• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಜಸ್ಥಾನ ಸರ್ಕಾರದ ಕ್ರಾಂತಿಕಾರಿ ನಿರ್ಧಾರ: ಶಾಲೆಗಳಲ್ಲಿ ಸಂತರ ಹಿತೋಪದೇಶ ಕೇಳುವುದು ಕಡ್ಡಾಯ

TNN Correspondent Posted On June 12, 2018
0


0
Shares
  • Share On Facebook
  • Tweet It

ಜೈಪುರ: ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಯ ದೃಷ್ಟಿಯಿಂದ ರಾಜಸ್ಥಾನದ ಬಿಜೆಪಿ ಸರ್ಕಾರ ಕ್ರಾಂತಿಕಾರಿ ನಿಯಮವೊಂದನ್ನು ಜಾರಿಗೆ ತಂದಿದೆ. ವಿದ್ಯಾರ್ಥಿಗಳು ಪ್ರತಿತಿಂಗಳು ಶಾಲೆಗಳಲ್ಲಿ ಸಂತರ ಹಿತೋಪದೇಶವನ್ನು ಕೇಳುವ ನಿಯಮವನ್ನು ಕಡ್ಡಾಯ ಮಾಡುವ ಮೂಲಕ ಕ್ರಾಂತಿಕಾರಿ ನಿರ್ಧಾರ ತೆಗೆದುಕೊಂಡಿದೆ.

ಪ್ರತಿ ತಿಂಗಳ ಮೂರನೇ ಶನಿವಾರ ಶಾಲೆಗಳಲ್ಲಿ ಸಾದು, ಸಂತರ, ತತ್ವಜ್ಞಾನಿಗಳ ದಿವ್ಯ ಸಂದೇಶವನ್ನು ಹೊಂದಿರುವ ಹಿತೋಪದೇಶವನ್ನು ಕೇಳುವ ನಿಯಮ ಜಾರಿಗೆ ತರುವ ಕುರಿತು ಸೆಕೆಂಡರಿ ಎಜುಕೇಷನ್ ನಿರ್ದೇಶಕ ಆದೇಶ ಹೊರಡಿಸಿದ್ದಾರೆ.

ತಿಂಗಳ ಪ್ರಥಮ ಶನಿವಾರ ಒಬ್ಬ ಮಹಾನ್ ಪುರುಷರ, ಸಂತರ ಜೀವನ ಸಂದೇಶವನ್ನು, ಅರಿಯುವುದು, ವಿದ್ಯಾರ್ಥಿಗಳಿಂದ ಮಾದರಿ ಪುರುಷರ ಬಗ್ಗೆ ಭಾಷಣ ಸೇರಿ ನಾನಾ ಕಾರ್ಯಕ್ರಮ ಏರ್ಪಡಿಸುವುದು, ಎರಡನೇ ಶನಿವಾರ  ವಿದ್ಯಾರ್ಥಿಗಳಿಗೆ ಸ್ಫೂರ್ತಿ ನೀಡುವಂತ ಕಥೆಗಳನ್ನು ಹೇಳುವುದು, ಮೌಲ್ಯಾಧಾರಿತ ಜೀವನದ ಪಾಠ ಬೋಧಿಸುವುದು, ನಾಲ್ಕನೇ ಶನಿವಾರ ಪ್ರಶ್ನಾರ್ಥಕ ಕಾರ್ಯಕ್ರಮ ಏರ್ಪಡಿಸುವ ಕುರಿತು ಆದೇಶ ಜಾರಿ ಮಾಡಲಾಗಿದೆ. ಈ ಮೂಲಕ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ ಗಟ್ಟಿ ನಿರ್ಧಾರ ಕೈಗೊಂಡಿದೆ.

ಈ ನಿಯಮ ರಾಜಸ್ಥಾನದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಕೇಂದ್ರೀಯ ಶಾಲೆಗಳಿಗೂ, ತರಬೇತಿ ಶಿಬಿರಗಳು, ವಸತಿ ನಿಲಯಗಳಿಗೆ ಅನ್ವಯವಾಗಲಿದೆ.

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search