ಮುದ್ರಾ ಬ್ಯಾಂಕ್ ಯೋಜನೆ ಅನ್ವಯ ಕೇಂದ್ರ ಸರ್ಕಾರ ಇದುವರೆಗೆ ಎಷ್ಟು ಲಕ್ಷ ಉದ್ಯೋಗ ಸೃಷ್ಟಿಸಿದೆ ಗೊತ್ತಾ?
ರಾಹುಲ್ ಗಾಂಧಿ ಅವರದ್ದು ಒಂದೇ ವರಾತ. ಪ್ರಧಾನಿ ನರೇಂದ್ರ ಮೋದಿ ಅವರು ಎರಡು ಕೋಟಿ ಉದ್ಯೋಗ ಸೃಷ್ಟಿಸುತ್ತೇನೆ ಎಂದು ಹೇಳಿದರು. ಆದರೆ ದೇಶದಲ್ಲಿ ಎಲ್ಲಿ ಉದ್ಯೋಗ ಸೃಷ್ಟಿಸಲಾಗಿದೆ? ಬದಲಾಗಿ ಯುವಕರು ಉದ್ಯೋಗ ಕಳೆದುಕೊಳ್ಳುತ್ತಿದ್ದಾರೆ. ದೇಶ ದಿವಾಳಿಯಾಗುತ್ತಿದೆ ಎಂದು ರಾಹುಲ್ ಗಾಂಧಿ ಯಾವಾಗಲೂ ಆಡಿದ ರಾಗವನ್ನೇ ಆಡುತ್ತಾರೆ.
ಆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಮುದ್ರಾ ಬ್ಯಾಂಕ್ ಯೋಜನೆ ಅನ್ವಯ ಸುಮಾರು 3.5 ಕೋಟಿ ಉದ್ಯೋಗ ಸೃಷ್ಟಿಸಲಿದೆ ಎಂದು ತಿಳಿದುಬಂದಿದ್ದು, 2019ರ ಚುನಾವಣೆಗೆ ಈ ಅಂಶ ನರೇಂದ್ರ ಮೋದಿ ಅವರಿಗೆ ಸಕಾರಾತ್ಮಕವಾಗಿ ಪರಿಣಾಮ ಬೀರಲಿದೆ ಎಂದೇ ಹೇಳಲಾಗುತ್ತಿದೆ.
ಈ ಕುರಿತು ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್ ಖಾಸಗಿ ಸುದ್ದಿವಾಹಿನಿಯೊಂದಿಗೆ ಮಾತನಾಡಿದ್ದು, ದೇಶದಲ್ಲಿ ಉದ್ಯೋಗ ಸೃಷ್ಟಿಸಲಾಗುತ್ತಿದೆಯೇ ಹೊರತು, ಯಾರೂ ಉದ್ಯೋಗ ಕಳೆದುಕೊಂಡಿಲ್ಲ. 2017ರಲ್ಲೇ ಮುದ್ರಾ ಬ್ಯಾಂಕ್ ಯೋಜನೆಯಡಿ ಸುಮಾರು 70 ಲಕ್ಷ ಉದ್ಯೋಗ ಸೃಷ್ಟಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಆದಾಗ್ಯೂ ದೇಶದಲ್ಲಿ ಉದ್ಯೋಗ ಕಳೆದುಕೊಳ್ಳುತ್ತಿರುವ ಕುರಿತು ಹಬ್ಬಿರುವ ಸುದ್ದಿಗಳೆಲ್ಲವೂ ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ.
ನನಗೆ ಸಿಕ್ಕಿರುವ ಮಾಹಿತಿ ಪ್ರಕಾರ 18-21 ವರ್ಷದೊಳಗಿನ ಯುವಕರಿಗೇ ಸುಮಾರು 2.2 ದಶಲಕ್ಷ ಉದ್ಯೋಗ ಸೃಷ್ಟಿಸಲಾಗಿದೆ. ದಿನೇದಿನೇ ಭಾರತದಲ್ಲಿ ಉದ್ಯೋಗಿಗಳ ಸಂಖ್ಯೆ ಜಾಸ್ತಿಯಾಗುತ್ತಿದ್ದು, ಮತ್ತಷ್ಟು ಉದ್ಯೋಗ ಸೃಷ್ಟಿಸುವ ಲಕ್ಷಣಗಳು ಸಹ ಇವೆ ಎಂದು ರಾಜೀವ್ ಕುಮಾರ್ ತಿಳಿಸಿದ್ದಾರೆ.
ಈ ಎಲ್ಲ ಅಂಶಗಳ ಪ್ರಕಾರ ಕೇಂದ್ರ ಸರ್ಕಾರ ಸುಮಾರು ಮೂರುವರೆ ಕೋಟಿ ಉದ್ಯೋಗ ಸೃಷ್ಟಿಸುವ ಅವಕಾಶ ಹೊಂದಿದೆ ಎಂಬ ಕುರಿತು ಸುಳಿವು ಸಿಕ್ಕಿದ್ದು, ಹಾಗೊಂದು ವೇಳೆ ಕೇಂದ್ರ ಸರ್ಕಾರ ಇಷ್ಟು ಕೋಟಿ ಉದ್ಯೋಗ ಸೃಷ್ಟಿಸಿದ್ದೇ ಆದರೆ ರಾಹುಲ್ ಗಾಂಧಿ ಮತ್ತೆ ಹತ್ತು ವರ್ಷ ಬಾಯಿಗೆ ಬೀಗ ಹಾಕಿಕೊಂಡೇ ಇರಬೇಕಾಗುತ್ತದೆ ಎಂದೇ ಹೇಳಲಾಗುತ್ತಿದೆ. ಒಟ್ಟಿನಲ್ಲಿ ರಾಹುಲ್ ಗಾಂಧಿ ಏನೇ ಆರೋಪ ಮಾಡಿದರೂ, ಕೇಂದ್ರ ಸರ್ಕಾರ ಮಾತ್ರ ಉದ್ಯೋಗ ಸೃಷ್ಟಿಯಲ್ಲಿ ಮುಂದಿದೆ ಎಂಬ ರಾಜೀವ್ ಕುಮಾರ್ ಅವರ ಹೇಳಿಕೆ ಸಂತಸದಾಯಕವಾಗಿದೆ.
Leave A Reply