ನಿಯಮ ಮೀರಿ ನೇಮಕ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹೈಕೋರ್ಟ್ ನೋಟಿಸ್
ಬೆಂಗಳೂರು: ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರಕ್ಕೆ ನಿಯಮ ಮೀರಿ ವ್ಯಕ್ತಿಯೊಬ್ಬರನ್ನು ನೇಮಕ ಮಾಡಿದ ಹಿನ್ನೆಲೆಯಲ್ಲಿ ರಾಜ್ಯ ಹೈಕೋರ್ಟ್ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನೋಟಿಸ್ ಜಾರಿ ಮಾಡಿದೆ.
ಈ ಕುರಿತು ಆದರ್ಶ್ ಜಿ.ಕೆ. ಎಂಬುವವರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರು, ಸಿದ್ದರಾಮಯ್ಯ ಹಾಗೂ ನೇಮಕವಾಗಿದ್ದ ಎಕಂಬರ್ ನಾಯ್ಡು ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.
1963ರ ಕರ್ನಾಟಕ ಪೊಲೀಸ್ ಕಾಯಿದೆ ಪ್ರಕಾರ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರಕ್ಕೆ ಶೋಧನಾ ಸಮಿತಿ ಶಿಫಾರಸು ಮಾಡಿದ ಮೂವರು ಹೆಸರಲ್ಲಿ ಒಬ್ಬರನ್ನು ಆಯ್ಕೆ ಮಾಡಬೇಕು ಎಂದು 1996ರಲ್ಲಿ ಸುಪ್ರೀಂ ಕೊರ್ಟೇ ನಿರ್ದೇಶನ ನೀಡಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎಕಂಬರ್ ನಾಯ್ಡು ಅವರನ್ನು ದೂರುಗಳ ಪ್ರಾಧಿಕಾರಕ್ಕೆ ನಿಯಮ ಉಲ್ಲಂಘಿಸಿ ನೇಮಕ ಆದೇಶ ಹೊರಡಿಸಿ ಸುಪ್ರೀಂ ಕೋರ್ಟ್ ನಿರ್ದೇಶನ ಗಾಳಿಗೆ ತೂರಿದ್ದಾರೆ ಎಂದು ಅರ್ಜಿದಾರರು ಉಲ್ಲೇಖಿಸಿದ್ದಾರೆ.
ಈ ಎಲ್ಲ ಅಂಶಗಳನ್ನು ಗಮನಿಸಿದ ಹೈಕೋರ್ಟ್ ಸಿದ್ದರಾಮಯ್ಯನವರಿಗೆ ನೋಟಿಸ್ ಜಾರಿ ಮಾಡಿದ್ದು, ಮುಂದಿನ ವಿಚಾರಣೆಯಲ್ಲಿ ಯಾವುದೇ ವಾದ, ಪ್ರಶ್ನೆಗಳಿದ್ದರೆ ನ್ಯಾಯಾಲಯದಲ್ಲಿ ಮಂಡಿಸಬಹುದು ಎಂದು ಸಹ ಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.
Leave A Reply