ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಭಯೋತ್ಪಾದಕ ಸಂಘ: ಶಿಯಾ ವಕ್ಫ ಬೋರ್ಡ್ ಅಧ್ಯಕ್ಷ
ಲಖನೌ: ಅಖಿಲ ಭಾರತೀಯ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಭಯೋತ್ಪಾದಕರ ಸಂಘಟನೆಯಾಗಿದೆ. ಅದು ಪಾಕಿಸ್ತಾನ ಮತ್ತು ಸೌದಿ ಅರೇಬಿಯಾದ ಮುಖಂಡರ ಸಲಹೆಯಂತೆ ಕಾರ್ಯ ನಿರ್ವಹಿಸುತ್ತದೆ ಎಂದು ಶಿಯಾ ವಕ್ಫ ಬೋರ್ಡ್ ಅಧ್ಯಕ್ಷ ವಾಸೀಮ್ ರಿಜ್ವಿ ಹೇಳಿದ್ದಾರೆ.
ಪಾಕಿಸ್ತಾನ ಮತ್ತು ಸೌದಿ ಅರೇಬಿಯಾದ ಮುಸ್ಲಿಂ ಭಯೋತ್ಪಾದಕ ಸಂಘಟನೆಗಳು ಭಾರತದ ಮುಸ್ಲಿಮರ ಬಗ್ಗೆ ನಿರ್ಧಾರವನ್ನು ಹೊರಡಿಸುತ್ತಾರೆ. ಅವರ ನಿರ್ಧಾರದಂತೆ ಭಾರತೀಯ ವೈಯಕ್ತಿಕ ಕಾನೂನು ಮಂಡಳಿ ಕಾರ್ಯ ನಿರ್ವಹಿಸುತ್ತಿದೆ. ಭಾರತದಲ್ಲಿ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಭಾರತದ ಸೌಹಾರ್ದಯುತ ಸಂಬಂಧವನ್ನು ಹಾಳು ಮಾಡುತ್ತಿದೆ ಎಂದು ಹೇಳಿದ್ದಾರೆ.
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಅವಕಾಶವಿದೆ. ಮಸೀದಿಯನ್ನು ಬೇರೆಡೆ ಸ್ಥಳಾಂತರಿಸಬಹುದು ಎಂದು ಹೇಳಿಕೆ ನೀಡಿದ್ದ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಸದಸ್ಯ ಮೌಲಾನಾ ಸಲ್ಮಾನ್ ಹಸ್ನಿ ನಾಡ್ವಿ ಅವರನ್ನು ಉಚ್ಛಾಟನೆ ಮಾಡಲಾಗಿತ್ತು.
ನಾಡ್ವಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕು ಎಂದು ಹೇಳಿಕೆ ನೀಡಿರುವುದನ್ನು ಬೆಂಬಲಿಸಿರುವ ಶಿಯಾ ವಕ್ಫ್ ಬೋರ್ಡ್ ಅಧ್ಯಕ್ಷ ವಾಸೀಮ್ ರಿಜ್ವಿ’ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕು. ಮಸೀದಿಯನ್ನು ಬೇರೆ ಸ್ಥಳಾಂತರಿಸುವುದು ಅದಕ್ಕೆ ಇರುವ ಏಕೈಕ ಮಾರ್ಗ ಎಂದು ಹೇಳಿದ್ದಾರೆ.
Leave A Reply