ಹತ್ತು ದಿನದಲ್ಲಿ ಕರ್ನಾಟಕಕ್ಕೆ ಅಬ್ಬರಿಸಲಿವೆ ಮೋದಿ, ಶಾ, ಯೋಗಿ 65 ಅಲೆ, ಸಿಎಂಗಿಲ್ಲಿ ನಡುಕ!
ಬೆಂಗಳೂರು: ಕರ್ನಾಟಕದಲ್ಲಿ ದಿನೇದಿನೆ ಚುನಾವಣೆ ಕಾವು ರಂಗೇರುತ್ತಿದೆ. ಆಡಳಿತ ವಿರೋಧಿ ಅಲೆ ರಾಜ್ಯ ಸರ್ಕಾರವನ್ನು ನಲುಗಿಸುತ್ತಿದ್ದರೆ, ಈ ಬಾರಿ ಗೆದ್ದೇ ತೀರಲು ಬಿಜೆಪಿ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಇದರ ಬೆನ್ನಲ್ಲೇ ಬಿಜೆಪಿಯ ಘಟಾನುಘಟಿಗಳೇ ರಾಜ್ಯಕ್ಕೆ ಆಗಮಿಸಲಿದ್ದು, ರಾಜ್ಯದಲ್ಲಿ ಬಿಜೆಪಿ ಪರ ಇರುವ ಅಲೆ ಮತ್ತಷ್ಟು ಜೋರಾಗಲಿದೆ ಎಂದೇ ಹೇಳಲಾಗುತ್ತಿದೆ.
ಹೌದು, ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಆಗಮಿಸಿ ಅಬ್ಬರದ ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ. ಇದರ ನಡುವೆಯೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಉತ್ತರ ಪ್ರದೇಶ ಯೋಗಿ ಆದಿತ್ಯನಾಥ ಸಹ ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಈ ಮೂವರುಳ್ಳ ರುಸ್ತುಂ ಜೋಡಿ ಮುಂದಿನ 10 ದಿನದಲ್ಲಿ ಬರೋಬ್ಬರಿ 65 ರ್ಯಾಲಿ ನಡೆಸಲಿದ್ದು, ಎರಡು ಕಡೆ ಸ್ಪರ್ಧಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನಡುಕವೇ ಉಂಟಾಗಿದೆ ಎಂದು ಹೇಳಲಾಗುತ್ತಿದೆ.
ಮೇ 10ರಂದು ಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದ್ದು, ಇದಕ್ಕೂ ಮುನ್ನ ಈ ಮೂವರು ನಾಯಕರು ರಾಜ್ಯದಲ್ಲಿ ಬಿಜೆಪಿ ಪರ ಭರ್ಜರಿಯಾಗಿ ಪ್ರಚಾರ ಮಾಡಲಿದ್ದಾರೆ. ರ್ಯಾಲಿ ವೇಳೆ ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಿದ ಅನುದಾನ, ರಾಜ್ಯ ಸರ್ಕಾರದ ವೈಫಲ್ಯ, ರಾಜ್ಯದಲ್ಲಿ ಮುಂದೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಕೈಗೊಳ್ಳುವ ಅಭಿವೃದ್ಧಿ ಕಾರ್ಯಗಳು ಸೇರಿ ಹಲವು ವಿಚಾರಗಳನ್ನು ಪ್ರಸ್ತಾಪಿಸಲಿದ್ದಾರೆ ಎಂದು ತಿಳಿದುಬಂದಿದೆ.
Leave A Reply