• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

1 ಲಕ್ಷ ಉದ್ಯೋಗ ಸೃಷ್ಟಿಗೆ ಚಿಂತನೆ, ಹೊಸ ಭಾಷ್ಯ ಬರೆದ ಮಧ್ಯಪ್ರದೇಶ ಬಿಜೆಪಿ ಸರ್ಕಾರ

TNN Correspondent Posted On May 27, 2018
0


0
Shares
  • Share On Facebook
  • Tweet It

ಭೋಪಾಲ್: ಯಾವುದೇ ರಾಜ್ಯ ಸರ್ಕಾರವಿರಲಿ, ತಾನು ಆಡಳಿತ ನಡೆಸಿದ ಅವಧಿಯಲ್ಲಿ ಇಷ್ಟು ಉದ್ಯೋಗ ಸೃಷ್ಟಿಸಿದ್ದೇವೆ ಎಂದು ಹೇಳುತ್ತದೆಯೇ ಹೊರತು, ಒಂದೇ ದಿನ ಒಂದು ಲಕ್ಷ ಉದ್ಯೋಗ ಸೃಷ್ಟಿಸುತ್ತೇನೆ ಎಂದು ಘೋಷಿಸುವುದು ಕಷ್ಟಸಾಧ್ಯ. ಆದರೆ ಈ ಕಷ್ಟಸಾಧ್ಯವನ್ನೂ ಮಧ್ಯಪ್ರದೇಶ ಬಿಜೆಪಿ ಸರ್ಕಾರ ಸರಳಗೊಳಿಸಿದ್ದು, ಒಂದು ಲಕ್ಷ ಉದ್ಯೋಗ ಸೃಷ್ಟಿಸುವುದಾಗಿ ಘೋಷಿಸಿದೆ.

ಹೌದು, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಇಂತಹ ಮಹತ್ತರ ನಿರ್ಧಾರ ಘೋಷಿಸಿದ್ದು, ರಾಜ್ಯದ 51 ಜಿಲ್ಲೆಗಳಲ್ಲಿ ಮಹಾಪಂಚಾಯಿತಿ ಸೃಷ್ಟಿಸಿ, ಸುಮಾರು 1 ಲಕ್ಷ ಯುವಕರಿಗೆ ಉದ್ಯೋಗ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಈ ಕುರಿತು ಮಧ್ಯಪ್ರದೇಶ ಕೌಶಲ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿ ಮಂಡಳಿಯು ಪುಣೆ ಮೂಲದ ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಂಡಿದ್ದು, ಖಾಸಗಿ ಮತ್ತು ಸರ್ಕಾರಿ ಸಹಭಾಗಿತ್ವದಲ್ಲಿ ಮಹಾ ಪಂಚಾಯಿತಿ ಸ್ಥಾಪನೆ ಮಾಡಲಾಗುತ್ತದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಜುಲೈನಲ್ಲಿ ರಾಜ್ಯದ 51 ಜಿಲ್ಲೆಗಳಲ್ಲಿ ಮಹಾಪಂಚಾಯಿತಿ ಸ್ಥಾಪನೆ ಮಾಡಲಿದ್ದು, ಖಾಸಗಿ ಸಹಭಾಗಿತ್ವಕ್ಕಾಗಿ ಸುಮಾರು ಒಂದು ಸಾವಿರ ಖಾಸಗಿ ಕಂಪನಿಗಳಿಗೆ ಮಂಡಳಿ ಆಹ್ವಾನ ನೀಡಿದೆ. ಸ್ಥಾಪನೆ ಮಾಡುವ ಕುರಿತು ಇದುವರೆಗೂ ದಿನಾಂಕ ನಿಗದಿಯಾಗಿಲ್ಲ ಎಂದು ತಿಳಿದುಬಂದಿದೆ.

ಮಧ್ಯಪ್ರದೇಶದಲ್ಲಿ ಸುಮಾರು 11.24 ಲಕ್ಷ ಪದವೀಧರ ಯುವಕರು ನಿರುದ್ಯೋಗ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು 2018ರ ಎಕನಾಮಿಕ್  ಸಮೀಕ್ಷೆಯಿಂದ ಬಹಿರಂಗವಾಗಿದ್ದು, ಈ ಸಮಸ್ಯೆ ನಿವಾರಣೆಗಾಗಿ ರಾಜ್ಯ ಸರ್ಕಾರ ಒಂದು ಲಕ್ಷ ಉದ್ಯೋಗ ಸೃಷ್ಟಿಗೆ ಮುಂದಾಗಿದೆ. ಅಲ್ಲದೆ 51 ಜಿಲ್ಲೆಗಳಲ್ಲಿ ಮಹಾಪಂಚಾಯಿತಿ ನಿರ್ಮಾಣ ಮಾಡುವುದರಿಂದ ಅಧಿಕಾರದ ವಿಕೇಂದ್ರೀಕರಣ ಹಾಗೂ ಸ್ಥಳೀಯ ಆಡಳಿತ ಬಲವಾಗಲಿದೆ ಎಂದೇ ಹೇಳಲಾಗುತ್ತಿದೆ.

0
Shares
  • Share On Facebook
  • Tweet It




Trending Now
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
  • Popular Posts

    • 1
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search