ಸಿದ್ದರಾಮಯ್ಯ ಕ್ಷೇತ್ರದಲ್ಲೇ ಸೌಲಭ್ಯಕ್ಕಾಗಿ ಬೀದಿಗಿಳಿದ ವಿದ್ಯಾರ್ಥಿಗಳು, ಇದೇ ಅಲ್ಲವೇ ದಾರಿದ್ರ್ಯ

ಮೈಸೂರು: ದೇಶಾದ್ಯಂತ ಪ್ರಧಾನಿ ನರೇಂದ್ರ ಮೋದಿ ಅವರ ಸ್ವಚ್ಛ ಭಾರತ ಕಲ್ಪನೆಯ ಸಾಕಾರಕ್ಕೆ ಸಾರ್ವಜನಿಕರು ಕೈ ಜೋಡಿಸುವ ಮೂಲಕ ಯಶಸ್ವಿಗೆ ಕಾರಣೀಭೂತರಾಗಿದ್ದಾರೆ. ಆದರೆ ರಾಜ್ಯದಲ್ಲಿ ಮಾತ್ರ ಸ್ವಚ್ಛ ಭಾರತ ಕಲ್ಪನೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಡಳಿತದಲ್ಲಿ ಮರಿಚಿಕೆಯಾದಂತಾಗಿದೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಪ್ರತಿನಿಧಿಸುವ ಮೈಸೂರು ಜಿಲ್ಲೆಯ ಶಾಲೆಯೊಂದರ ವಿದ್ಯಾರ್ಥಿಗಳು ಶೌಚಾಗೃಹಕ್ಕಾಗಿ ಪರದಾಡಿ, ಬೇಸತ್ತು ಇದೀಗ ಪ್ರತಿಭಟನೆಯ ಹಾದಿ ತುಳಿದಿದ್ದಾರೆ. ಇದು ಸಿದ್ದರಾಮಯ್ಯ ಸರ್ಕಾರದ ನಿರ್ಲಕ್ಷ್ಯ ಧೋರಣೆಗೆ ಸಾಕ್ಷಿಯಾಗಿ ನಿಂತಿದೆ. ಅಲ್ಲದೇ ಸ್ವಚ್ಛ ಭಾರತ ಕಲ್ಪನೆಯನ್ನು ಸಿದ್ದರಾಮಯ್ಯ ಕ್ಷೇತ್ರದಲ್ಲೇ ಮಣ್ಣು ಪಾಲು ಮಾಡಲಾಗಿದೆ ಎಂಬುದು ಸಾಬೀತಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಜಿಲ್ಲೆ ಮೈಸೂರಿನ ನಂಜನಗೂಡು ತಾಲೂಕಿನ ಕಾರ್ಯ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಶೌಚಾಲಯ ಸೇರಿ ಸೂಕ್ತ ಸೌಲಭ್ಯ ಒದಗಿಸಲು ಆಗ್ರಹಿಸಿ ಬೀದಿಗಿಳಿದು ಪ್ರತಿಭಟನೆ ನಡೆಸುವ ಸ್ಥಿತಿ ನಿರ್ಮಾಣವಾಗಿದೆ.
ಶಾಲೆಗೆ ಸೂಕ್ತ ಸೌಲಭ್ಯ ಕಲ್ಪಿಸಿ ಎಂದು ಆಗ್ರಹಿಸಿ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಬಿಸಿಲಿನಲ್ಲೇ ಪ್ರತಿಭಟನೆ ನಡೆಸಿದ್ದಾರೆ. ಶಾಲೆಯಲ್ಲಿ ಶೌಚಾಲಯ ಹಾಗೂ ಮೂಲಭೂತ ಸೌಕರ್ಯಗಳು ಇಲ್ಲ. ಕೊಠಡಿ, ಕುಡಿಯುವ ನೀರಿನ ವ್ಯವಸ್ಥೆ ಸರಿ ಇಲ್ಲ. ಬಯಲು ಬಹಿರ್ದೆಸೆಗೆ ಹೋಗಲು ಮುಜುಗರ ಮತ್ತು ತೊಂದರೆ ಆಗುತ್ತಿದೆ ಎಂದು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಶಾಲೆಗೆ ಬೀಗ ಹಾಕಿ ಬಿಸಿಲಲ್ಲಿ ಕೂತು ಪ್ರತಿಭಟನೆ ನಡೆಸಿದ್ದಾರೆ.
ರಾಜ್ಯದಲ್ಲಿ ಐದು ವರ್ಷ ಆಡಳಿತ ನಡೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮದೇ ಜಿಲ್ಲೆಯ, ಕ್ಷೇತ್ರ ವಿದ್ಯಾರ್ಥಿಗಳ ಸಮಸ್ಯೆಗೆ ಸ್ಪಂದಿಸದಿರುವುದು ದುರಂತ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಕೂಡಲೇ ಸೂಕ್ತ ಸೌಲಭ್ಯ ನೀಡಬೇಕು ಎಂದು ಆಗ್ರಹಿಸಿದ್ದಾರೆ.
Leave A Reply