• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿಯ ತೆಗಳುವವರೇ ಕೇಳಿ, 4 ವರ್ಷದಲ್ಲಿ ಅಲ್ಪಸಂಖ್ಯಾತರಿಗೆ ನೀಡುವ ಅನುದಾನ ಶೇ.62ರಷ್ಟು ಹೆಚ್ಚಿಸಲಾಗಿದೆ!

TNN Correspondent Posted On June 5, 2018
0


0
Shares
  • Share On Facebook
  • Tweet It

ಪ್ರಧಾನಿ ನರೇಂದ್ರ ಮೋದಿ ಎಂದರೆ ಮುಸ್ಲಿಂ ವಿರೋಧಿ, ಅಲ್ಪಸಂಖ್ಯಾತರ ವಿರೋಧಿ ಎನ್ನುವವರು ತುಂಬ ಜನರಿದ್ದಾರೆ. ಅಲ್ಪಸಂಖ್ಯಾತರನ್ನು ಗುತ್ತಿಗೆ ಪಡೆದವರಂತೆ ಆಡುವ ಕಾಂಗ್ರೆಸ್ ಮೋದಿ ಅವರನ್ನು ತೆಗಳಲು ಇದೊಂದೇ ಅಸ್ತ್ರವನ್ನೇ ಬಳಸುತ್ತದೆ.

ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ಮಾತ್ರ ಹಾಗಲ್ಲ. ಸರ್ವ ಜನಾಂಗದವರು, ಸರ್ವ ಸಮುದಾಯದವರನ್ನು ಒಗ್ಗೂಡಿ ಅಭಿವೃದ್ಧಿ ಮಾಡುತ್ತಿದ್ದಾರೆ. ಅದಕ್ಕಾಗಿಯೇ ಹಲವು ಯೋಜನೆ, ದಿಟ್ಟ ನಿರ್ಧಾರ ತೆಗೆದುಕೊಂಡಿದ್ದಾರೆ. ಆದರೆ ಇದನ್ನು ಮೋದಿ ಅವರನ್ನು ತೆಗಳುವ ದೃಷ್ಟಿಯಿಂದ, ಅಲ್ಪಸಂಖ್ಯಾತರ ಮತಪಡೆದೂ ಅವರನ್ನು ಅಭಿವೃದ್ಧಿಗೊಳಿಸದ ಕಾಂಗ್ರೆಸ್ಸಿಗರು ಸುಖಾಸುಮ್ಮನೆ ತೆಗಳುತ್ತಾರೆ.

ಆದರೆ ಮೋದಿ ಸರ್ಕಾರ ಕಳೆದ ನಾಲ್ಕು ವರ್ಷದಲ್ಲಿ ಅಲ್ಪಸಂಖ್ಯಾತರ ಏಳಿಗೆಗಾಗಿ ಹಲವು ಯೋಜನೆ ಜಾರಿಗೊಳಿಸಿದ್ದಾರೆ. ಅಷ್ಟೇ ಅಲ್ಲ, ಇದುವರೆಗೆ ಅಲ್ಪಸಂಖ್ಯಾತರ ಏಳಿಗೆಗೆ ನೀಡುತ್ತಿದ್ದ ಅನುದಾನವನ್ನು ಶೇ.62ರಷ್ಟು ಹೆಚ್ಚಿಸಲಾಗಿದೆ. ಪ್ರಸಕ್ತ ಸಾಲಿನ ಬಜೆಟ್ಟಿನಲ್ಲಿ ಇದುವರೆಗೂ ಅಲ್ಪಸಂಖ್ಯಾತರ ಏಳಿಗೆಗೆ ಮೀಸಲಿಡಲಾಗದಂತಹ ಹಣ, ಎಂದರೆ ಕೇಂದ್ರ ಸರ್ಕಾರ ಬರೋಬ್ಬರಿ 4,700 ಕೋಟಿ ರೂಪಾಯಿಗಳನ್ನು ಮೀಸಲಿಡುವ ಮೂಲಕ ಇತಿಹಾಸ ಬರೆಯಿತು.

ಇದುವರೆಗೂ ಯಾವುದೇ ಸರ್ಕಾರ ಅಲ್ಪಸಂಖ್ಯಾತರ ಏಳಿಗೆಗಾಗಿ ಮೀಸಲಿಟ್ಟರಿಲಿಲ್ಲ. ಈ ಹಣದಲ್ಲಿ ಪ್ರಸ್ತುತ 45 ಲಕ್ಷ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಪಡೆಯುತ್ತಿದ್ದಾರೆ. ಕೌಶಲ ಅಭಿವೃದ್ಧಿಗೊಳಿಸುತ್ತಿದ್ದಾರೆ. ಅಷ್ಟೇ ಅಲ್ಲ, ಮುಸ್ಲಿಮ್ ಮಹಿಳೆಯರು ಪುರುಷರ ಸಹಾಯವಿಲ್ಲದೆ ಹಜ್ ಯಾತ್ರೆ, ಅಂದರೆ ಸ್ವತಂತ್ರವಾಗಿ ಹಜ್ ಯಾತ್ರೆ ಕೈಗೊಳ್ಳಲು ಅನುಕೂಲ ಮಾಡಿದ್ದಾರೆ. ಆ ಮೂಲಕ ಮಹಿಳೆಯರೂ ಸ್ವಾವಲಂಬಿಯಾಗಿ ಯಾತ್ರೆ ಕೈಗೊಳ್ಳುವ ಅವಕಾಶ ಮಾಡಿದ್ದಾರೆ. ಇದೇ ಕಾರಣಕ್ಕೆ ಪ್ರಸಕ್ತ ವರ್ಷದಲ್ಲಿ 1300 ಮುಸ್ಲಿಂ ಮಹಿಳೆಯರು ಸ್ವತಂತ್ರವಾಗಿ ಯಾತ್ರೆ ಕೈಗೊಳ್ಳಲಿದ್ದಾರೆ.

ಅಷ್ಟೇ ಅಲ್ಲ, ಹಜ್ ಸಬ್ಸಿಡಿ ರದ್ದುಗೊಳಿಸಿ, ಆ ಹಣವನ್ನು ಮುಸ್ಲಿಂ ಮಹಿಳೆಯರ ಶಿಕ್ಷಣಕ್ಕಾಗಿ ಬಳಸಲು ಮುಂದಾಗಿದ್ದಾರೆ. ತ್ರಿವಳಿ ತಲಾಖ್ ರದ್ದುಗೊಳಿಸಿ ಮುಸ್ಲಿಂ ಮಹಿಳೆಯರು ನರಕ ಅನುಭವಿಸುವುದನ್ನು ತಪ್ಪಿಸಲು ಮುಂದಾಗಿದ್ದಾರೆ. ಕೌಶಲ ಅಭಿವೃದ್ಧಿಗಾಗಿ ಮೌಲಾನಾ ಆಜಾದ್  ನ್ಯಾಷನಲ್ ಅಕಾಡೆಮಿ ಸ್ಥಾಪಿಸಿದ್ದಾರೆ. ಗರಿಬ್ ನವಾಜ್ ಕೌಶಲ ಅಭಿವೃದ್ಧಿ ಸಂಸ್ಥೆ ಸ್ಥಾಪಿಸಿದ್ದಾರೆ. ಹೇಳಿ ಮೋದಿ ಸರ್ಕಾರ ಅಲ್ಪಸಂಖ್ಯಾತರ ವಿರೋಧಿಯಾಗಿದ್ದಾರೆ ಇಷ್ಟೆಲ್ಲ ಮಾಡುತ್ತಿತ್ತಾ?

0
Shares
  • Share On Facebook
  • Tweet It




Trending Now
ಬೀದಿನಾಯಿಗಳಿಗೆ ಇನ್ನು ವಿಧಾನಸೌಧದಲ್ಲೇ ವಸತಿ ಕಲ್ಪಿಸಲು ಯೋಜನೆ!
Tulunadu News August 30, 2025
ಹುಬ್ಬಳ್ಳಿಯ ಈದ್ಗಾ ಮೈದಾನವನ್ನು ರಾಣಿ ಚೆನ್ನಮ್ಮ ಮೈದಾನ ಎಂದು ಪಾಲಿಕೆ ಅಧಿಕೃತ ಘೋಷಣೆ!
Tulunadu News August 29, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬೀದಿನಾಯಿಗಳಿಗೆ ಇನ್ನು ವಿಧಾನಸೌಧದಲ್ಲೇ ವಸತಿ ಕಲ್ಪಿಸಲು ಯೋಜನೆ!
    • ಹುಬ್ಬಳ್ಳಿಯ ಈದ್ಗಾ ಮೈದಾನವನ್ನು ರಾಣಿ ಚೆನ್ನಮ್ಮ ಮೈದಾನ ಎಂದು ಪಾಲಿಕೆ ಅಧಿಕೃತ ಘೋಷಣೆ!
    • ಅನುಶ್ರೀ - ರೋಷನ್ ದಾಂಪತ್ಯ ಜೀವನಕ್ಕೆ ನಿಮ್ಮದೂ ಶುಭ ಹಾರೈಕೆ ಇರಲಿ!
    • ಬಸ್ ನಲ್ಲಿ 200 ಕೆಜಿ ಸ್ಫೋಟಕ ಪತ್ತೆ! ತಪ್ಪಿದ ದೊಡ್ಡ ಸಂಚು..
    • ತಿಮರೋಡಿ ಮನೆಯಲ್ಲಿತ್ತು ಮಾಸ್ಕ್ ಮ್ಯಾನ್ ಮೊಬೈಲ್, ತಂಗುತ್ತಿದ್ದ ಕೋಣೆಯ ಸಿಸಿಟಿವಿ ಫೂಟೇಜ್ ವಶಕ್ಕೆ!
    • ಧರ್ಮ ಜಾಗೃತಿ ಯಾತ್ರೆ:  ದೇವರ ಅನುಗ್ರಹದಿಂದ ಸತ್ಯದ ಅನಾವರಣ - ಡಾ. ಹೆಗ್ಗಡೆ 
    • ರಾಜ್ಯ ಬೊಕ್ಕಸ ಖಾಲಿ, ಗ್ಯಾರಂಟಿಗೂ ದುಡ್ಡಿಲ್ಲ - ಸಿಎಂ ರೇವಂತ್ ರೆಡ್ಡಿ
    • ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡುವ ಬಗ್ಗೆ ಪರ - ವಿರೋಧ ಚರ್ಚೆ!
    • ತಿಮರೋಡಿ ಮನೆ ಮೇಲೆ ಬೆಳ್ಳಂಬೆಳಗ್ಗೆ SIT ದಾಳಿ.. ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಆಶ್ರಯ ನೀಡಿದ ಆರೋಪ!
    • ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
  • Popular Posts

    • 1
      ಬೀದಿನಾಯಿಗಳಿಗೆ ಇನ್ನು ವಿಧಾನಸೌಧದಲ್ಲೇ ವಸತಿ ಕಲ್ಪಿಸಲು ಯೋಜನೆ!
    • 2
      ಹುಬ್ಬಳ್ಳಿಯ ಈದ್ಗಾ ಮೈದಾನವನ್ನು ರಾಣಿ ಚೆನ್ನಮ್ಮ ಮೈದಾನ ಎಂದು ಪಾಲಿಕೆ ಅಧಿಕೃತ ಘೋಷಣೆ!
    • 3
      ಅನುಶ್ರೀ - ರೋಷನ್ ದಾಂಪತ್ಯ ಜೀವನಕ್ಕೆ ನಿಮ್ಮದೂ ಶುಭ ಹಾರೈಕೆ ಇರಲಿ!
    • 4
      ಬಸ್ ನಲ್ಲಿ 200 ಕೆಜಿ ಸ್ಫೋಟಕ ಪತ್ತೆ! ತಪ್ಪಿದ ದೊಡ್ಡ ಸಂಚು..
    • 5
      ತಿಮರೋಡಿ ಮನೆಯಲ್ಲಿತ್ತು ಮಾಸ್ಕ್ ಮ್ಯಾನ್ ಮೊಬೈಲ್, ತಂಗುತ್ತಿದ್ದ ಕೋಣೆಯ ಸಿಸಿಟಿವಿ ಫೂಟೇಜ್ ವಶಕ್ಕೆ!

  • Privacy Policy
  • Contact
© Tulunadu Infomedia.

Press enter/return to begin your search