ಸರ್ಕಾರ ಘೋಷಷಿಸಿದೆ. ಆದರೆ ಈ ಕುರಿತು ಕ್ರಮ ಕೈಗೊಂಡಿಲ್ಲ. ಪರೇಶ್ ಮೇಸ್ತ ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರೂ ನಾಪತ್ತೆಯಾಗಿದ್ದಾರೆ. ಸಾಕ್ಷ್ಯ ಮುಚ್ಚಿಹಾಕಲು ರಾಜ್ಯ ಸರ್ಕಾರ ಯತ್ನಿಸಿರುವ ಶಂಕೆ ಮೂಡಿದೆ ಎಂದು ಗೃಹ ಸಚಿವರಿಗೆ ಸಂಸದರ ನಿಯೋಗ ಮನವರಿಕೆ ಮಾಡಿಕೊಟ್ಟಿತ್ತು.
ಎನ್ಐಎ ಕಚೇರಿ ಆರಂಭಿಸಿ: ಕರ್ನಾಟಕದ ಕರಾವಳಿ ಭಾಗದಲ್ಲಿನ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳು ಭಯೋತ್ಪಾದಕ ಚಟುವಟಿಕೆಗಳ ತಾಣವಾಗಿ ಬದಲಾಗುತ್ತಿವೆ. ಹಿಂದೂ ಯುವಕರ ಕೊಲೆ ನಿರಂತರ ನಡೆಯುತ್ತಿವೆ ಪಿಎಫ್ಐ ಮತ್ತು ಎಸ್ ಡಿಪಿಐ ಸಂಘಟನೆಗಳು ಭಯೋತ್ಪಾದಕ ಸಂಘಟನೆಗಳಾಗಿ ಮಾರ್ಪಟ್ಟಿವೆ. ಕರಾವಳಿಯಲ್ಲಿ ನಡೆಯುತ್ತಿರುವ ಜಿಹಾದಿ ಚಟುವಟಿಕೆಗಳಿಗೆ ಕಡಿವಾಣ ಹಾಕು ಮಂಗಳೂರಿನಲ್ಲಿ ಎನ್ಐಎ ಕಚೇರಿ ಆರಂಭಿಸಬೇಕು ಎಂದು ಮನವಿ ಮಾಡಿದರು.
ಸಂಸದರಾದ ಶೋಭಾ ಕರಂದ್ಲಾಜೆ, ನಳಿನ್ ಕುಮಾರ್ ಕಟೀಲ್, ಪಿ.ಸಿ. ಮೋಹನ್, ಸುರೇಶ್ ಅಂಗಡಿ, ಜಿ.ಎಂ. ಸಿದ್ದೇಶ್ವರ, ಬಿ.ಶ್ರೀರಾಮುಲು, ಭಗವಂತ ಖೂಬಾ ನಿಯೋಗದಲ್ಲಿ ಇದ್ದರು.
Leave A Reply