ಆರೋಗ್ಯ ಇಲಾಖೆಯಲ್ಲಿ ಕೇಂದ್ರದ ಕ್ರಾಂತಿಕಾರಿ ನಿರ್ಧಾರ, ಆಸ್ಪತ್ರೆಯಲ್ಲಿ ವೈದ್ಯರಿಲ್ಲದಿದ್ದರೇ ಹುಷಾರ್!
ದೆಹಲಿ: ವಿಶ್ವದ ಇತಿಹಾಸದಲ್ಲೇ ಅತಿ ದೊಡ್ಡ ಆರೋಗ್ಯ ವಿಮೆಯನ್ನು ಜಾರಿಗೆ ತರುವ ಮೂಲಕ ಗಮನ ಸೆಳೆದಿದ್ದ ಕೇಂದ್ರ ಸರ್ಕಾರ ಇದೀಗ ಸಾರ್ವಜನಿಕ ಆಸ್ಪತ್ರೆಗಳ ಸ್ಥಿತಿ ಗತಿಗಳ ಕುರಿತ ಮಾಹಿತಿಯನ್ನು ಜನಸಾಮಾನ್ಯರ ಕೈ ಬೆರಳಲ್ಲೆ ದೊರಕುವಂತೆ ಮತ್ತು ದೂರು ನೀಡಲು ‘ಮೈ ಆಸ್ಪತ್ತಾಲ್ ಆ್ಯಪ್’ನ್ನು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಿದ್ಧಪಡಿಸಿದೆ.
ಸಂಕಷ್ಟದಲ್ಲಿರುವ ಸಾರ್ವಜನಿಕರು ನಿತ್ಯ ಸರ್ಕಾರಿ ಆಸ್ಪತ್ರೆಗೆ ಪರದಾಡುವುದು ಸಾಮಾನ್ಯ. ಕೆಲವು ಆಸ್ಪತ್ರೆಗಳಲ್ಲಿ ಸರಿಯಾದ ವ್ಯವಸ್ಥೆ ದೊರೆಯದೇ ಜನ ಖಾಸಗಿ ಆಸ್ಪತ್ರೆಗಳ ಮೊರೆ ಹೋಗುವ ಸ್ಥಿತಿ ಇದೆ. ಇದನ್ನು ತಡೆಗಟ್ಟಲು ಕೇಂದ್ರ ಸರ್ಕಾರ ದಿಟ್ಟ ನಿರ್ಧಾರವನ್ನು ಕೈಗೊಂಡಿದ್ದು, ಸಾರ್ವಜನಿಕರ ಆಸ್ಪತ್ರೆಗಳ ಮಾಹಿತಿಯನ್ನು ಇಲಾಖೆ ಹಿರಿಯ ಅಧಿಕಾರಿಗಳಿಗೆ ತಿಳಿಸಲು ಆ್ಯಪ್ ಸಿದ್ಧಪಡಿಸಲಾಗಿದೆ. ಇದರಿಂದ ಜನರು ನೇರವಾಗಿ ಆಸ್ಪತ್ರೆಗಳ ಸಮಸ್ಯೆಗಳ ಮತ್ತು ಉತ್ತಮ ಸೌಲಭ್ಯದ ಬಗ್ಗೆ ಶ್ಲಾಘನೀಯ ಮಾತುಗಳನ್ನು ಹಿರಿಯ ಅಧಿಕಾರಿಗಳಿಗೆ ತಿಳಿಸಬಹುದು.
ಆ್ಯಪ್ ನಿಂದ ಸಾರ್ವಜನಿಕರು ನೀಡಿದ ದೂರು ಅಥವಾ ಶ್ಲಾಘನೆಯನ್ನು ಪರಿಗಣಿಸಿ ಸರ್ಕಾರ ಸೂಕ್ತ ಸೌಲಭ್ಯ ನೀಡುವುದು, ನಿರ್ಲಕ್ಷ್ಯ ವಹಿಸಿದ್ದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದು ಮತ್ತು ಉತ್ತಮ ಸೌಲಭ್ಯ ಸೌಲಭ್ಯ ಒದಗಿಸುವುದು, ಬಹುಮಾನ ನೀಡಿ ಪ್ರೋತ್ಸಾಹಿಸಲು ಕೇಂದ್ರ ಕುಟುಂಬ ಮತ್ತು ಆರೋಗ್ಯ ಕಲ್ಯಾಣ ಇಲಾಖೆ ನಿರ್ಧರಿಸಿದೆ. ಈ ಯೋಜನೆಯಿಂದ ಜನರು ಆಸ್ಪತ್ರೆಯಲ್ಲಿ ಸೂಕ್ತ ಸೌಲಭ್ಯ ದೊರೆಯದೇ ಸಂಕಷ್ಟದಲ್ಲಿದ್ದರೇ ನೇರವಾಗಿ ಅಧಿಕಾರಿಗಳಿಗೆ ಸಂಪರ್ಕಿಸಬಹುದು. ಇದೊಂದು ಕ್ರಾಂತಿಕಾರಿ ನಿರ್ಧಾರವಾಗಿದ್ದು, ಬಡ ಜನರಿಗೆ ಅನುಕೂಲವಾಗಲಿದೆ. ಅಲ್ಲದೇ ಸೂಕ್ತ ಸೌಲಭ್ಯ ನೀಡದೇ ಸತಾಯಿಸುವ ಸರ್ಕಾರಿ ಆಸ್ಪತ್ರೆ ಸಿಬ್ಬಂದಿಗೆ ತಕ್ಕ ಪಾಠ ಕಲಿಸಲು ಅವಕಾಶ ನೀಡುತ್ತದೆ.
Leave A Reply