ಬಾಲಕನಿಗೆ ಲೈಂಗಿಕ ಕಿರುಕುಳ, ಸಿಪಿಐ(ಎಂ) ಮುಖಂಡನ ವಿರುದ್ಧ ಪ್ರಕರಣ ದಾಖಲು
ಕೊಚ್ಚಿ(ಕೇರಳ): 16 ವರ್ಷದ ವಿಶೇಷ ಚೇತನ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸವಾದ) ಪಕ್ಷದ ಮುಖಂಡನ ವಿರುದ್ಧ ಫೋಕ್ಸೋ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕೇರಳದ ಕೊಜಿಕೊಡೆ ಜಿಲ್ಲೆಯ ಕಮ್ಯುನಿಸ್ಟ್ ಪಾರ್ಟಿ ಮುಖಂಡ ಮನೀಶ್ ವಿಶೇಷ ಚೇತನ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ದೂರು ನೀಡಲಾಗಿದೆ. ಅದರಂತೆ ಲೈಂಗಿಕ ಕೃತ್ಯಕ್ಕೆ ಮಕ್ಕಳ ಬಳಕೆ ಆರೋಪದಲ್ಲಿ ಕೋಯ ಲ್ಯಾಂಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸಿಪಿಎಂ ಮುಖಂಡರಾಗಿರುವ ಮನೀಶ್ ಕೀಜರಾಯೂರ್ ಪಂಚಾಯಿತಿಯ ಸದಸ್ಯರಾಗಿದ್ದಾರೆ. ಬಾಲಕನಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಆಯೋಗಕ್ಕೆ ಬಾಲಕನ ಪೋಷಕರು ದೂರು ನೀಡಿದ್ದರು. ಅದರಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಆಯೋಗ ದೂರು ದಾಖಲಿಸಿಕೊಂಡು, ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿತ್ತು.
ಮನೀಶ್ ವಿರುದ್ಧ ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆದರೆ ಆರೋಪಿ, ಕಮ್ಯುನಿಸ್ಟ್ ಪಾರ್ಟಿ ಮುಖಂಡ ಮನೀಶ್ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Leave A Reply