ಟಿಎಂಸಿ ಕಾರ್ಯಕರ್ತರ ಅಟ್ಟಹಾಸ: ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ, ಮನೆ ಧ್ವಂಸ
ಕೊಲ್ಕತ್ತಾ: ಒಂದೇಡೆ ದೇಶದಲ್ಲಿ ಪ್ರಜಾಪ್ರಭುತ್ವ ಆತಂಕದಲ್ಲಿದೆ ಎಂದು ಬೊಗಳೇ ಬಿಡುವ ಎಡಬಿಡಂಗಿಗಳಿಗೆ ನಮ್ಮದೇ ದೇಶದ ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ, ಅನ್ಯಾಯ, ಅನಾಚಾರಗಳು ಕಾಣದಿರುವುದು ದುರಂತ. ಪಶ್ಚಿಮ ಬಂಗಾಳದಲ್ಲಿ ವಿರೋಧ ಪಕ್ಷಗಳ ಕಾರ್ಯಕರ್ತರನ್ನು ಆಡಳಿತದಲ್ಲಿರುವ ಪಕ್ಷದ ಕಾರ್ಯಕರ್ತರು, ಮುಖಂಡರು, ಸಚಿವರೇ ಹಿಡಿದು ಅಟ್ಟಾಡಿಸಿಕೊಂಡು ಹೊಡೆಯುವ ದೃಶ್ಯಗಳು ಸಾಮಾನ್ಯವಾಗಿವೆ. ಇದೀಗ ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಗೆ ಬೆಂಬಲ ನೀಡಿಲ್ಲ ಎಂದು ಬಿಜೆಪಿ ಕಾರ್ಯಕರ್ತನ ಮನೆ ಮೇಲೆ ದಾಳಿ ನಡೆಸಿ, ಇಡೀ ಮನೆಯನ್ನೇ ನಾಶ ಪಡಿಸಲಾಗಿದೆ.
ಪಶ್ಚಿಮ ಬಂಗಾಳದ ಜಲ್ಪೈಗುರಿ ಪ್ರದೇಶದ ಬಿಜೆಪಿ ಕಾರ್ಯಕರ್ತನ ಮೇಲೆ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ದಾಳಿ ನಡೆಸಿದ್ದು, ಆತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಅಲ್ಲದೇ ಇಡೀ ಮನೆಯನ್ನು ನಾಶ ಪಡಿಸಿ, ಧರ್ಪ ಮೆರೆದಿದ್ದಾರೆ. ಇತ್ತೀಚೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಸ್ಥಳೀಯ ಚುನಾವಣೆಯಲ್ಲಿ ತೀವ್ರ ಹಿಂಸಾಚಾರ ನಡೆಸಲಾಗಿತ್ತು. ಸುಮಾರು 20 ಜನರನ್ನು ಹತ್ಯೆ ಮಾಡಲಾಗಿತ್ತು, ಬ್ಯಾಲೆಟ್ ಬಾಕ್ಸ್ ಗಳನ್ನು ದೋಚಿಮ ಮತದಾನಕ್ಕೆ ಅಡ್ಡಿ ಪಡಿಸಲಾಗಿತ್ತು. ಆದರೆ ಪಶ್ಚಿಮ ಬಂಗಾಳದಲ್ಲಿ ಇಷ್ಟೇಲ್ಲ ನಡೆದರೂ ನಮ್ಮ ದೇಶದ ಪ್ರಜಾಪ್ರಭುತ್ವದ ಉಳಿವಿಗಾಗಿ ಹೋರಾಡುವ ಯಾವೋಬ್ಬ ಡೋಂಗಿ ಹೋರಾಟಗಾರರು ಪಶ್ಚಿಮ ಬಂಗಾಳ ಸರ್ಕಾರದ ಬಗ್ಗೆ ತುಟಿ ಬಿಚ್ಚಲಿಲ್ಲ. ಬಿಚ್ಚುತ್ತಿಲ್ಲ. ಪ್ರಜಾಪ್ರಭುತ್ವ ಆತಂಕದಲ್ಲಿದೆ ಎಂದು ಹೇಳಲಿಲ್ಲ. ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರ ಅಟ್ಟಹಾಸಕ್ಕೆ ಬಿಜೆಪಿ ಕಾರ್ಯಕರ್ತನ ಮನೆ ಹಾಳಾಗಿದ್ದು, ಕೂಡಲೇ ಸೂಕ್ತ ಭದ್ರತೆ ಒದಗಿಸಬೇಕು ಎಂದು ಕುಟುಂಬಸ್ಥರು ಆಗ್ರಹಿಸಿದ್ದಾರೆ.
Leave A Reply