ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ಅಟ್ಟಹಾಸ: ಬಿಜೆಪಿ ಕಾರ್ಯರ್ತನ ಮೇಲೆ ಗುಂಡಿನ ದಾಳಿ
ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಅಧಿಕಾರದಲ್ಲಿರುವ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರ ಅಟ್ಟಹಾಸ ಮಿತಿ ಮೀರಿದ್ದು, ವಿರೋಧ ಪಕ್ಷದ ಕಾರ್ಯಕರ್ತರ ಮೇಲೆ ನಿರಂತರವಾಗಿ ದಾಳಿ ಮುಂದುವರಿಸಲಾಗಿದೆ. ಪಶ್ಚಿಮ ಬಂಗಾಳದಲ್ಲಿ ತಿಂಗಳ ಮಧ್ಯದಲ್ಲೇ ಸುಮಾರ ಇಬ್ಬರು ಬಿಜೆಪಿ ಕಾರ್ಯಕರ್ತರನ್ನು ಕೊಲೆ ನಡೆದಿರುವ ಬೆನ್ನಲ್ಲೇ ಇದೀಗ ಬಿಜೆಪಿ ಕಾರ್ಯಕರ್ತನ ಮೇಲೆ ತೃಣಮೂಲ ಕಾಂಗ್ರೆಸ್ ಕಾರ್ಯರ್ತರು ಗುಂಡಿನ ದಾಳಿ ನಡೆಸಿದ್ದು, ಬಿಜೆಪಿ ಕಾರ್ಯಕರ್ತ ಸಾವು ಬದುಕಿನ ಮಧ್ಯೆ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗ್ರಾಮಪಂಚಾಯಿತಿ ಚುನಾವಣೆಗೂ ಮುನ್ನ ಆರಂಭವಾಗಿರುವ ರಾಜಕೀಯ ಗಲಭೆ, ಹಿಂಸೆಯನ್ನು ತಡೆಯುವಲ್ಲಿ ಪಶ್ಚಿಮ ಬಂಗಾಳ ಸರ್ಕಾರ ವಿಫಲವಾಗಿದ್ದು, ಇದೀಗ ಕುಚ್ ಬಿಹಾರ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತ ನಾರಾಯಣ ಸರ್ಕಾರ ಎಂಬುವರರ ಮೇಲೆ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಗುಂಡಿನ ದಾಳಿ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ನಾರಾಯಣ ಸರ್ಕಾರ ಅವರನ್ನು ಸಿಲಿಗುಡಿಯ ನರ್ಸಿಂಗ್ ಹೋಮ್ ವೊಂದರಲ್ಲಿ ದಾಖಲಿಸಲಾಗಿದೆ.
ದೇಶದಲ್ಲಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ಹೇಳುತ್ತಾ, ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದ ವಿರುದ್ಧ ಕೈ ಮಾಡುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ತಮ್ಮ ರಾಜ್ಯದಲ್ಲೇ ಶಾಂತಿ ಸುವ್ಯವಸ್ಥೆ ಹದಗೆಟ್ಟಿದ್ದು, ನಿಯಂತ್ರಿಸುವಲ್ಲಿ ವಿಫಲರಾಗಿದ್ದಾರೆ. ಒಂದು ತಿಂಗಳಲ್ಲೇ ಮೂವರು ಬಿಜೆಪಿ ಕಾರ್ಯಕರ್ತರ ಮೇಲೆ ಮಾರಣಾಂತಿಕ ಹಲ್ಲೆಗಳಾಗಿವೆ. ಅಲ್ಲದೇ ಅದರಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಇದೀಗ ನಾರಾಯಣ ಸರ್ಕಾರ ಜೀವನ್ಮರಣದ ಮಧ್ಯೆ ಹೋರಾಡುತ್ತಿದ್ದಾರೆ. ತೃಣಮೂಲ ಕಾಂಗ್ರೆಸ್ ನ ಈ ಅಟ್ಟಹಾಸಧ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
Leave A Reply