ಅಂಬೇಡ್ಕರ್ ಹೆಸರಲ್ಲಿ ಕಾಂಗ್ರೆಸ್ ರಾಜಕೀಯ: ಪ್ರಧಾನಿ ಮೋದಿ ಕಿಡಿ

ದೆಹಲಿ: ದಲಿತರ ಹೆಸರಲ್ಲಿ ರಾಜಕೀಯ ಮಾಡಿ, ದೇಶದಲ್ಲಿ ವಿಷ ಬೀಜ ಬಿತ್ತುತ್ತಿರುವ ಕಾಂಗ್ರೆಸ್ ಗೆ ಪ್ರಧಾನಿ ನರೇಂದ್ರ ಮೋದಿ ದಿಟ್ಟ ಸೂಚನೆ ನೀಡಿದ್ದಾರೆ. ಪರಿಶಿಷ್ಟ ಜಾತಿ, ಪಂಗಡದ ಜನರ ದೌರ್ಜನ್ಯ ತಡೆ ಕಾಯಿದೆ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಕಾಂಗ್ರೆಸ್ ರಾಜಕೀಯಕ್ಕೆ ಬಳಸಿಕೊಳ್ಳುವ ಮೂಲಕ ಹೀನ ರಾಜಕೀಯ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.
ಸುಪ್ರೀ ತೀರ್ಪಿನಿಂದ ಮಧ್ಯಪ್ರದೇಶ, ರಾಜಸ್ಥಾನ, ಉತ್ತರ ಪ್ರದೇಶ ಸೇರಿ ನಾನಾ ಕಡೆ ತೀವ್ರ ಪ್ರತಿಭಟನೆಗಳಾಗಿದ್ದವು. ಪ್ರತಿಭಟನೆಗಳನ್ನು ರಾಜಕೀಯಕ್ಕೆ ಬಳಿಸಿಕೊಂಡು ದ್ವೇಷ ಬಿತ್ತಿದ್ದ ಕಾಂಗ್ರೆಸ್ ವಿರುದ್ಧ ಪ್ರಧಾನಿ ವಾಗ್ದಾಳಿ ನಡೆಸಿದ್ದು, ಸುಪ್ರೀಂ ಕೋರ್ಟ್ ತೀರ್ಪಿಗೆ ತಮ್ಮ ಸಮ್ಮತಿ ಇಲ್ಲ ಎನ್ನುವುದನ್ನು ಬಿಜೆಪಿಯ ಹಿರಿಯ ನಾಯಕರು, ಸಚಿವರು ಸ್ಪಷ್ಟ ಪಡಿಸಿದ್ದಾರೆ. ದಲಿತರ ಕಲ್ಯಾಣಕ್ಕೆ ಕೇಂದ್ರ ಸರಕಾರ ಕೈಗೊಂಡ ಯೋಜನೆಗಳ ಕುರಿತೂ ವಿವರಿಸಿದ್ದಾರೆ. ಆದರೂ ಕಾಂಗ್ರೆಸ್ ಈ ವಿಚಾರದಲ್ಲಿ ವಿನಾಕಾರಣ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದರು.
ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಕೇಂದ್ರ ಸರ್ಕಾರ ಅಪಾರ ಗೌರವ ಸಲ್ಲಿಸಿದೆ. ಕೇಂದ್ರ ಸರ್ಕಾರ ದಲಿತರ ಅಭಿವೃದ್ಧಿಗೆ ಮಹತ್ತರ ಕೊಡುಗೆಗಳನ್ನು ನೀಡಿದೆ. ಆದರೆ ಕಾಂಗ್ರೆಸ್ ರಾಜಕೀಯಕ್ಕಾಗಿ ಜನರನ್ನು ಎತ್ತಿಕಟ್ಟುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Leave A Reply