• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ರಾಜ್ಯದಲ್ಲಿ ಅರಳಲಿದೆ ಕಮಲ ಅದಕ್ಕಿಲ್ಲಿವೇ 10 ಕಾರಣ..

TNN Correspondent Posted On April 10, 2018


  • Share On Facebook
  • Tweet It

ಬೆಂಗಳೂರು: ದೇಶಾದ್ಯಂತ ಅರಳಿರುವ  ಪ್ರಧಾನಿ ನರೇಂದ್ರ ಮೋದಿ ಅಲೆ, ಕೇಂದ್ರ ಸರ್ಕಾರದ ಕ್ರಾಂತಿಕಾರಿ ನಿರ್ಧಾರಗಳು ದೇಶದಲ್ಲಿ ಹೊಸ ಸಂಚಲವನ್ನು ಮೂಡಿಸಿರುವುದು ಹಲವು ರಾಜ್ಯಗಳಲ್ಲಿ ಕಾಣುತ್ತಿರುವ ಬಿಜೆಪಿಯ ವಿಜಯ ಗಾಥೆಯೇ ಸಾಕ್ಷಿಯಾಗಿ ನಿಂತಿದೆ. ದೇಶದ್ಯಾಂತ ವಿಜಯಯಾತ್ರೆ ಮುಂದುವರಿಸಿರುವ ಬಿಜೆಪಿಗೆ ಕರ್ನಾಟಕದ ಚುನಾವಣೆ ಸವಾಲಾಗಿ ಪರಿಣಿಮಿಸಿದ್ದು ಸುಳ್ಳಲ್ಲ. ಆದರೆ ರಾಜ್ಯದಲ್ಲಿ ಅಧಿಕಾರದಲ್ಲಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಐದು ವರ್ಷದಲ್ಲಿ ತನ್ನ ಮೇಲೆ ಜನರಿಟ್ಟ ವಿಶ್ವಾಸಕ್ಕೆ ಕೊಳ್ಳಿ ಇಟ್ಟಿರುವುದು ಹಲವು ಚುನಾವಣೆಗಳಲ್ಲಿ ಸಾಬೀತಾಗಿದೆ. ಇದೀಗ ಐದು ವರ್ಷ ಪೂರ್ಣಗೊಳಿಸಿರುವ ಕಾಂಗ್ರೆಸ್ ಗೆ ಕರ್ನಾಟಕದಲ್ಲಿ ಸೋಲುವ ಭೀತಿ ಮಿತಿ ಮೀರಿದೆ.

ಶತಾಯಗತಾಯ ಅಧಿಕಾರ ಉಳಿಸಿಕೊಳ್ಳಲೇ ಬೇಕು ಎಂದು ಸಿದ್ದರಾಮಯ್ಯ ಮತ್ತು ಗ್ಯಾಂಗ್ ಕಾರ್ಯಪ್ರವೃತ್ತವಾಗಿದೆ. ಆದರೆ ರಾಜ್ಯದಲ್ಲಿ ನಡೆದಿರುವ ಅನಾಚಾರ, ಅಕ್ರಮ, ಹಿಂದೂ ಕಾರ್ಯಕರ್ತರ ಹತ್ಯೆ, ಭ್ರಷ್ಟಾಚಾರ, ಲೋಕಾಯುಕ್ತ ಮುಚ್ಚಿಸಿದ್ದು ಸೇರಿ ನಾನಾ ವಿಷಯಗಳು ಸಿದ್ದರಾಮಯ್ಯಗೆ ಹೊಡೆತ ನೀಡುವುದು ಬಹುತೇಕ ಖಚಿತವಾಗಿದೆ. ಅದ್ಯಾವ ಅಂಶಗಳು ಕಾಂಗ್ರೆಸ್ ಗೆ ರಾಜ್ಯದಲ್ಲಿ ಎರವಾಗಲಿವೆ. ರಾಜ್ಯದ ಜನ ಸಿದ್ದರಾಮಯ್ಯ ಸರ್ಕಾರದ ಮೇಲೆ ಆಕ್ರೋಶ ಗೊಳಲು ಕಾರಣ ಏನು ಮತ್ತು ಕಾಂಗ್ರೆಸ್ ಸೋಲಲು ಕಾರಣಗಳೇನು ಎಂಬ ಹತ್ತು ಅಂಶಗಳು ಇಲ್ಲಿವೆ.

1)ಕರ್ನಾಟಕದ ಇತಿಹಾಸದಲ್ಲಿ ಐದು ವರ್ಷ ಆಡಳಿತ ನಡೆಸಿದ ಪಕ್ಷ ಮರಳಿ ಅಧಿಕಾರಕ್ಕೇರಿರುವ ಇತಿಹಾಸವಿಲ್ಲ.

2) ಪ್ರಧಾನಿ ನರೇಂದ್ರ ಮೋದಿ ಅವರ ಭರ್ಜರಿ ಅಲೆ ರಾಜ್ಯದಲ್ಲಿ ಬೀಸಿದೆ. ಅದಕ್ಕೆ ಸಾಕ್ಷಿ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಅತಿ ಹೆಚ್ಚು ಸಂಸದರು ಆಯ್ಕೆಯಾಗಿದ್ದು. ಮೋದಿ ಅಲೆಗೆ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುವುದರಲ್ಲಿ ಎರಡು ಮಾತಿಲ್ಲ.

3) ಇತ್ತೀಚೆಗೆ ಚುನಾವಣೆ ನಡೆದ ಎಲ್ಲ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೇರಿದ್ದು, ರಾಜ್ಯದಲ್ಲಿ ಅದೇ ಅಲೆ ಮುಂದುವರಿಯುವ ಲಕ್ಷಣಗಳು ಗೋಚರಿಸಿವೆ. ತ್ರಿಪುರಾದಲ್ಲಿ 25 ವರ್ಷದ ಆಡಳಿತಕ್ಕೆ ಅಂತ್ಯ ಹಾಡಿದ್ದು ಬಿಜೆಪಿ ಗೆಲುವಿನ ಸಾಮರ್ಥ್ಯವನ್ನು ಹೆಚ್ಚಿಸಿದೆ.

4) ಉತ್ತಮ, ಪರಿಣಾಮಕಾರಿ ಆಡಳಿತ ನೀಡುವಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ವಿಫಲವಾಗಿರುವುದು. ವಿಶೇಷವಾಗಿ ಬಿಜೆಪಿ ಅಧಿಕಾರದಲ್ಲಿರುವ ದೊಡ್ಡ ದೊಡ್ಡ ರಾಜ್ಯಗಳಿಗಿಂದ ರಾಜ್ಯ ಸ್ಥಾನ ಕೆಳಮಟ್ಟದಲ್ಲಿರುವುದು.

5) ಕೃಷಿಕರ ಅವನತಿ, 3800 ರೈತರ ಆತ್ಮಹತ್ಯೆ ಸಿದ್ದರಾಮಯ್ಯ ಸರ್ಕಾರದ ರೈತ ವಿರೋಧಿ ಧೋರಣೆಗೆ ಕಾರಣವಾಗಿದೆ. ಇದು ರೈತರು ಬಲಿಷ್ಠವಾಗಿರುವ ರಾಜ್ಯದಲ್ಲಿ ಭಾರಿ ಪರಿಣಾಮ ಬೀರಲಿದೆ.

6) ರಾಜ್ಯದಲ್ಲಿ ಹದಗೆಟ್ಟಿರುವ ಶಾಂತಿ, ಸುವ್ಯವಸ್ಥೆ ವಿಶೇಷವಾಗಿ ಬೆಂಗಳೂರಿನಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗಿರುವುದು.

7)  ಕಾಂಗ್ರೆಸ್ ಕೇವಲ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಟ್ಟುಕೊಂಡು ಚುನಾವಣೆ ಪ್ರಚಾರ ಮಾಡುತ್ತಿರುವುದು ಭಾರಿ ಹೊಡೆತ ನೀಡಲಿದೆ. ಮೋದಿ ವಿರೋಧಿಸಿದಷ್ಟು ಬಲಿಷ್ಠವಾಗುತ್ತಾರೆ.

8) ಕಳೆದ ವಿಧಾನಸಭೆ ಚುನಾವಣೆಯಲ್ಲಿ ಎರಡಾಗಿದ್ದ ಬಿಜೆಪಿ ಕೆಜೆಪಿ ಇದೀಗ ಒಂದಾಗಿದ್ದು, ವೀರಶೈವ ಲಿಂಗಾಯತ ಸಮುದಾಯದ ನಾಯಕ ಬಿಎಸ್ ವೈ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯಾಗಿರುವುದು.

9) ಸಿದ್ದರಾಮಯ್ಯ ಮುಸ್ಲಿಂ ತುಷ್ಟೀಕರಣ ರಾಜಕಾರಣದಿಂದ ಮತ್ತು ಧರ್ಮ ಒಡೆದ ಕಾರಣಕ್ಕೆ ಹಿಂದೂಗಳ ಮತಗಳು ಕಾಂಗ್ರೆಸ್ ನಿಂದ ವಿಮುಖವಾಗಲಿವೆ.

10) ಇದುವರೆಗೆ ಜೆಡಿಎಸ್ ಗೆ ಕಟುಬಿದ್ದಿದ್ದ ಒಕ್ಕಲಿಗ ಸಮುದಾಯದ ಮತಗಳನ್ನು ಬಿಜೆಪಿ ಸೆಳೆಯುವಲ್ಲಿ ಯಶಸ್ವಿಯಾಗಿದ್ದು, ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಪಡೆಯಲು ಅನುಕೂಲವಾಗಲಿದೆ.

 

 

 

 

 

 

 

  • Share On Facebook
  • Tweet It


- Advertisement -


Trending Now
ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
Tulunadu News February 1, 2023
ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
Tulunadu News January 31, 2023
Leave A Reply

  • Recent Posts

    • ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
    • ನಕಲಿ ಕಾಂತಾರಗಳು ನಮ್ಮ ನಂಬಿಕೆಗೆ ಪೆಟ್ಟು ಕೊಡಬಾರದು!!
    • ಶರದ್ ಪವಾರ್ ಕೂಡ ಗಡಿಯಲ್ಲಿ ಕಡ್ಡಿ ಅಲ್ಲಾಡಿಸಲು ಹೊರಟಿದ್ದಾರೆ!
    • ಮಂಗಳಾ ಕ್ರೀಡಾಂಗಣದ ಹೊರಗೆ ಸಿಂಗಾರ, ಒಳಗೆ ಗೋಳಿಸೊಪ್ಪು!!
  • Popular Posts

    • 1
      ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • 2
      ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • 3
      ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • 4
      ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • 5
      ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search