ಪಶ್ಚಿಮ ಬಂಗಾಳದಲ್ಲೂ ಮೋದಿ ಅಲೆಯ ನಡುಕ, ಬಿಜೆಪಿ ಮೆರವಣಿಗೆ ಮೇಲೆ ಬಾಂಬ್ ದಾಳಿ

ಕೊಲ್ಕತ್ತ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಂಧಾ ದರ್ಬಾರ ಮುಂದುವರಿದಿದ್ದು, ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರ, ಮುಖಂಡರ ಅಟ್ಟಹಾಸ ತೀವ್ರವಾಗುತ್ತಿದೆ. ನಿರಂತರವಾಗಿ ಹಿಂದೂ ವಿರೋಧಿ ನೀತಿ ಅನುಸರಿಸುತ್ತಲೇ, ಮುಸ್ಲಿಂ ತುಷ್ಟೀಕರಣಕ್ಕೆ ಪ್ರೇರಣೆ ನೀಡಿದ್ದ ತೃಣಮೂಲ ಕಾಂಗ್ರೆಸ್ ಕಾರ್ಯರ್ತರು ಇದೀಗ ಸೋಲಿನ ಭೀತಿ, ಪ್ರಧಾನಿ ನರೇಂದ್ರ ಮೋದಿ ಅವರ ಅಲೆಗೆ ಬೆವೆತು ಹೋಗಿದ್ದಾರೆ. ಆದ್ದರಿಂದ ಸ್ಥಳೀಯ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಸಲು ಮೆರವಣಿಗೆ ಮೂಲಕ ಹೊರಟರೇ ಮೆರವಣಿಗೆ ಮೇಲೆ ಬಾಂಬ್ ದಾಳಿ ನಡೆಸಲಾಗಿದೆ. ಈ ಮೂಲಕ ತೃಣಮೂಲ ಕಾಂಗ್ರೆಸ್ ಗೆ ನೆರವಾಗಿ ಚುನಾವಣೆ ಎದುರಿಸಲಾಗದೇ, ಬಿಜೆಪಿ ಕಾರ್ಯಕರ್ತರನ್ನು ಹೆದರಿಸಿ, ಬೆದರಿಸಿ ನಿಯಂತ್ರಣದಲ್ಲಿಟ್ಟುಕೊಳ್ಳುವ ಹುನ್ನಾರ ನಡೆಸಲಾಗುತ್ತಿದೆ ಎಂದು ಅಲ್ಲಿನ ಬಿಜೆಪಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಶ್ಚಿಮ ಬಂಗಾಳದ ಜಾಗಿರ್ಪುರನ ಮುರ್ಶಿದಾಬಾದ್ ನಗರದ ಸ್ಥಳೀಯ ಸಂಸ್ಥೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಬಿಜೆಪಿ ಅಭ್ಯರ್ಥಿ ಅದ್ದೂರಿ ಮೆರವಣಿಗೆಯೊಂದಿಗೆ ಸಾಗುವ ವೇಳೆ ಬಾಂಬ್ ದಾಳಿ ನಡೆಸಿರುವ ವಿಡಿಯೋ ಇದೀಗ ವೈರಲ್ ಆಗಿದೆ. ನೂರಾರು ಬಿಜೆಪಿ ಕಾರ್ಯಕರ್ತರು ಪಕ್ಷದ ಧ್ವಜ, ಘೋಷಣೆಗಳೊಂದಿಗೆ ಅದ್ದೂರಿ ಮೆರವಣಿಗೆ ಹೊರಟಾಗ ಎದುರುಗಡೆ ಬಂದಿದ್ದ ಪ್ರತಿವಾದಿಗಳು ಬಾಂಬ್ ದಾಳಿ ನಡೆಸಿದ್ದಾರೆ. ಈ ದೃಶ್ಯ ಬಿಜೆಪಿ ಕಾರ್ಯಕರ್ತರ ಮೊಬೈಲ್ ನಲ್ಲಿ ಸೆರೆಯಾಗಿದೆ.
ಒಂದು ಬಾಂಬ್ ಮೆರವಣಿಗೆಯ ಸಮೀಪವೇ ಬ್ಲಾಸ್ಟ್ ಆಗಿದ್ದು, ಯಾವುದೇ ಹಾನಿ ಸಂಭವಿಸಿಲ್ಲ. ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ರಾಜಕೀಯ ಅನ್ಯಾಯ, ದೌರ್ಜ್ಯನ್ಯವನ್ನು ತಡೆಯಲು ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕು ಎಂದು ಬಿಜೆಪಿ ಮುಖಂಡರು ಆಗ್ರಹಿಸಿದ್ದಾರೆ.
https://twitter.com/i/web/status/982240610475114498
Leave A Reply