ಕೇಂದ್ರ ಸಚಿವ, ಫೈರ್ ಬ್ರ್ಯಾಂಡ್ ಅನಂತಕುಮಾರ ಹೆಗಡೆ ಕಾರು ಅಪಘಾತ, ನಡೆಯಿತೇ ಹಲ್ಲೆ ಯತ್ನ?
ಬೆಂಗಳೂರು: ರಾಜ್ಯದಲ್ಲಿ ತಮ್ಮ ಕಠೋರ ಹಿಂದೂತ್ವದ ಸಿದ್ಧಾಂತದ ಮೂಲಕ ಗಮನಸೆಳೆದಿರುವ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತಕುಮಾರ ಹೆಗಡೆ ಕಾರು ಮಂಗಳವಾರ ರಾತ್ರಿ ಅಪಘಾತಕ್ಕೀಡಾಗಿದ್ದು, ಸಚಿವರ ಹತ್ಯೆಗೆ ಹಲ್ಲೆಗೆ ಯತ್ನ ನಡೆದಿರುವ ಶಂಕೆ ವ್ಯಕ್ತಪಡಿಸಲಾಗಿದೆ.
ಮಂಗಳವಾರ ರಾತ್ರಿ ಅಪಘಾತ ಸಂಭವಿಸಿದ್ದು, ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರಿಗೆ ಯಾವುದೇ ಸಮಸ್ಯೆಯಾಗಿಲ್ಲ. ಹೆಗಡೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಸಚಿವ ಹೆಗಡೆ ನನ್ನ ಕೊಲೆಗೆ ಸಂಚು ರೂಪಿಸಲಾಗಿದೆ ಎಂದು ಆರೋಪಿಸಿದ್ದಾರೆ.
ಹಾವೇರಿಯ ರಾಣೆಬೆನ್ನೂರು ತಾಲೂಕಿನ ಹಲಗೇರಿ ಸಮೀಪ ಮಂಗಳವಾರ ರಾತ್ರಿ ಸುಮಾರು 11.30 ಕ್ಕೆ ಕಾರಿನಲ್ಲಿ ತೆರಳುತ್ತಿದ್ದಾಗ ಟ್ರಕ್ ಒಂದು ವೇಗವಾಗಿ ನುಗ್ಗಿ ಬಂದು ಬೆಂಗಾವಲು ವಾಹನಕ್ಕೆ ಡಿಕ್ಕಿ ಹೊಡೆದಿದೆ. ನಮ್ಮ ಕಾರು ವೇಗವಾಗಿದ್ದರಿಂದ ಅದೃಷ್ಟವಶಾತ್ ಪಾರಾಗಿದ್ದೇನೆ. ಇದೊಂದು ಉದ್ದೇಶಿತ ಅಪಘಾತ ಪ್ರಯತ್ನ ಎಂದು ಅನಂತ್ ಕುಮಾರ್ ಹೆಗಡೆ ಆರೋಪಿಸಿ ಅನಂತ ಕುಮಾರ್ ಅಪಘಾತದ ವೀಡಿಯೋ ಮತ್ತು ಫೋಟೋಗಳನ್ನು ಟ್ವೀಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಟ್ರಕ್ ಚಾಲಕನನ್ನು ಬಂಧಿಸಲಾಗಿದ್ದು, ನಾಸಿರ್ ಎಂದು ಗುರುತಿಸಲಾಗಿದೆ. ಈತನ ಭಾವಚಿತ್ರವನ್ನು ಟ್ವೀಟರ್‌ನಲ್ಲಿ ಪೋಸ್ಟ್ ಮಾಡಲಾಗಿದೆ.
Leave A Reply