ಸೋಲಿನ ಭೀತಿಯಿಂದ ಪಶ್ಚಿಮ ಬಂಗಾಳದಲ್ಲಿ ಹಿಂಸೆಗೆ ಪ್ರಚೋದಿಸುತ್ತಿದ್ದಾರೆಯೇ ಮಮತಾ ಬ್ಯಾನರ್ಜಿ?
ಕೋಲ್ಕತ್ತಾ: ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಅಲೆ ಇರುವುದರಿಂದ ಪ್ರತಿಪಕ್ಷಗಳಿಗೆ ನಡುಕ ಉಂಟಾಗಿದ್ದು, ಇದನ್ನು ತಡೆಯಲು ಹಲವು ತಂತ್ರ ಹೆಣೆಯುತ್ತಿದ್ದಾರೆ. ಇತ್ತೀಚೆಗೆ ಭಾರತ್ ಬಂದ್ ಹೆಸರಿನಲ್ಲಿ ನಡೆದ ಹಿಂಸಾಚಾರದ ಹಿಂದೆ ಷಡ್ಯಂತ್ರ ಇದೆ ಎಂದು ಗುಪ್ತಚರ ಇಲಾಖೆ ವರದಿ ನೀಡಿರುವುದೇ ಸಾಕ್ಷಿಯಾಗಿದೆ.
ಈಗ ಇದಕ್ಕೆ ಪುಷ್ಟಿ ನೀಡುವಂತೆ ಮತ್ತೊಂದು ಘಟನೆ ನಡೆದಿದ್ದು, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಲೆ ತಡೆಯುವ ದಿಸೆಯಲ್ಲಿ ಮಮತಾ ಬ್ಯಾನರ್ಜಿ ಹಿಂಸೆಗೆ ಪ್ರಚೋದನೆ ನೀಡುತ್ತಿದ್ದಾರಾ ಎಂಬ ಪ್ರಶ್ನೆ ಕಾಡುತ್ತಿದೆ.
ಹೌದು, ಪಶ್ಚಿಮ ಬಂಗಾಳದಾದ್ಯಂತ ಈಗ ಬಿಜೆಪಿಯ ದಲಿತ ಅಭ್ಯರ್ಥಿಯೊಬ್ಬರ ಮೇಲೆ ಟಿಎಂಸಿ ಕಾರ್ಯಕರ್ತರು ದಾಳಿ ಮಾಡಿ ಕೊಂದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಚುನಾವಣೆಯಲ್ಲಿ ಜನರಿಗೆ ಬಿಜೆಪಿ ಪರ ಒಲವಿದ್ದು, ಇದರ ಭೀತಿಯಿಂದಲೇ ಮಮತಾ ಬ್ಯಾನರ್ಜಿ ಅವರು ಹಿಂಸೆಗೆ ಪ್ರಚೋದನೆ ನೀಡುತ್ತಿದ್ದಾರೆ ಎಂಬ ಆರೋಪಗಳು ಹರಿದಾಡುತ್ತಿವೆ.
ಬಂಕುರಾದ ಬಿಡಿಒ ಕಚೇರಿ ಎದುರು ಅಜಿತ್ ಮುಮ್ಮುರು ಎಂಬಾತನನ್ನು ಟಿಎಂಸಿ ಕಾರ್ಯಕರ್ತರೇ ಹೊಡೆದು ಸಾಯಿಸಿದ್ದಾರೆ ಎನ್ನಲಾಗುತ್ತಿದೆ. ಆದಾಗ್ಯೂ ಜಿಲ್ಲಾ ಮ್ಯಾಜಿಸ್ಟ್ರೇಟ್ ಎದುರು ಸಹ ಬಿಜೆಪಿ ಜಿಲ್ಲಾ ಕಾರ್ಯದರ್ಶಿಯೊಬ್ಬರ ಮೇಲೆಯೂ ಹಲ್ಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಇದುವರೆಗೆ ಚುನಾವಣೆ ಹಿನ್ನಲೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಹಿಂಸೆಗೆ ಪ್ರಚೋದನೆ ನೀಡುತ್ತಿದ್ದು, ಬಿಜೆಪಿಯ 331 ಕಾರ್ಯಕರ್ತರು, ಮುಖಂಡರ ಮೇಲೆ ಹಲ್ಲೆ ಮಾಡಲಾಗಿದೆ. ಇವರಲ್ಲಿ 44 ಜನರನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಒಬ್ಬ ಕಾರ್ಯಕರ್ತ ಕಾಣೆಯಾಗಿದ್ದಾನೆ ಎಂದು ಮೂಲಗಳು ತಿಳಿಸಿವೆ.
Leave A Reply