ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ಸಂಸ್ಥೆಗೆ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಮಾನ್ಯತೆ ನೀಡಲು ಕೇಂದ್ರ ಸರ್ಕಾರ ವಿರೋಧ!
ದೆಹಲಿ: ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮತಗಳಿಗಾಗಿ ಧರ್ಮ ಒಡೆಯಲು ಹೊರಟಿರುವ ಬೆನ್ನಲ್ಲೇ, ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮಹತ್ತರ ನಿರ್ಧಾರವೊಂದು ಕೈಗೊಂಡಿದ್ದು, ದೆಹಲಿಯ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ಸಂಸ್ಥೆ ಅಲ್ಪಸಂಖ್ಯಾತ ಶೈಕ್ಷಣಿಕ ಸಂಸ್ಥೆ ಎಂದು ಮಾನ್ಯತೆ ಬೇಡ ಎಂದು ದೆಹಲಿ ಹೈಕೋರ್ಟಿಗೆ ಮನವಿ ಸಲ್ಲಿಸಿದೆ.
ರಾಷ್ಟ್ರೀಯ ಅಲ್ಪಸಂಖ್ಯಾತರ ಶೈಕ್ಷಣಿಕ ಸಂಸ್ಥೆಗಳ ಆಯೋಗ (ಎನ್ಸಿಎಮ್ಇಐ)ವು ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ಸಂಸ್ಥೆಯು ಅಲ್ಪಸಂಖ್ಯಾತರ ಶೈಕ್ಷಣಿಕ ಸಂಸ್ಥೆ ಎಂದು ಮಾನ್ಯತೆ ನೀಡಿದ್ದು, ಇದನ್ನು ವಿರೋಧಿಸಿ ಕೇಂದ್ರ ಸರ್ಕಾರ ದೆಹಲಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದೆ.
ಮಾರ್ಚ್ 5ರಂದು ಕೇಂದ್ರ ಸರ್ಕಾರ ದೆಹಲಿ ಹೈಕೋರ್ಟಿಗೆ ಮನವಿ ಸಲ್ಲಿಸಿದ್ದು, 1968ರ ಅಜೀಜ್ ಭಾಷಾ ವರ್ಸಸ್ ಯೂನಿಯನ್ ಆಫ್ ಇಂಡಿಯಾ ಪ್ರಕರಣವನ್ನು ಉಲ್ಲೇಖಿಸಿದೆ. ಸಂಸದೀಯ ಕಾಯಿದೆಯನ್ವಯ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯವು ಏಕೀಕೃತವಾಗಿದ್ದು, ಈ ಸಂಸ್ಥೆಗೆ ಅಲ್ಪಸಂಖ್ಯಾತರ ಶೈಕ್ಷಣಿಕ ಸಂಸ್ಥೆ ಎಂದು ಮಾನ್ಯತೆ ನೀಡುವುದು ಬೇಡ ಎಂದು ಕೇಂದ್ರ ಸರ್ಕಾರ ಅರ್ಜಿಯಲ್ಲಿ ಉಲ್ಲೇಖಿಸಿದೆ.
ಜಮಿಯಾ ಮಿಲ್ಲಿಯಾ ಇಸ್ಲಾಮಿಯಾದ ಮಂಡಳಿ ಚುನಾವಣೆ ಪ್ರಕ್ರಿಯೆ ಅನ್ವಯ ರಚಿಸಲಾಗಿದೆ. ಹಾಗಾಗಿ ಈ ಸಂಸ್ಥೆಗೆ ಅಲ್ಪಸಂಖ್ಯಾತರ ಸಂಸ್ಥೆ ಎಂದು ಮಾನ್ಯತೆ ನೀಡುವ ಅವಶ್ಯಕತೆಯಿಲ್ಲ ಹಾಗೂ ಹೀಗೆ ಮಾನ್ಯತೆ ನೀಡುವ ಪ್ರಶ್ನೆಯೇ ಎದುರಾಗಲ್ಲ ಎಂದು ಕೇಂದ್ರ ಸರ್ಕಾರ ಅಫಿಡವಿಟ್ ನಲ್ಲಿ ಉಲ್ಲೇಖಿಸಿದೆ.
2011ರ ಫೆಬ್ರವರಿಯಲ್ಲಿ ಯುಪಿಎ ಸರ್ಕಾರ ಎನ್ಸಿಎಮ್ಇಟಿ ಜಾಮಿಯಾ ಇಸ್ಲಾಮಿಯಾಗೆ ನೀಡಿರುವ ಮಾನ್ಯತೆ ಪುರಸ್ಕರಿಸಬೇಕು ಎಂದು ದೆಹಲಿ ಹೈಕೋರ್ಟಿಗೆ ಮನವಿ ಸಲ್ಲಿಸಿತ್ತು. ಈಗ ಎನ್ಡಿಎ ಸರ್ಕಾರ ಇದನ್ನು ವಿರೋಧಿಸಿ ಅರ್ಜಿ ಸಲ್ಲಿಸಿದೆ.
Leave A Reply