• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉಗ್ರ ಪೋಷಕ ಪಟ್ಟ ಕಳಚಿಕೊಳ್ಳಲು ಪಾಕ್ ನಿರ್ಧಾರ?: ಉಗ್ರ ಸಂಘಟನೆಗಳ ನಿಷೇಧಕ್ಕೆ ಸಿದ್ಧತೆ

TNN Correspondent Posted On April 8, 2018
0


0
Shares
  • Share On Facebook
  • Tweet It

ಇಸ್ಲಾಮಾಬಾದ್: ಭಯೋತ್ಪಾದಕರನ್ನು ಸಲಹುತ್ತಿರುವ ಆರೋಪ ಹೊತ್ತಿರುವ ಪಾಕಿಸ್ತಾನ, ಭಯೋತ್ಪಾದನೆ ಪೋಷಕ ಎಂಬ ಹಣೆಪಟ್ಟಿ ಕಳಚಿಕೊಳ್ಳಲು ಹಲವು ಬಾರಿ ನಾಟಕಗಳನ್ನು ಮಾಡಿದೆ. ಆದರೆ ಇದೀಗ ಮತ್ತೊಮ್ಮೆ ಪಾಕಿಸ್ತಾನ ಭಯೋತ್ಪಾದಕ ಸಂಘಟನೆಗಳನ್ನು ಶಾಶ್ವತವಾಗಿ ನಿಷೇಧಿಸುವ ನಿಟ್ಟಿನಲ್ಲಿ ಕರಡು ವಿಧೇಯಕ ರೂಪಿಸುತ್ತಿದೆ ಎನ್ನಲಾಗಿದೆ.
ಗೃಹಸಚಿವಾಲಯದ ನಿಗಾ ಪಟ್ಟಿಯಲ್ಲಿರುವ ಕೆಲವು ಸಂಘಟನೆಗಳು ಮತ್ತು ವ್ಯಕ್ತಿಗಳನ್ನು ನಿಷೇಧಿಸಿದ ಅಧ್ಯಕ್ಷರ ಸುಗ್ರೀವಾಜ್ಞೆಯ ಬದಲಿಗೆ ಈ ವಿಧೇಯಕ ತರಲಾಗುತ್ತಿದೆ. ಭಯೋತ್ಪಾದನಾ ನಿಗ್ರಹ ದಳ 1997ರ ತಿದ್ದುಪಡಿ ಕರಡು ವಿಧೇಯಕವನ್ನು ಏ.9ರಿಂದ ನಡೆಯಲಿರುವ ಅಧಿವೇಶನದಲ್ಲಿ ಮಂಡಿಸಲು ಕಾನೂನು ಸಚಿವಾಲಯ ಸಿದ್ಧತೆ ನಡೆಸಿದೆ ಎಂದು ಪಾಕಿಸ್ತಾನ ಪ್ರಮುಖ ಪತ್ರಿಕೆ ಡಾನ್ ವರದಿ ಮಾಡಿದೆ. ಪ್ರಸ್ತಾವಿತ ಕರಡು ವಿಧೇಯಕವನ್ನು ಪರಿಶೀಲಿಸಲು ಕಾನೂನು ಸಚಿವಾಲಯ ಮತ್ತು ಪಾಕ್‌ ಸೇನೆಯ ಆಡಳಿತ ಮಂಡಳಿ ಕೂಡ ವಿಧೇಯಕ ರಚನೆಯ ಪ್ರಕ್ರಿಯೆಯಲ್ಲಿ ಭಾಗಿಯಾಗಿವೆ ಎಂದು ಮೂಲಗಳು ತಿಳಿಸಿವೆ.

ಭಯೋತ್ಪಾದಕರಿಗೆ ಹಣಕಾಸು ನೆರವು ಒದಗಿಸಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಪಾಕಿಸ್ತಾನದ ಹೆಸರನ್ನು ಅಮೆರಿಕ, ಇಂಗ್ಲೆಂಡ್, ಫ್ರಾನ್ಸ್ ಹಾಗೂ ಜರ್ಮನಿಯ ಜಂಟಿ ಪ್ರಸ್ತಾಪಕ್ಕೆ ಹಣಕಾಸು ಕಾರ್ಯಪಡೆ ಅನುಮೋದನೆ ನೀಡಿತ್ತು. ಇದೀಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ತನ್ನ ವರ್ಚಸ್ಸಿಗೆ ಆಗುವ ಧಕ್ಕೆಯನ್ನು ತಡೆಯುವ ಉದ್ದೇಶದಿಂದ ಭಯೋತ್ಪಾದಕ ನಿಗ್ರಹ ಕಾಯಿದೆಗೆ ತಿದ್ದುಪಡೆ ಕರಡು ವಿಧೇಯಕ ಮಂಡಿಸಲು ಪಾಕಿಸ್ತಾನ ಸಿದ್ಧತೆ ನಡೆಸಿದೆ. ಆದರೆ ಅದು ಎಷ್ಟರ ಮಟ್ಟಿಗೆ ಜಾರಿಗೆ ಬರುತ್ತದೆ ಎಂಬ ಅನುಮಾನಗಳು ವಿಶ್ವಸಮುದಾಯಕ್ಕಿದೆ.

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
  • Popular Posts

    • 1
      ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ

  • Privacy Policy
  • Contact
© Tulunadu Infomedia.

Press enter/return to begin your search