ಬೆದರಿಕೆಗೆ ಬಗ್ಗಲಿಲ್ಲ ಬಿಜೆಪಿ ಕಾರ್ಯಕರ್ತರು, ಅಕ್ರಮ ಕಸಾಯಿಖಾನೆ ಮೇಲೆ ದಾಳಿ
ಬೆಳಗಾವಿ: ಜಿಲ್ಲೆಯಲ್ಲಿರುವ ಏಳು ಅಕ್ರಮ ಕಸಾಯಿಖಾನೆಗಳನ್ನು ಮುಚ್ಚಿಸಬೇಕು ಎಂದು ಹೇಳಿದ್ದಕ್ಕೆ ಸಾಮಾಜಿಕ ಕಾರ್ಯಕರ್ತ ಸೇರಿ ಬಿಜೆಪಿ ಮುಖಂಡರಿಗೆ ಬೆದರಿಕೆ ಹಾಕಿದ್ದಕ್ಕೆ ಹೆದರದ ಬಿಜೆಪಿ ಮುಖಂಡರು, ಕಾರ್ಯಕರ್ತರು ಜಿಲ್ಲೆಯ ಅಕ್ರಮ ಕಸಾಯಿಖಾನೆಗಳ ಮೇಲೆ ದಾಳಿ ನಡೆಸಿದ್ದಾರೆ.
ಕೇಂದ್ರ ಸಚಿವೆ ಮನೇಕಾ ಗಾಂಧಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸೇರಿ ಹಲವು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಬೆಳಗಾವಿಯ ಅಕ್ರಮ ಕಸಾಯಿಖಾನೆಗಳ ಮೇಲೆ ದಾಳಿ ನಡೆಸಿದ್ದಾರೆ.
ನಗರದಲ್ಲಿರುವ ಏಳು ಅಕ್ರಮ ಕಸಾಯಿಖಾನೆಗಳನ್ನು ಮುಚ್ಚಿಸುವಂತೆ ಬಿಜೆಪಿ ಕಾರ್ಯಕರ್ತರು ದಾಳಿ ಮಾಡಿ ಎಚ್ಚರಿಕೆ ನೀಡಿದ್ದರು. ಆದರೆ ಹೀಗೆ ಎಚ್ಚರಿಕೆ ನೀಡಿದ ಕಾರಣ ಕಾಂಗ್ರೆಸ್ ಶಾಸಕ ಫಿರೋಜ್ ಸೇಠ್ ಸಹೋದರ ರಾಜು ಸೇಠ್ ಬೆದರಿಕೆ ಹಾಕಿದ್ದರು.
ಇದರಿಂದ ಕೆರಳಿದ ಬಿಜೆಪಿ ಮುಖಂಡರು ಅಕ್ರಮ ಕಸಾಯಿಖಾನೆ ಮೇಲೆ ದಾಳಿ ನಡೆಸಿದ್ದಾರೆ. ಆದರೆ ಕಸಾಯಿಖಾನೆ ಒಳಗೆ ಹೋಗಲು ಆರಂಭದಲ್ಲಿ ಪೊಲೀಸ್ ಕಮೀಷನರ್ ಬಿಟ್ಟಿರಲಿಲ್ಲ. ಇದರಿಂದ ಮತ್ತೂ ಕೆರಳಿದ ಮುಖಂಡರು ಪೊಲೀಸ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಕೋಲ್ಡ್ ಸ್ಟೋರೇಜ್ ಹೆಸರಿನಲ್ಲಿ ಅಕ್ರಮ ಕಸಾಯಿಖಾನೆ ನಡೆಸುತ್ತಿದ್ದು, ಇದಕ್ಕೆ ಸ್ಥಳೀಯ ಶಾಸಕರ ಬೆಂಬಲ ಇದೆ. ಹಾಗಾಗಿ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ಸಚಿವೆ ಮನೇಕಾ ಗಾಂಧಿ ತಿಳಿಸಿದ್ದಾರೆ.
Leave A Reply