• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜೆಎನ್ ಯು ನಲ್ಲಿ ಉಪನ್ಯಾಸ ಏರ್ಪಡಿಸಿ, ನಕ್ಸಲರನ್ನು ಸೃಷ್ಟಿಸಲು ಭೀಮಾಕೋರೆಗಾಂವ್ ಗಲಭೆ ಆರೋಪಿಗಳ ಪ್ಲಾನ್

TNN Correspondent Posted On June 15, 2018
0


0
Shares
  • Share On Facebook
  • Tweet It

ಪುಣೆ: ಮಹಾರಾಷ್ಟ್ರದಲ್ಲಿ ನಡೆದ ಭೀಮಾಕೋರೆಗಾಂವ್ ಗಲಭೆ ಆರೋಪಿಗಳಿಂದ ದೇಶಕ್ಕೆ ಮಾರಕವಾಗುವಂತ ಆಘಾತಕಾರಿ ವಿಷಯಗಳು ಹೊರ ಹೊಮ್ಮುತ್ತಿದ್ದು, ವಿಚಾರಣೆಯಲ್ಲಿ ಇಡೀ ಗಲಭೆಯ ಹಿಂದಿನ ವ್ಯವಸ್ಥಿತ ಸಂಚು ಬಯಲಾಗುತ್ತಿದೆ. ಇದೀಗ ಗಲಭೆ ಆರೋಪದಲ್ಲಿ ಬಂಧಿಸಲಾಗಿರುವ ವ್ಯಕ್ತಿಗಳೇ ಆಘಾತಕಾರಿ ವಿಷಯವೊಂದನ್ನು ಹೊರ ಹಾಕಿದ್ದು, ದೆಹಲಿಯ ಪ್ರತಿಷ್ಟಿತ ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕಗಳನ್ನು ಏರ್ಪಡಿಸಿ, ಯುವ ವಿದ್ಯಾರ್ಥಿಗಳನ್ನು ತಮ್ಮ ಕಾರ್ಯಚಟುವಟಿಕೆಗಳಲ್ಲಿ ಭಾಗಿಯಾಗುವಂತೆ ಪ್ರೇರಣೆ ನೀಡಲು ಸಂಚು ರೂಪಿಸಿದ್ದರು ಎಂದು ತಿಳಿಸಿದ್ದಾರೆ ಎಂದು ಪುಣೆ ಪೊಲೀಸರು ಹೇಳಿದ್ದಾರೆ.

ಗುರುವಾರ ನಾಲ್ವರು ಆರೋಪಿಗಳಾದ ಸುಧೀರ್ ದಾವಲೆ, ಮಹೇಶ್ ರೌತ್, ಶೋಮಾ ಸೇನ್, ರೋನಾ ವಿಲ್ಸನ್ ರನ್ನು ಕೋರ್ಟ್ ಗೆ ಹಾಜರು ಪಡಿಸಿದ್ದು, ಈ ವೇಳೆ ‘ಮೃತ ನಕ್ಸಲರ ಸ್ಮರಣೆ’ (ಪೊಲೀಸರಿಂದ ಹತರಾದ ನಕ್ಸಲರ) ಹೆಸರಲ್ಲಿ ದೆಹಲಿಯ ಜವಾಹರ್ ಲಾಲ್ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸವನ್ನು ಏರ್ಪಡಿಸಿ, ವಿದ್ಯಾರ್ಥಿಗಳನ್ನು ನಕ್ಸಲ ಚಟುವಟಿಕೆಗೆ ತಳ್ಳುವ ಷಡ್ಯಂತ್ರ ನಡೆಸಲು ಯೋಜನೆ ರೂಪಿಸಿದ್ದರು ಎಂಬ ಮಾಹಿತಿ ಹೊರ ಹಾಕಿದ್ದಾರೆ. ಜೆಎನ್ ಯು ವಿದ್ಯಾರ್ಥಿಗಳನ್ನು  ನಿಷೇಧಿತ ನಕ್ಸಲರ ‘ಸಿಪಿಐ (ಮಾವೋಇಸ್ಟ್) ಬಂಡಾಯಕಾರರ’ ಸಂಘಟನೆಗೆ ಸೇರಿಸುವ ಉದ್ದೇಶ ಇದರ ಹಿಂದೆ ಹೊಂದಲಾಗಿತ್ತು ಎನ್ನಲಾಗಿದೆ.

ಈ ಕುರಿತು ಉನ್ನತ ಮಟ್ಟದ ತನಿಖೆ ನಡೆಯಬೇಕು. ಇಂತಹ ಪ್ರಯತ್ನಗಳು ಭಾರತದ ರಕ್ಷಣಾ ವ್ಯವಸ್ಥೆಗೆ ಆಘಾತಕಾರಿಯಾಗಿವೆ ಎಂದು ನ್ಯಾಯಾಲಯ ಅಭಿಪ್ರಾಯ ವ್ಯಕ್ತಪಡಿಸಿದೆ.

ಪಬ್ಲಿಕ್ ಪ್ರಾಸಿಕೂಟರ್ ಉಜ್ವಲ್ ಪವಾರ್ ಈ ಕುರಿತು ಮಾಹಿತಿ ನೀಡಿದ್ದು ‘ಪೊಲೀಸ್ ಎನ್ ಕೌಂಟರ್ ನಲ್ಲಿ ಮೃತಪಟ್ಟಿರುವ ನಕ್ಸಲ್  ನವೀನ್ ಬಾಬು ಸ್ಮರಣೆಯಲ್ಲಿ ಉಪನ್ಯಾಸ ಏರ್ಪಡಿಸಿ, ನಕ್ಸಲರ ಮಾರ್ಗದರ್ಶನಂತೆ ವಿದ್ಯಾರ್ಥಿಗಳನ್ನು ಪ್ರಚೋದನೆಗೆ ಒಳಪಡಿಸಿ, ದೇಶವಿರೋಧಿ ಚಟುವಟಿಕೆಗಳಿಗೆ ಭಾಗಿಯಾಗುವಂತೆ ಮಾಡುವ ಹುನ್ನಾರ ಹೊಂದಿದ್ದರು ಎಂದು ಕೋರ್ಟ್ ಗೆ ಮಾಹಿತಿ ನೀಡಿದ್ದಾರೆ.

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ

  • Privacy Policy
  • Contact
© Tulunadu Infomedia.

Press enter/return to begin your search