ಪಾಕ್ ವಿರುದ್ಧ ಕಠಿಣ ಕ್ರಮ ಅಗತ್ಯ: 26/11 ದಾಳಿಯಲ್ಲಿ ಭಾಗಿಯಾದ ಯೋಧನ ಮನವಿ
ದೆಹಲಿ: ವಿಶ್ವದಲ್ಲಿ ಶಾಂತಿ ಬಯಸುವ ಎಲ್ಲ ರಾಷ್ಟ್ರಗಳು ಒಟ್ಟಾಗಿ ಪಾಕಿಸ್ತಾನದ ಮೇಲೆ ದಾಳಿ ಮಾಡಿ, ಹಣಿಯುವ ಕೆಲಸ ಮಾಡಬೇಕು ಇಲ್ಲದಿದ್ದರೇ ಶಾಂತಿ ನೆಲೆಸುವುದಿಲ್ಲ ಎಂದು 26/11ರ ಮುಂಬೈ ದಾಳಿಯಲ್ಲಿ ಭಾಗಿಯಾಗಿದ್ದ ಕಮಾಂಡೋ ಸುರೇಂದರ್ ಸಿಂಗ್ ಸಲಹೆ ನೀಡಿದ್ದಾರೆ.
ಪಾಕಿಸ್ತಾದ ಭಯೋತ್ಪಾದಕ ರಾಷ್ಟ್ರ. ಈ ವಿಷಯ ಇಡೀ ವಿಶ್ವಕ್ಕೆ ತಿಳಿದಿದೆ. ಪಾಕಿಸ್ತಾನ ಮಾಜಿ ಪ್ರಧಾನಿಯ ಈ ಸತ್ಯವನ್ನು ಒಪ್ಪಿಕೊಂಡಿದ್ದಾರೆ. ಆದ್ದರಿಂದ ಶಾಂತಿ ಬಯಸುವ ಎಲ್ಲ ರಾಷ್ಟ್ರಗಳು ಕೂಡಲೇ ಪಾಕಿಸ್ತಾನದ ವಿರುದ್ಧ ಕಾರ್ಯಾಚರಣೆ ನಡೆಸಬೇಕು ಎಂದು ಮನವಿ ಮಾಡಿದ್ದಾರೆ.
ಇತ್ತೀಚೆಗೆ ಪಾಕಿಸ್ತಾನದ ಪ್ರಮುಖ ಪತ್ರಕೆ ಡಾನ್ ಗೆ ನೀಡಿರುವ ಸಂದರ್ಶನದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ 26/11 ರ ದಾಳಿಯಲ್ಲಿ ಪಾಕಿಸ್ತಾನದ ಕೈವಾಡವಿತ್ತು ಎಂಬುದನ್ನು ಒಪ್ಪಿಕೊಂಡಿದ್ದರು. ದಾಳಿಗೆ ಪಾಕಿಸ್ತಾನದ ಕುಮ್ಮಕ್ಕು ನೀಡಿತ್ತು ಎಂಬ ಸತ್ಯವನ್ನು ಒಪ್ಪಿಕೊಂಡಿದ್ದರು. ಈ ಕುರಿತು ಪ್ರತಿಕ್ರಿಯಿಸಿರುವ ಕಮಾಂಡೋ ಸುರೇಂದರ್ ಸಿಂಗ್ ಪಾಕಿಸ್ತಾನದ ವಿರುದ್ಧ ಶಾಂತಿ ಬಯಸುವ ಎಲ್ಲ ರಾಷ್ಟ್ರಗಳು ಒಗ್ಗೂಡಿ ಕಾರ್ಯಾಚರಣೆ ನಡೆಸಬೇಕು. ಇಲ್ಲಿದಿದ್ದಲ್ಲಿ ಸಮಸ್ಯೆ ತೀವ್ರವಾಗಲಿದೆ ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.
Leave A Reply