ಮಾಡಿದ ಒಂದೇ ಟ್ವೀಟ್ ನಲ್ಲಿ ಕಾಂಗ್ರೆಸ್ಸಿನ ನಿಜಬಣ್ಣ ಮಾಡಿದ ಅದೇ ಪಕ್ಷದ ನಾಯಕ ವೀರಪ್ಪ ಮೊಯ್ಲಿ!
ಬೆಂಗಳೂರು: ಹೇಗಾದರೂ ಸರಿ, ಏನು ಮಾಡಿಯಾದರೂ ಸರಿ ಅಧಿಕಾರಕ್ಕೆ ಬರಬೇಕು ಎನ್ನುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್ಸಿನ ದರ್ಪ, ಹಣದ ರಾಜಕೀಯ, ಬಲದ ರಾಜಕೀಯ ಮಾಡುವವರಿಗೆ ಅದೇ ಕಾಂಗ್ರೆಸ್ಸಿನ ನಾಯಕರೊಬ್ಬರು ಭಾರಿ ಟಾಂಗ್ ನೀಡಿದ್ದಾರೆ.
ಹೌದು, ಕಾಂಗ್ರೆಸ್ಸಿನ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವ್ರು ಕಾಂಗ್ರೆಸ್ಸಿನ ನಿಜಬಣ್ಣವನ್ನು ಬಯಲು ಮಾಡಿದ್ದು, ರಾಜಕೀಯದಲ್ಲಿ ಹಣದ ಪ್ರಾಬಲ್ಯ ಹೆಚ್ಚಾಗಿರುವುದನ್ನು ಕಾಂಗ್ರೆಸ್ ಗಂಭೀರವಾಗಿ ಪರಿಗಣಿಸಬೇಕಿದೆ ಎಂದು ಮೊಯ್ಲಿ ಟ್ವೀಟ್ ಮಾಡಿದ್ದಾರೆ.
ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಯಾಗಿ ಹಣವಂತರತ್ತ ಬಲೆ ಬೀಸುತ್ತಿದೆ. ರಸ್ತೆ ಗುತ್ತಿಗೆದಾರರು ಪಿಡಬ್ಲ್ಯೂ ಇಲಾಖೆಯೊಂದಿಗೆ ಮಾಡಿಕೊಂಡಿರುವ ಹೊಂದಾಣಿಕೆ, ಎಂತಹ ಅಭ್ಯರ್ಥಿಗಳಿಗೆ ಮಣೆ ಹಾಕಲಾಗುತ್ತಿದೆ ಎಂಬುದನ್ನು ನೋಡಿದರೆ ಹಣವಂತರ ಸಂಖ್ಯೆಯೇ ಜಾಸ್ತಿಯಾದಂತಿದೆ ಎಂದು ಮೊಯ್ಲಿ ಕಾಂಗ್ರೆಸ್ ಪಕ್ಷದಲ್ಲಾಗುತ್ತಿರುವ ಬೆಳವಣಿಗೆಯನ್ನು ಸೂಕ್ಷ್ಮವಾಗಿ ತಿಳಿಸಿದ್ದಾರೆ.
ಆದಾಗ್ಯೂ, ಚುನಾವಣೆ ಸಮೀಪಿಸುತ್ತಿದ್ದು, ಸಂಪನ್ಮೂಲ ಕ್ರೋಡೀಕರಣಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಣವಂತರಿಗೆ ಮಣೆ ಹಾಕುತ್ತಿದ್ದಾರೆ ಎಂಬ ಮಾತು ಕೇಳಿಬರುತ್ತಿರುವ ಬೆನ್ನಲ್ಲೇ, ವೀರಪ್ಪ ಮೊಯ್ಲಿ ಅವರು ಹೀಗೆ ಟ್ವೀಟ್ ಮಾಡಿರುವುದು ಕಾಂಗ್ರೆಸ್ಸಿನಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಇತ್ತೀಚೆಗಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯವರು ನೈಸ್ ಮುಖ್ಯಸ್ಥ ಅಶೋಕ್ ಖೇಣಿಯವರನ್ನು ಹಲವರ ವಿರೋಧದ ನಡುವೆಯೇ ಪಕ್ಷಕ್ಕೆ ಸೇರಿಸಿಕೊಂಡಿದ್ದು ಸಂಪನ್ಮೂಲ ಕ್ರೋಡೀಕರಣಕ್ಕೆ ಸಾಕ್ಷಿ ಎಂದೇ ಹೇಳಲಾಗುತ್ತಿದೆ.
Leave A Reply