ಮೋದಿ ಜಾಗತಿಕ ನಾಯಕ ಎಂಬುದಕ್ಕೆ ಮತ್ತೊಂದು ಸಾಕ್ಷಿ, ಫೇಸ್ ಬುಕ್ ನಲ್ಲಿ ಮೋದಿಗೇ ಹೆಚ್ಚು ಫಾಲೋವರ್ಸ್!
ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಭಾರತದ ಖ್ಯಾತಿ ವಿಶ್ವಮಟ್ಟದಲ್ಲಿ ಮಿನುಗುತ್ತಿದೆ. ನರೇಂದ್ರ ಮೋದಿ ಅವರು ಯಾವುದೇ ದೇಶಕ್ಕೆ ಹೋದರೂ, ಅಲ್ಲಿ ಭವ್ಯ ಸ್ವಾಗತವೊಂದು ಕಾದಿರುತ್ತದೆ ಹಾಗೂ ಮೋದಿ ಸ್ವಾಗತಿಸಲು ಆ ರಾಷ್ಟ್ರಗಳ ನಾಯಕರು ತುದಿಗಾಲಿನಲ್ಲಿ ನಿಂತಿರುತ್ತಾರೆ.
ಹೀಗೆ ನರೇಂದ್ರ ಮೋದಿ ಅವರು ಭಾರತವನ್ನು ಅಭಿವೃದ್ಧಿ ಮಾಡುತ್ತ, ಬೇರೆ ರಾಷ್ಟ್ರಗಳನ್ನು ಸೆಳೆಯುತ್ತ ವಿಶ್ವಾ ನಾಯಕರಾಗಿದ್ದಾರೆ ಎಂಬುದಕ್ಕೆ ಮತ್ತೊಂದು ಸಾಕ್ಷಿ ದೊರೆತಿದೆ.
ಹೌದು, ಪ್ರಮುಖ ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೇ ಅತ್ಯಧಿಕ ಫಾಲೋವರ್ಸ್ ಹೊಂದಿದ್ದಾರೆ ಎಂದು ಬರ್ಸನ್ ಮಾರ್ಟ್ ಸ್ಟೆಲ್ಲರ್ ಎಂಬ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ಬಹಿರಂಗವಾಗಿದೆ.
ಪ್ರಸ್ತುತ ನರೇಂದ್ರ ಮೋದಿ ಅವರು ಫೇಸ್ ಬುಕ್ ನಲ್ಲಿ ಬರೋಬ್ಬರಿ 43.2 ದಶಲಕ್ಷ ಫಾಲೋವರ್ಸ್ ಗಳನ್ನು ಹೊಂದಿದ್ದಾರೆ. ಇವರ ನಂತರದ ಸ್ಥಾನದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದ್ದು, ಇವರು 23.1 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ. ಅಲ್ಲಿಗೆ ವರದಿ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ಅವರು ಫೇಸ್ ಬುಕ್ ನಲ್ಲಿ ಡೊನಾಲ್ಡ್ ಟ್ರಂಪ್ ಅವರಿಗಿಂತ ಎರಡು ಪಟ್ಟು ಫಾಲೋವರ್ಸ್ ಹಾಗೂ ಖ್ಯಾತಿಯನ್ನು ಹೊಂದಿದ್ದಾರೆ ಎಂಬುದು ಸಾಬೀತಾದಂತಾಗಿದೆ.
9.6 ದಶಲಕ್ಷ ಫಾಲೋವರ್ಸ್ ಹೊಂದಿರುವ ಕಾಂಬೋಡಿಯಾ ಪ್ರಧಾನಿ ಹುನ್ ಸೇನ್ ನಂತರದ ಸ್ಥಾನದಲ್ಲಿದ್ದಾರೆ. ಒಟ್ಟಿನಲ್ಲಿ ದಿನೇದಿನೆ ಪ್ರಧಾನಿ ನರೇಂದ್ರ ಮೋದಿ ಅವರ ಖ್ಯಾತಿ ವಿಶ್ವಮಟ್ಟದಲ್ಲಿ ಜಾಸ್ತಿಯಾಗುತ್ತಿದೆ ಎಂಬುದಕ್ಕೆ ಇದು ಉತ್ತಮ ನಿದರ್ಶನವಾಗಿದೆ.
Leave A Reply