• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗಡಿಯಲ್ಲಿ ಪಾಕ್ ಯುದ್ಧೋತ್ಸಾಹ 4 ಯೋಧರು ಹುತಾತ್ಮ, 6 ಸಾರ್ವಜನಿಕರ ಸಾವು

TNN Correspondent Posted On January 21, 2018
0


0
Shares
  • Share On Facebook
  • Tweet It

ಜಮ್ಮು ಕಾಶ್ಮೀರ: ಗಡಿ ಭಾಗದಲ್ಲಿ ಪಾಕಿಸ್ತಾನ ತನ್ನ ಪುಂಡಾಟ ಮುಂದುವರಿಸಿದೆ. ಪಾಕ್ ಪಾತಕತನ ನಾಲ್ಕನೇ ದಿನ ತಲುಪಿದ್ದು, ನಾಲ್ವರು ಯೋಧರು, 6 ಸಾರ್ವಜನಿಕರು ಸೇರಿ 10 ಜನರು ಮೃತಪಟ್ಟಿದ್ದಾರೆ. ಪಾಕಿಸ್ತಾನದ ಸೈನ್ಯ ಕಾಶ್ಮೀರದ ಸಂಬಾ, ಕತುವಾ, ರಜೌರಿ ಹಾಗೂ ಜಮ್ಮು ಗಡಿಯಲ್ಲಿ ಶೆಲ್ ದಾಳಿ ನಡೆಸಿದ್ದರಿಂದ ಇಬ್ಬರು ಭಾರತೀಯ ಯೋಧರು ಇಬ್ಬರು ಸ್ಥಳೀಯರು ಮೃತಪಟ್ಟಿದ್ದರು. 35 ಜನರು ಗಾಯಗೊಂಡಿದ್ದರು. ಬುಧವಾರ ನಡೆದ ದಾಳಿಯಲ್ಲಿ ಬಿಎಸ್ ಎಫ್ ಯೋಧ ಹಾಗೂ ಒಬ್ಬ ಬಾಲಕಿ ಬಲಿಯಾಗಿ, 8 ಜನರಿಗೆ ಗಾಯಗಳಾಗಿದ್ದವು.

ಪಾಕಿಸ್ತಾನದವರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಪಂಜಾಬ್ ನ ಸಂಗ್ರುರ್ ಜಿಲ್ಲೆಯ ಅಲಂಪೂರದ 23 ವರ್ಷದ ಯಧ ಮನದೀಪ್ ಸಿಂಗ್ ಹುತಾತ್ಮರಾಗಿದ್ದಾರೆ. ಶನಿವಾರವೂ ಪಾಕಿಸ್ತಾನ ತನ್ನ ನೀಚತನ ಮುಂದುವರಿಸಿದೆ.ಜಮ್ಮು ಕಾನಚಕ್ ವಲಯದ ಗಜನ್ಸೂ ಪ್ರದೇಶದಲ್ಲಿ ಶೆಲ್ ದಾಳಿಗೆ ಮೂವರು ಮೃತಪಟ್ಟಿದ್ದರು.

ಗಡಿಯಲ್ಲಿ ಯುದ್ಧದ ವಾತಾವರಣ, ರೆಡ್ ಅಲರ್ಟ್ ಘೋಷಣೆ

ಪಾಕಿಸ್ತಾನದ ಪದೇ ಪದೆ ಕದನ ವಿರಾಮ ಉಲ್ಲಂಘಿಸುತ್ತಿದ್ದು, ಗಡಿಯಲ್ಲಿ ಯುದ್ಧದ ವಾತಾವರಣ ನಿರ್ಮಾಣವಾಗಿದೆ.  ಪಾಕಿಸ್ತಾನದ ನಿರಂತರವಾಗಿ ಕದನ ವಿರಾಮ ಉಲ್ಲಂಘಿಸುತ್ತಿರುವ ಹಿನ್ನೆಲೆಯಲ್ಲಿ ಸುರಕ್ಷಿತ ತಾಣಗಳಿಗೆ ತೆರಳುವಂತೆ ಸಾರ್ವಜನಿಕರಿಗೆ ಭಾರತೀಯ ಅಧಿಕಾರಿಗಳು ಸೂಚಿಸಿದ್ದಾರೆ. ಪಾಕಿಸ್ತಾನದ ಪುಂಡಾಟಕ್ಕೆ ಭಯಭೀತರಾಗಿರುವ 10 ಸಾವಿರ ಜನರು ಗಡಿ ಪ್ರದೇಶದಿಂದ ವಲಸೆ ಹೋಗಿದ್ದಾರೆ ಎನ್ನಲಾಗಿದೆ. ಗಡಿಯಲ್ಲಿ ಯುದ್ಧದ ವಾತಾವರ ನಿರ್ಮಾಣವಾಗಿದ್ದರಿಂದ ಗಡಿಯಲ್ಲಿರುವ 300 ಶಾಲೆಗಳನ್ನು ಮುಚ್ಚಲು ಸೂಚಿಸಲಾಗಿದೆ.

ಆರೋಗ್ಯ ಇಲಾಖೆಯಿಂದ ಭಾರಿ ಸಿದ್ಧತೆ

ಗಡಿಯಲ್ಲಿ ನಿರಂತರವಾಗಿ ಪಾಕ್ ಅಪ್ರಚೋಧಿತ ದಾಳಿ ನಡೆಸುತ್ತಿರುವುದರಿಂದ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ಕೈಗೊಂಡಿದ್ದೆ. ತುರ್ತು ಚಿಕಿತ್ಸೆಗೆ ಬೇಕಾಗುವ ಎಲ್ಲ ಸಿದ್ಧತೆಗಳನ್ನು ಕೈಗೊಂಡಿದೆ. ಹೆಚ್ಚುವರಿಯಾಗಿ 197 ಆ್ಯಂಬುಲೆನ್ಸ್ ಗಳನ್ನು ನೀಡಲಾಗಿದೆ.

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
  • Popular Posts

    • 1
      ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • 2
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search