ಮಾಲೇಗಾಂವ್ ಸ್ಫೋಟ ಪ್ರಕರಣದಲ್ಲಿ ಸಾಧ್ವಿ, ಪುರೋಹಿತ್ ಅವರಿಗೆ ತಾತ್ಕಾಲಿಕ ನಿರಾಳ
ಮುಂಬೈ: 2008ರ ಮಾಲೇಗಾಂವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಹಾಗೂ ನಿವೃತ್ತ ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ಅವರ ವಿರುದ್ಧದ ದೋಷಾರೋಪವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಕೈಬಿಟ್ಟಿದ್ದು, ಇಬ್ಬರಿಗೂ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
ಆದರೂ ಕಾನೂನು ಬಾಹಿರ ಚಟುವಟಿಕೆ ನಿಯಂತ್ರಣ ಕಾಯಿದೆ ಮತ್ತು ಭಾರತೀಯ ದಂಡ ಸಂಹಿತೆಯ ಹಲವು ಸೆಕ್ಷನ್ ಗಳ ಅನ್ವಯ ವಿಚಾರಣೆ ಮುಂದುವರಿಸಲಾಗುವುದು ಎಂದು ಎನ್ಐಎ ತಿಳಿಸಿದೆ.
ಸೆ.29, 2008ರಲ್ಲಿ ಮಹಾರಾಷ್ಟ್ರ ಮಾಲೇಗಾಂವ್ ಎಂಬಲ್ಲಿ ದ್ವಿಚಕ್ರ ವಾಹನ ಬಳಿಸಿ ಬಾಂಬ್ ಸ್ಫೋಟಿಸಿದ ಕಾರಣ 7 ಮಂದಿ ಮೃತಪಟ್ಟಿದ್ದಲ್ಲದೆ 100ಕ್ಕೂ ಅಧಿಕ ಜನ ಗಾಯಗೊಂಡಿದ್ದರು.
ಪ್ರಕರಣದಲ್ಲಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಹಾಗೂ ನಿವೃತ್ತ ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ಪ್ರಮುಖ ಆರೋಪಿಗಳಾಗಿದ್ದು, ಇಬ್ಬರನ್ನೂ ಬಂಧಿಸಲಾಗಿತ್ತು. ಬಳಿಕ 2017ರ ಏಪ್ರಿಲ್ ನಲ್ಲಿ ಸಾದ್ವಿ ಪ್ರಜ್ಞಾ ಸಿಂಗ್ ಗೆ ಮದ್ರಾಸ್ ಹೈಕೋರ್ಟ್ ಹಾಗೂ ಆಗಸ್ಟ್ ನಲ್ಲಿ ಪುರೋಹಿತ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿತ್ತು. ಒಟ್ಟಿನಲ್ಲಿ ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಎನ್ಐಎ ದೋಷಾರೋಪ ಕೈ ಬಿಟ್ಟಿರುವುದು ಇಬ್ಬರೂ ಆರೋಪಿಗಳು ಪ್ರಕರಣದಲ್ಲಿ ನಿರಪರಾಧಿಗಳಾಗಿ ಹೊರಬರುತ್ತಾರೆ ಎಂಬ ಆಶಾಭಾವನೆ ಮೂಡಿದೆ.
Leave A Reply