ಚುನಾವಣೆ ಬಳಿಕವೂ ಮೋದಿ ಅಭಿವೃದ್ಧಿ ಮಂತ್ರ, ಈಶಾನ್ಯ ರಾಜ್ಯಗಳ ಅಭಿವೃದ್ಧಿಗೆ ಶೇ.100ರಷ್ಟು ಅನುದಾನ ಕೇಂದ್ರದ್ದೇ!
ದೆಹಲಿ: ತ್ರಿಪುರಾ, ನಾಗಾಲೆಂಡ್ ನಲ್ಲಿ ಚುನಾವಣೆ ಸಮೀಪಿಸುತ್ತಿರುವಾಗ ಕೇಂದ್ರ ಸರ್ಕಾರ ಹಲವು ಯೋಜನೆ ಜಾರಿಗೊಳಿಸಿತ್ತು. ಆಗ ಕೆಲವು ವಿರೋಧ ಪಕ್ಷಗಳು ಇದು ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಾಡಿರುವ ಗಿಮಿಕ್ ಎಂದು ಬೊಬ್ಬೆ ಹಾಕಿದ್ದವು.
ಆದರೆ, ವಿರೋಧಿಗಳ ಈ ಹುರುಳಿಲ್ಲದ ಆರೋಪವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸುಳ್ಳು ಮಾಡಿದ್ದು, ಈಶಾನ್ಯ ರಾಜ್ಯಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಶೇ.100ರಷ್ಟು ಅನುದಾನ ನೀಡಲು ನಿರ್ಧಾರಿಸಿದ್ದಾರೆ.
ಈ ಕುರಿತು ಸಚಿವ ಸಂಪುಟ ಸಭೆ ಬಳಿಕ ಈಶಾನ್ಯ ಪ್ರದೇಶಾಭಿವೃದ್ಧಿ ಕೇಂದ್ರ ಖಾತೆ ರಾಜ್ಯ ಸಚಿವ ಜೀತೇಂದ್ರ ಸಿಂಗ್ ಮಾಹಿತಿ ನೀಡಿದ್ದು, ಈಶಾನ್ಯ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಶೇ.100ರಷ್ಟು ಅನುದಾನ ನೀಡಲು ಮುಂದಾಗಿದ್ದು, ಪ್ರಸ್ತುತ ಬರೋಬ್ಬರಿ 4,500 ಕೋಟಿ ರೂ. ವಿನಿಯೋಗಿಸಿದೆ ಎಂದು ವಿವರಿಸಿದ್ದಾರೆ.
ಅಲ್ಲದೆ ಇದೊಂದು ಐತಿಹಾಸಿಕ ನಿರ್ಧಾರವಾಗಿದ್ದು, ಇದುವರೆಗೆ ಕೇಂದ್ರದ ಯೋಜನೆಗಳಿಗೆ ಕೇಂದ್ರ ಸರ್ಕಾರ ಶೇ.90ರಷ್ಟು ಹಾಗೂ ರಾಜ್ಯ ಸರ್ಕಾರಗಳು ಶೇ.10ರಷ್ಟು ಅನುದಾನ ವಿನಿಯೋಗಿಸುತ್ತಿದ್ದವು. ಆದರೆ ಈಶಾನ್ಯ ರಾಜ್ಯಗಳ ಅಭಿವೃದ್ಧಿ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ವಿಶೇಷ ಆಸಕ್ತಿ ವಹಿಸಿರುವುದರಿಂದ ಇನ್ನು ಮುಂದೆ ನೂರಕ್ಕೆ ನೂರರಷ್ಟು ಅನುದಾನವನ್ನು ಕೇಂದ್ರ ಸರ್ಕಾರವೇ ವಿನಿಯೋಗಿಸಲಿದೆ ಎಂದು ತಿಳಿಸಿದ್ದಾರೆ.
ಬಿದಿರು ಬೆಳೆ ಅಭಿವೃದ್ಧಿ, ರಸ್ತೆ ನಿರ್ಮಾಣ, ಪ್ರಾದೇಶಿಕ ಪ್ರವಾಸೋದ್ಯಮ, ಉನ್ನತ ಶಿಕ್ಷಣ ಸೇರಿ ಹಲವು ಯೋಜನೆಗಳಿಗೆ ಕೇಂದ್ರ ಸರ್ಕಾರ ಬರೋಬ್ಬರಿ ಒಂದು ಸಾವಿರ ಕೋಟಿ ರೂ. ನೀಡುವುದಾಗಿ ಘೋಷಿಸಿದ್ದು, 2020ರ ವೇಳೆಗೆ ಯೋಜನೆ ಪೂರ್ಣಗೊಳಿಸುವ ಗುರಿ ಹೊಂದಿದೆ. ಒಟ್ಟಿನಲ್ಲಿ ವಿರೋಧಿಗಳ ಬೊಬ್ಬೆಯ ನಡುವೆಯೂ ಕೇಂದ್ರ ಸರ್ಕಾರ ಭಾರತದ ಅಭಿವೃದ್ಧಿ ಪಣತೊಟ್ಟಿರುವುದಂತೂ ದಿಟ.
Leave A Reply