• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕರ್ನಾಟಕ ಪೊಲೀಸರಿಗೆ ಕೇಸರಿ ಪಟ್ಟ ಕಟ್ಟಿದ ಮೇವಾನಿಗೆ ಖಡಕ್ ಉತ್ತರ

TNN Correspondent Posted On May 5, 2018
0


0
Shares
  • Share On Facebook
  • Tweet It

ಚಿಕ್ಕಮಗಳೂರು: ಪ್ರಶ್ನಿಸುವುದನ್ನೇ ಕಾಯಕ ಮಾಡಿಕೊಂಡಿರುವ ಜಿಗ್ನೇಶ್ ಮೇವಾನಿ, ಪ್ರಕಾಶ ರೈ ಅವರಂಥವರಿಗೆ ದೇಶದ ಸಂವಿಧಾನದ ಅಡಿಯಲ್ಲಿ ಕೈಗೊಂಡಿರುವ ನಿಯಮಗಳನ್ನೇ ಪ್ರಶ್ನಿಸುವ, ಆಡಳಿತ ವ್ಯವಸ್ಥೆಯನ್ನು ಕೀಳಾಗಿ ನೋಡುವ ಪ್ರವೃತಿ ಮುಂದುವರಿದಿದೆ. ಇತ್ತೀಚೆಗೆ ಚಿಕ್ಕಮಗಳೂರಿನಲ್ಲಿ  ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಪೊಲೀಸರು ದಾಖಲಿಸಿದ ಎಫ್‌ಐಆರ್‌ ದಾಖಲಿಸಿದಕ್ಕೆ ಮೇವಾನಿ ಪೊಲೀಸರನ್ನೇ ನಿಂದಿಸಿ ಟ್ವೀಟ್ ಮಾಡಿದ್ದರು. ಮೇವಾನಿ ಟ್ವೀಟ್ ಗೆ ಖಡಕ್ ಉತ್ತರ ನೀಡಿದ್ದಾರೆ.

ಮೇವಾನಿ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಚಿಕ್ಕಮಗಳೂರು ಪೊಲೀಸರು, ‘ಕಾರ್ಯಕ್ರಮ ರದ್ದುಪಡಿಸುವಲ್ಲಿ ಪೊಲೀಸರ ಪಾತ್ರವಿಲ್ಲ. ಚುನಾವಣಾಧಿಕಾರಿ ದೂರಿನಂತೆ ಕ್ರಮ ಕೈಗೊಳ್ಳಲಾಗಿದೆ. ಕರ್ನಾಟಕ ಪೊಲೀಸರ ವೃತ್ತಿಧರ್ಮ  ಪ್ರಶ್ನಿಸಬೇಡಿ.. ಮುಂದಿನ ಬಾರಿ ಈ ರೀತಿ ಬಾಲಿಶ ಹೇಳಿಕೆ ನೀಡಬೇಡಿ.. ಪ್ರೌಢತೆಯಿಂದ ವರ್ತಿಸಿ ಎಂದು ಖಡಕ್ ಉತ್ತರ ನೀಡಿದ್ದಾರೆ.  ಮೇವಾನಿ ಟ್ವೀಟ್ ಬಗ್ಗೆ ಪ್ರತಿಕ್ರಿಯಿಸಿರುವ ಚಿಕ್ಕಮಗಳೂರು ಎಸ್‌ಪಿ ಕೆ. ಅಣ್ಣಾಮಲೈ, ಪೊಲೀಸರ ಕರ್ತವ್ಯನಿಷ್ಠೆಯನ್ನು ಪ್ರಶ್ನಿಸುವುದು ನೋವು ಉಂಟು ಮಾಡಿದೆ’ ಎಂದು ಹೇಳಿದರು.

ಸಂವಿಧಾನ ಉಳಿವಿಗಾಗಿ ಕರ್ನಾಟಕ ಮತ್ತು ಹೋರಾಟ ಗೀತೆ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದ್ದ ಜಿಗ್ನೇಶ್ ಮೇವಾನಿ, ನಟ ಪ್ರಕಾಶ್‌ ರಾಜ್ ಮತ್ತು ಕಲ್ಕುಳಿ ವಿಠಲ್ ಹೆಗ್ಡೆ ಸಹಿತ 18 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಕಾರ್ಯಕ್ರಮ ಸಂಘಟಿಸಲು ಅನುಮತಿ ಕೋರಿ ಪತ್ರ ಬರೆದಿದ್ದರೂ, ಅನುಮತಿ ನೀಡದಿದ್ದರೂ, ಆದರೂ ನೂರಾರು ಜನರನ್ನು ಸೇರಿಸಿ ಕಾರ್ಯಕ್ರಮ ನಡೆಸಿ, ನೀತಿ ಸಂಹಿತೆ ಉಲ್ಲಂಘಿಸಲಾಗಿತ್ತು. ಈ ಕುರಿತು ಚುನಾವಣೆ ವೀಕ್ಷಕಿ ತುಷಾರಮಣಿ ಪೊಲೀಸರಿಗೆ ದೂರು ನೀಡಿದ್ದರು.

ನೀತಿ ಸಂಹಿತೆ ಉಲ್ಲಂಘನೆ ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದರು. ಆದರೆ ಈ ಬಗ್ಗೆ ಆಕ್ಷೇಪಿಸಿದ್ದ ಮೇವಾನಿ, ನಮ್ಮ ಧ್ವನಿಯನ್ನು ಹತ್ತಿಕ್ಕಲಾಗುತ್ತಿದೆ. ನಾನು ಮತ್ತು ಪ್ರಕಾಶ್‌ ರಾಜ್‌ಗೆ ಮಾತನಾಡಲು ಪೊಲೀಸರು ಅವಕಾಶ ನೀಡಲಿಲ್ಲ. ಕರ್ನಾಟಕ ಪೊಲೀಸರು ಕೇಸರಿಕರಣಗೊಂಡಿದ್ದಾರೆ ಎಂದು ಟ್ವೀಟ್ ಮಾಡಿದ್ದರು.

One more childish attempt to silence our voice. Me and @prakashraaj are nt allowed to speak at Chittamanglore for reasons best know to saffronized police of Karnataka. Fact that they can't ignore us indicates that BJP is scared of citizens who raise real concrete issue like jobs

— Jignesh Mevani (@jigneshmevani80) May 3, 2018

0
Shares
  • Share On Facebook
  • Tweet It




Trending Now
20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
Tulunadu News July 5, 2025
20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
Tulunadu News July 5, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
  • Popular Posts

    • 1
      20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 2
      20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • 3
      ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • 4
      ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • 5
      ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು

  • Privacy Policy
  • Contact
© Tulunadu Infomedia.

Press enter/return to begin your search