ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಖಚಿತ: ಸುರೇಶ್ ಭೈಯಾಜಿ
ನಾಗಪುರ: ಶತಮಾನಗಳ ವಿವಾದವಾಗಿ ಮಾರ್ಪಟ್ಟಿರುವ ಹಿಂದೂಗಳ ಧಾರ್ಮಿಕ ತಾಣ, ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಶ್ರೀರಾಮನ ಮಂದಿರ ನಿರ್ಮಾಣವಾಗುವುದು ನಿಶ್ಚಿತ. ನ್ಯಾಯಾಲಯದ ತೀರ್ಪು ಹೊರ ಬಂದ ಬಳಿಕ ಈ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಕಾರ್ಯವಾಹ ಸುರೇಶ್ ಭೈಯಾಜಿ ಜೋಷಿ ತಿಳಿಸಿದ್ದಾರೆ.
ನಾಗಪುರದಲ್ಲಿ ನಡೆದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಭೆಯಲ್ಲಿ ನಾಲ್ಕನೇ ಬಾರಿಗೆ ಆರ್ ಎಸ್ ಎಸ್ ಸರಕಾರ್ಯವಾಹರಾಗಿ ಆಯ್ಕೆಯಾದ ನಂತರ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣದ ಕುರಿತು ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಅಂತಿಮ ತೀರ್ಪು ಹೊರಬಂದ ಬಳಿಕ ಮಂದಿರ ನಿರ್ಮಾಣ ಆರಂಭವಾಗಲಿದೆ ಎಂದು ಹೇಳಿದರು.
ಅಯೋಧ್ಯೆ ವಿವಾದವನ್ನು ನ್ಯಾಯಾಲಯದ ಹೊರಗೆ ಪರಿಹರಿಸಿಕೊಳ್ಳುವ ನಿಟ್ಟಿನಲ್ಲಿ ಸಂಧಾನ ಮಾತುಕತೆಗಳು ನಡೆಯುತ್ತಿವೆ. ಶ್ರೀರಾಮ ಮಂದಿರ ನಿರ್ವಣದ ಬಗ್ಗೆ ಒಮ್ಮತಾಭಿಪ್ರಾಯ ಮೂಡಿಸುವುದು ಸುಲಭದ ಮಾತಲ್ಲ. ಎಲ್ಲರನ್ನೂ ಒಪ್ಪಿಸಿ ಮುಂದುವರಿಯಬೇಕಾಗುತ್ತದೆ ಎಂದು ಹೇಳಿದರು.
Leave A Reply