• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ದೇಶ ಭಕ್ತಿಗಿದು ಸಾಕ್ಷಿ: ಜಿನ್ನಾ ಭಾವಚಿತ್ರ ಸುಟ್ಟವರಿಗೆ ಒಂದು ಲಕ್ಷ ಬಹುಮಾನ ಎಂದ ಮುಸ್ಲಿಂ ಮುಖಂಡ

TNN Correspondent Posted On May 5, 2018


  • Share On Facebook
  • Tweet It

ರಾಮಪುರ: ಭಾರತವನ್ನು ಪಾಕಿಸ್ತಾನದ ಹೆಸರಲ್ಲಿ ಒಡೆದು, ಲಕ್ಷಾಂತರ ಹಿಂದೂಗಳ ಮಾರಣಹೋಮಕ್ಕೆ ಕಾರಣನಾದ ಪಾಕಿಸ್ತಾನದ ಜನಕ ಮಹಮ್ಮದ್ ಅಲಿ ಜಿನ್ನಾ ಮತ್ತು ಅವರ ರೀತಿಯ ವ್ಯಕ್ತಿತ್ವವನ್ನು ಹೊಂದಿದವರ ಭಾವಚಿತ್ರಗಳನ್ನು ಸುಟ್ಟವರಿಗೆ ಒಂದು ಲಕ್ಷ ರೂಪಾಯಿ ಬಹುಮಾನ ಘೋಷಿಸುವ ಮೂಲಕ ಅಖಂಡ ಭಾರತದ ಕಲ್ಪನೆಯನ್ನು ಉತ್ತರ ಪ್ರದೇಶದ ಅಖಿಲ ಭಾರತೀಯ ಮುಸ್ಲಿಂ ಮಹಾಸಂಘದ ಅಧ್ಯಕ್ಷ ಫರಾತ್ ಅಲಿ ಖಾನ್ ಬಿತ್ತಿದ್ದಾರೆ.

ಅಲಿಘಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ಭಾರತ ವಿಭಜಕ ಮಹಮ್ಮದ ಅಲಿ ಜಿನ್ನಾ ಭಾವಚಿತ್ರ ಅಳವಡಿಸಿರುವುದನ್ನು ತೆಗೆಯಬೇಕು ಎಂಬುದರ ಕುರಿತು ಉಂಟಾದ ಗಲಭೆಯ ಕುರಿತು ಈ ರೀತಿಯ ಪ್ರತಿಕ್ರಿಯೆ ನೀಡಿದ್ದಾರೆ. ಅಲಿಘಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ಜಿನ್ನಾ ಭಾವಚಿತ್ರ ತೆಗೆಯಬೇಕು ಎಂದು ರಾಷ್ಟ್ರಭಕ್ತ ಸಂಘಟನೆಗಳು ಆಗ್ರಹಿಸಿ, ಪ್ರತಿಭಟನೆ ನಡೆಸಿದ್ದವು. ಇದನ್ನು ವಿರೋಧಿಸಿ ಕೆಲ ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಇದರಿಂದ ವಿಶ್ವವಿದ್ಯಾಲಯದಲ್ಲಿ ಗಲಭೆಗಳು ನಡೆದಿದ್ದವು. ಜಿನ್ನಾ ಭಾವಚಿತ್ರ ಅಳವಡಿಸಿದಕ್ಕೆ ರಾಷ್ಟ್ರಾಧ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ಗಲಭೆ ಕುರಿತು ಫರಾತ್ ಅಲಿ ಖಾನ್  ಆಕ್ರೋಶ ವ್ಯಕ್ತಪಡಿಸಿದ್ದು, ಜಿನ್ನಾ ಭಾವಚಿತ್ರವನ್ನು ಅಲಿಘಡಂ ಮುಸ್ಲಿಂ ವಿಶ್ವವಿದ್ಯಾಲಯದಿಂದ ತೆಗೆದು ಹಾಕಬೇಕು. ಪಾಕಿಸ್ತಾನದ ಯಾವುದೇ ಸರ್ಕಾರಿ ಕಚೇರಿಗಳಲ್ಲಿ ಭಾರತದ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳಿಲ್ಲ. ನಾವೇಕೆ ಭಾರತದಲ್ಲಿ ದೇಶವಿರೋಧಿಗಳ ಭಾವಚಿತ್ರವನ್ನು ಅಳವಡಿಸಬೇಕು. ಜಿನ್ನಾ ತರಹದ ವ್ಯಕ್ತಿಗಳ ಭಾವಚಿತ್ರವನ್ನು ತೆಗೆದು ಹಾಕಬೇಕು. ಯಾರಾದರೂ ಮಹಮ್ಮದ್ ಅಲಿ ಜಿನ್ನಾ ಮತ್ತು ಆತರದ ವ್ಯಕ್ತಿಗಳ ಭಾವ ಚಿತ್ರ ಮತ್ತು ಪೋಸ್ಟರ್ ಗಳನ್ನು ಬಹಿರಂಗವಾಗಿ ಸುಟ್ಟುಹಾಕಿದರೇ ಒಂದು ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ. ಈ ಮೂಲಕ ದೇಶವಿರೋಧಿ ಕೆಲ ಮುಸ್ಲಿಂ ಸಂಘಟನೆಗಳಿಗೆ ತಕ್ಕ ಉತ್ತರವನ್ನು ಫರಾತ್ ಅಲಿ ಖಾನ್ ನೀಡಿದ್ದಾರೆ.

#WATCH: Farhat Ali Khan, National Head of All-India Muslim Mahasangh says, 'I appeal everyone to tear & burn down posters of Jinnah & people like him. I announce a reward of Rs 1 Lakh for the one who burns down the poster.' (04.05.2018) pic.twitter.com/HLUcJBhw4R

— ANI UP (@ANINewsUP) May 4, 2018

  • Share On Facebook
  • Tweet It


- Advertisement -


Trending Now
ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
Tulunadu News March 30, 2023
ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
Tulunadu News March 29, 2023
Leave A Reply

  • Recent Posts

    • ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
    • ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
  • Popular Posts

    • 1
      ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
    • 2
      ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • 3
      ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • 4
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • 5
      ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search