ರೋಹಿಣಿ ಸಿಂಧೂರಿ ವರ್ಗಾವಣೆ ವಿಷಯದಲ್ಲಿ ರಾಜ್ಯ ಸರ್ಕಾರಕ್ಕೆ ಮತ್ತೆ ಮುಖಭಂಗ!
ಬೆಂಗಳೂರು: ದಕ್ಷ ಅಧಿಕಾರಿಗಳ ವರ್ಗಾವಣೆಯಲ್ಲಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಎಂದಿಗೂ ಮುಂದು. ಇವರ ಕಾಟ ತಾಳಲಾರದೆ ಮಡಿಕೇರಿ ಡಿವೈಎಸ್ಪಿಯಾಗಿದ್ದ ಗಣಪತಿ ಆತ್ಮಹತ್ಯೆ ಮಾಡಿಕೊಳ್ಳಬೇಕಾಯಿತು. ಕೆಲವು ಅಧಿಕಾರಿಗಳು ಸುಮ್ಮನೆ ಸರ್ಕಾರದ ಆದೇಶ ಪಾಲಿಸಬೇಕಾಯಿತು.
ಆದರೆ ಹಾಸನದ ದಕ್ಷ ಅಧಿಕಾರಿ ಎಂದೇ ಖ್ಯಾತಿಯಾಗಿರುವ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಹೇಗಾದರೂ ಮಾಡಿ ವರ್ಗಾವಣೆ ಮಾಡಬೇಕು ಎಂಬ ರಾಜ್ಯ ಸರ್ಕಾರದ ಹಠಕ್ಕೆ ಮಾತ್ರ ಪದೇ ಪದೇ ಹಿನ್ನಡೆಯಾಗುತ್ತಿದೆ.
ಹೌದು, ಇದುವರೆಗೆ ರೋಹಿಣಿ ಸಿಂಧೂರಿಯವರನ್ನು ಹೇಗಾದರೂ ಮಾಡಿ ವರ್ಗಾವಣೆ ಮಾಡಬೇಕು ಎಂಬ ಸರ್ಕಾರಕ್ಕೆ ಮತ್ತೊಮ್ಮೆ ಪೆಟ್ಟು ಬಿದ್ದು, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ ಕೋರಿ ಚುನಾವಣೆ ಆಯೋಗಕ್ಕೆ ಸಚಿವ ಎ.ಮಂಜು ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಲಾಗಿದೆ.
ಈ ಕುರಿತು ಮೈಸೂರು ಪ್ರಾದೇಶಿಕ ಆಯುಕ್ತ ಶಿವಯೋಗಿ ಕಳಸದ್ ರಾಜ್ಯ ಚುನಾವಣೆ ಆಯೋಗಕ್ಕೆ ವರದಿ ನೀಡಿದ್ದು, ರೋಹಿಣಿ ಸಿಂಧೂರಿ ವಿರುದ್ಧ ಸಲ್ಲಿಸಿರುವ ದೂರಿನಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಉಲ್ಲೇಖಿಸಿದ್ದಾರೆ.
ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಸಚಿವ ಎ.ಮಂಜು ವಿರುದ್ಧ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಎಫ್ಐಆರ್ ದಾಖಲಿಸಿದ್ದರು. ಆದರೆ ಜಿಲ್ಲಾಧಿಕಾರಿಯವರು ನನ್ನ ವಿರುದ್ಧ ದುರುದ್ದೇಶದಿಂದ ಹೀಗೆ ಮಾಡಿದ್ದಾರೆ. ಅವರನ್ನು ವರ್ಗಾವಣೆ ಮಾಡಬೇಕು ಎಂದು ಎ.ಮಂಜು ಚುನಾವಣೆ ಆಯೋಗಕ್ಕೆ ದೂರು ಸಲ್ಲಿಸಿದ್ದರು.
ಮುಖ್ಯ ಚುನಾವಣೆ ಆಯುಕ್ತರು ತನಿಖೆಗೆ ಆದೇಶಿಸಿದ್ದರು. ಆದರೆ ಈಗ ಸಚಿವರು ನೀಡಿರುವ ದೂರಿನಲ್ಲೇ ಹುರುಳಿಲ್ಲ ಎಂದು ಮೈಸೂರು ಪ್ರಾದೇಶಿಕ ಆಯುಕ್ತರು ಚುನಾವಣೆ ಆಯೋಗಕ್ಕೆ ವರದಿ ಸಲ್ಲಿಸಿದ್ದು, ರಾಜ್ಯ ಸರ್ಕಾರಕ್ಕೆ ಭಾರಿ ಮುಖಭಂಗವಾದಂತಾಗಿದೆ.
Leave A Reply